• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾವೈರಸ್ ಅಂಟಿದವರೆಲ್ಲ ಸಾವಿನ ಮನೆ ಸೇರುತ್ತಾರೆಯೇ?

|
Google Oneindia Kannada News

ನವದೆಹಲಿ, ಆಗಸ್ಟ್.09: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಂಟೇನ್ಮೆಂಟ್ ಝೋನ್ ಗಳಲ್ಲಿನ ಮುನ್ನೆಚ್ಚರಿಕೆ, ತಪಾಸಣೆ, ಐಸೋಲೇಷನ್ ಮತ್ತು ಚಿಕಿತ್ಸೆ ವಿಧಾನದ ಮೇಲೆ ಹೆಚ್ಚು ನಿಗಾ ವಹಿಸಿದ್ದರಿಂದ ಸಾವಿನ ಪ್ರಮಾಣದಲ್ಲಿ ಮತ್ತಷ್ಟು ಇಳಿಕೆಯಾಗಿದೆ.

ಕೊರೊನಾವೈರಸ್ ಸೋಂಕಿತರಿಗೆ ನೀಡುತ್ತಿರುವ ಚಿಕಿತ್ಸೆ ವಿಧಾನಿಂದಾಗಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾವಿನ ಪ್ರಮಾಣ ಶೇ.2.04ರಷ್ಟು ಇಳಿಕೆಯಾಗಿದೆ. ಭಾರತದಲ್ಲಿ ಕೊವಿಡ್-19 ಸೋಂಕಿತರ ಸಾವಿನ ಪ್ರಮಾಣ ಇದೀಗ 68.32ಕ್ಕೆ ಇಳಿಕೆಯಾಗಿದೆ.

ಕೊರೊನೊವೈರಸ್ ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನಲ್ಲೇ 'ಲಸಿಕೆ' ಸಿದ್ಧ!ಕೊರೊನೊವೈರಸ್ ಸೋಂಕಿತರ ಚಿಕಿತ್ಸೆಗೆ ಬೆಂಗಳೂರಿನಲ್ಲೇ 'ಲಸಿಕೆ' ಸಿದ್ಧ!

ವಿಶ್ವದಲ್ಲಿ ಪ್ರತಿ 10 ಲಕ್ಷ ಜನರಲ್ಲಿ 2425 ಮಂದಿಗೆ ಕೊರೊನಾವೈರಸ್ ಸೋಂಕು ತಗಲಿರುವುದು ಪತ್ತೆಯಾಗಿದೆ. ಭಾರತದಲ್ಲಿ ಈ ಸೋಂಕಿತ ಪ್ರಕರಣಗಳ ಪ್ರಮಾಣವು ಪ್ರತಿ 10 ಲಕ್ಷಕ್ಕೆ 1,469ರಷ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಕೊರೊನಾವೈರಸ್ ಸೋಂಕಿತರ ಸಾವಿನಲ್ಲಿ ಇಳಿಕೆ

ಕೊರೊನಾವೈರಸ್ ಸೋಂಕಿತರ ಸಾವಿನಲ್ಲಿ ಇಳಿಕೆ

ಭಾರತದಲ್ಲಿನ ಪರಿಣಾಮಕಾರಿ ತಪಾಸಣೆ ಮತ್ತು ಸುಧಾರಿತ ಪರೀಕ್ಷೆಯಿಂದ ಕೊರೊನಾವೈರಸ್ ಸೋಂಕು ತಗಲಿರುವುದು ಆರಂಭಿಕ ಹಂತದಲ್ಲಿರುವಾಗಲೇ ಪತ್ತೆ ಹಚ್ಚಲಾಗುತ್ತಿದೆ. ಇದರಿಂದಾಗಿ ಸೋಂಕು ಪತ್ತೆ ಹಚ್ಚುವುದು ಸಾಧ್ಯವಾಗುತ್ತಿದೆ. ಇದರ ಪರಿಣಾಮವಾಗಿ ತೀವ್ರ ಮತ್ತು ನಿರ್ಣಾಯಕ ಪ್ರಕರಣಗಳಲ್ಲಿ ನೀಡಿದ ಸಮಯೋಚಿತ ವೈದ್ಯಕೀಯ ನಿರ್ವಹಣೆಯಿಂದಾಗಿ ಸಾವಿನ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಟಿ-3 ವಿಧಾನ

ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಟಿ-3 ವಿಧಾನ

ಕೊರಾನಾವೈರಸ್ ಸೋಂಕಿತ ಪ್ರಕರಣಗಳ ಇಳಿಕೆಗೆ ಟಿ-3 ವಿಧಾನವೇ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಅಂದರೆ ತಪಾಸಣೆ(Test), ಹುಡುಕಾಟ(Track), ಚಿಕಿತ್ಸೆ(Treat) ವಿಧಾನವನ್ನು ಬಳಸಿಕೊಂಡಿದ್ದರಿಂದ ವಿಶ್ವದಲ್ಲಿ ದಾಖಲಾಗಿರುವ ಸಾವಿನ ಪ್ರಮಾಣಕ್ಕಿಂತ ಭಾರತದಲ್ಲಿ ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಂಡು ಬಂದಿದೆ. ಸಾವಿನ ಪ್ರಮಾಣ ಹಂತಹಂತವಾಗಿ ಕುಸಿಯುತ್ತಿದೆ. ಭಾನುವಾರದ ಅಂಕಿ-ಅಂಶಗಳನ್ನು ಗಮನಿಸಿದಾಗ ಕೊರೊನಾವೈರಸ್ ಸೋಂಕಿತರಲ್ಲಿ ಸಾವಿನ ಪ್ರಮಾಣವು ಶೇಕಡಾ 2.04 ರಷ್ಟಿದೆ. ಜಾಗತಿಕ ಮಟ್ಟಕ್ಕೆ ಹೋಲಿಸಿದರೆ ಭಾರತದಲ್ಲಿ ಪ್ರತಿ 10 ಲಕ್ಷ ಜನರಲ್ಲಿ30ಕ್ಕೆ ಅತಿ ಕಡಿಮೆ ಸಾವಿನ ಪ್ರಕರಣಗಳು ದಾಖಲಿವೆ.

ಸಾವಿನ ಪ್ರಮಾಣ ಯಾವ ರಾಷ್ಟ್ರಗಳಲ್ಲಿ ಎಷ್ಟಿದೆ?

ಸಾವಿನ ಪ್ರಮಾಣ ಯಾವ ರಾಷ್ಟ್ರಗಳಲ್ಲಿ ಎಷ್ಟಿದೆ?

ವಿಶ್ವದಲ್ಲೇ ಕೊರೊನಾವೈರಸ್ ಸೋಂಕಿತರಲ್ಲಿ ಸಾವಿನ ಪ್ರಮಾಣವು ಭಾರತದಲ್ಲಿ ತೀರಾ ಕಡಿಮೆಯಾಗಿದೆ. ಭಾರತಕ್ಕೆ ಹೋಲಿಸಿ ನೋಡಿದಾಗ ಇಂಗ್ಲೆಂಡ್ ನಲ್ಲಿ ಪ್ರತಿ 10 ಲಕ್ಷ ಸೋಂಕಿತರಲ್ಲಿ 684 ಮಂದಿ ಪ್ರಾಣ ಬಿಟ್ಟಿದ್ದಾರೆ. ಈ ಅಂಕಿ-ಸಂಖ್ಯೆಯ ಪ್ರಮಾಣವು ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ 475, ಬ್ರೆಜಿಲ್ 458, ಮೆಕ್ಸಿಕೋದಲ್ಲಿ 385 ಹಾಗೂ ರಷ್ಯಾದಲ್ಲಿ 101ರಷ್ಟಿದೆ ಎಂದು ಆರೋಗ್ಯ ಸಚಿವಾಲಯವು ಮಾಹಿತಿ ನೀಡಿದೆ.

ಯುಎಸ್ಎ ಮತ್ತು ಬ್ರೆಜಿಲ್ ನಲ್ಲಿ ಸೋಂಕಿತರ ಅಂಕಿ-ಸಂಖ್ಯೆ

ಯುಎಸ್ಎ ಮತ್ತು ಬ್ರೆಜಿಲ್ ನಲ್ಲಿ ಸೋಂಕಿತರ ಅಂಕಿ-ಸಂಖ್ಯೆ

ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಮತ್ತು ಬ್ರೆಜಿಲ್ ನಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಬ್ರೆಜಿಲ್ ನಲ್ಲಿ ಪ್ರತಿ ಹತ್ತು ಲಕ್ಷ ಜನಸಂಖ್ಯೆಯಲ್ಲಿ 13,451 ಜನರಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿದೆ. ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ ಪ್ರತಿ 10 ಲಕ್ಷ ಜನರಲ್ಲಿ 14,446 ಮಂದಿಗೆ ಕೊವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ.

ಭಾರತದಲ್ಲಿ ಕೊರೊನಾವೈರಸ್ ಕಂಡೀಷನ್ ಹೇಗಿದೆ?

ಭಾರತದಲ್ಲಿ ಕೊರೊನಾವೈರಸ್ ಕಂಡೀಷನ್ ಹೇಗಿದೆ?

ಕಳೆದ 24 ಗಂಟೆಗಳಲ್ಲೇ ಭಾರತದಲ್ಲಿ 48900 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 14,27,005 ಮಂದಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಗುಣಮುಖ ಪ್ರಕರಣಗಳ ಪ್ರಮಾಣ 68.32ರಷ್ಟಿದೆ. ಭಾರತದಲ್ಲಿ 619088 ಕೊವಿಡ್-19 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಪೈಕಿ ಶೇ.29.64ರಷ್ಟು ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯುವು ಮಾಹಿತಿ ನೀಡಿದೆ. ದೇಶಾದ್ಯಂತ ಇದುವರೆಗೂ ಒಟ್ಟು 2,33,87,171 ಜನರನ್ನು ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ.

English summary
India: Covid-19 Death Rate Downed Further 2.4 Percent.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X