ಭಾರತದಲ್ಲಿ 10 ಕೋಟಿ ಗಡಿ ದಾಟಿದ ಕೊವಿಡ್ 19 ಮಾದರಿ ಪರೀಕ್ಷೆ
ನವದೆಹಲಿ, ಅಕ್ಟೋಬರ್ 23: ಭಾರತದಲ್ಲಿ ಇದುವರೆಗೆ 10 ಕೋಟಿಗೂ ಅಧಿಕ ಮಾದರಿಯನ್ನು ಪರೀಕ್ಷಿಸಲಾಗಿದೆ. ಕಳೆದ 17 ದಿನಗಳಲ್ಲಿ ಪ್ರತಿ ನಿತ್ಯವೂ 10 ಲಕ್ಷ ಮಾದರಿಯ ಪರೀಕ್ಷೆ ನಡೆಸಲಾಗುತ್ತಿತ್ತು ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಇದುವರೆಗೆ ಒಂದು ಮಿಲಿಯನ್ ಜನಸಂಖ್ಯೆಯಲ್ಲಿ 74,000 ಕೊರೊನಾ ಪರೀಕ್ಷೆ ಮಾಡಲಾಗಿದೆ.45 ದಿನಗಳಲ್ಲಿ ಭಾರತದಲ್ಲಿ 5 ಕೋಟಿ ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಸೆಪ್ಟೆಂಬರ್ 8 ರಂದು ಐದು ಕೋಟಿ ಮಾದರಿಯನ್ನು ಪರೀಕ್ಷೆ ಮಾಡಲಾಗಿತ್ತು. ಇದೀಗ ಅಕ್ಟೋಬರ್ 22 ರಂದು 10 ಕೋಟಿ ಮಾದರಿಯಗಳ ಪರೀಕ್ಷೆ ಮುಗಿದಿದೆ.
ಭಾರತದಲ್ಲಿ ಕೊರೊನಾ ಪ್ರಕರಣಗಳ ಇಳಿಕೆಯ ಹಾದಿ ಮುಂದುವರಿದಿದ್ದು, ಸತತ 5 ದಿನಗಳಿಂದ 60 ಸಾವಿರಕ್ಕಿಂತಲೂ ಕಡಿಮೆ ಕೊರೊನಾ ಪ್ರಕರಣಗಳು ದಾಖಲಾಗಿವೆ.

ಶುಕ್ರವಾರ 54,366 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 77,61,312ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಒಂದೇ ದಿನ 690 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,17,306ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇನ್ನು 77,61,312 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 73,979 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಒಟ್ಟಾರೆ 6,95,509 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ದೇಶದಲ್ಲಿ ಪ್ರಸ್ತುತ 6,95,509 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,42,722 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 10,01,13,085 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.












Click it and Unblock the Notifications