ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಶೇ.100ರಷ್ಟು ಪ್ರಜೆಗಳಿಗೆ ಲಸಿಕೆ ವಿತರಿಸಿದ ರಾಜ್ಯಗಳು!?

|
Google Oneindia Kannada News

ನವದೆಹಲಿ, ಸಪ್ಟೆಂಬರ್ 13: ಭಾರತವು ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವೆ ಮನ್ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ 75 ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಿಸಲಾಗಿದ್ದು, ಅದನ್ನು ಭಾರತದ 75 ನೇ ಸ್ವಾತಂತ್ರ್ಯದ ವರ್ಷಕ್ಕೆ ಹೋಲಿಕೆ ಮಾಡುವ ಮೂಲಕ ಸ್ವಾಗತಿಸಿದ್ದಾರೆ.

ದೇಶವು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಕೊವಿಡ್-19 ಲಸಿಕೆ ವಿತರಣೆಯಲ್ಲಿ ಹೊಸ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಿದೆ ಎಂದು ಮಾಂಡವೀಯಾ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ, "ಅಭಿನಂದನೆಗಳು ಭಾರತ! ಸ್ವಾತಂತ್ರ್ಯದ 75 ನೇ ವರ್ಷದಲ್ಲಿ ದೇಶವು 75 ಕೋಟಿ ಲಸಿಕೆಗಳನ್ನು ದಾಟಿದೆ". ಎಂದು ಟ್ವೀಟ್ ಮಾಡಿರುವ ಅವರು #SabkoVaccineMuftVaccine ಮತ್ತು #AazadiKaAmritMahotsav ಹ್ಯಾಶ್‌ಟ್ಯಾಗ್‌ಗಳನ್ನು ಬಳಸಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27,254 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 37,687 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 219 ಜನರು ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ 75 ಕೋಟಿಗೂ ಅಧಿಕ ಮಂದಿಗೆ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯು ಹೊಸ ಮೈಲಿಗಲ್ಲು ಸ್ಥಾಪಿಸಿದ್ದು, ಈವರೆಗೂ 75,10,41,391 ಮಂದಿಗೆ ಲಸಿಕೆಯನ್ನು ವಿತರಿಸಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 67,04,768 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಇದುವರೆಗೂ 56,95,77,696 ಮಂದಿಗೆ ಮೊದಲ ಡೋಸ್ ಹಾಗೂ 18,14,63,695 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಕೊರೊನಾವೈರಸ್ ಕಾರಣ: ಮರಣ ಪ್ರಮಾಣಪತ್ರ ನೀಡುವುದಕ್ಕೂ ಮಾರ್ಗಸೂಚಿ!ಕೊರೊನಾವೈರಸ್ ಕಾರಣ: ಮರಣ ಪ್ರಮಾಣಪತ್ರ ನೀಡುವುದಕ್ಕೂ ಮಾರ್ಗಸೂಚಿ!

ಅರ್ಹ ಫಲಾನುಭವಿಗಳಿಗೆ ಶೇ.100ರಷ್ಟು ಲಸಿಕೆ ವಿತರಣೆ

ಅರ್ಹ ಫಲಾನುಭವಿಗಳಿಗೆ ಶೇ.100ರಷ್ಟು ಲಸಿಕೆ ವಿತರಣೆ

ಭಾರತದಲ್ಲಿ ಏಳು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಶೇ.100ರಷ್ಟು ಅರ್ಹ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸುವಲ್ಲಿ ಯಶಸ್ವಿಯಾಗಿವೆ. ಸಿಕ್ಕಿಂ, ಹಿಮಾಚಲ ಪ್ರದೇಶ, ಗೋವಾ, ದಾದ್ರಾ ಮತ್ತು ನಗರ್ ಹವೇಲಿ, ಲಡಾಖ್ ಮತ್ತು ಲಕ್ಷ್ಮದ್ವೀಪಗಳು ತಮ್ಮ ಎಲ್ಲ ಅರ್ಹ ಪ್ರಜೆಗಳಿಗೆ ಲಸಿಕೆ ವಿತರಿಸುವಲ್ಲಿ ಯಶಸ್ವಿಯಾಗಿವೆ.

ಗಣನೀಯ ಪ್ರಮಾಣದಲ್ಲಿ ಲಸಿಕೆ ವಿತರಣೆ ಏರಿಕೆ

ಗಣನೀಯ ಪ್ರಮಾಣದಲ್ಲಿ ಲಸಿಕೆ ವಿತರಣೆ ಏರಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ದೇಶದಲ್ಲಿ ಮೊದಲು 85 ದಿನಗಳಲ್ಲಿ 10 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿತ್ತು. ಅಲ್ಲಿಂದ 45 ದಿನಗಳಲ್ಲೇ ಲಸಿಕೆ ವಿತರಣೆಯು 20 ಕೋಟಿ ಗಡಿ ದಾಟಿತು. ನಂತರದ 29 ದಿನಗಳಲ್ಲಿ ಲಸಿಕೆ ವಿತರಣೆ ಪ್ರಮಾಣವು 30 ಕೋಟಿ ಆಯಿತು. ತದನಂತರದಲ್ಲಿ ಕೇವಲ 13 ದಿನಗಳಲ್ಲೇ 40 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದ್ದು, ಒಟ್ಟು ಲಸಿಕೆ ವಿತರಣೆಯು 70 ಕೋಟಿ ಗಡಿ ದಾಟಿತ್ತು.

ದೇಶದಲ್ಲಿ ಲಸಿಕೆ ವಿತರಣೆಗೆ ಗುರಿ ನಿಗದಿಪಡಿಸಿಕೊಂಡ ಸರ್ಕಾರ

ದೇಶದಲ್ಲಿ ಲಸಿಕೆ ವಿತರಣೆಗೆ ಗುರಿ ನಿಗದಿಪಡಿಸಿಕೊಂಡ ಸರ್ಕಾರ

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ಶುರುವಾಗುವುದಕ್ಕೂ ಮೊದಲೇ ಶೇ.60ರಷ್ಟು ಮಂದಿಗೆ ಲಸಿಕೆಯನ್ನು ವಿತರಿಸುವ ಗುರಿ ಹಾಕಿಕೊಳ್ಳಲಾಗಿದೆ. ಲಸಿಕೆ ವಿತರಣೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದರ ಮೂಲಕ ಮೂರನೇ ಅಲೆಯನ್ನು ನಿಯಂತ್ರಿಸುವಕ್ಕೆ ಸರ್ಕಾರ ಯೋಜನೆ ರೂಪಿಸಿದೆ. ಡಿಸೆಂಬರ್ 31ರ ಹೊತ್ತಿದೆ ದೇಶದಲ್ಲಿರುವ ಎಲ್ಲ ಅರ್ಹ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸುವುದಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಗುರಿ ಹೊಂದಿದೆ.

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,64,684 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 86,11,479 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,38,713 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,41,01,351 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 30,26,12,416 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 4,52,87,346 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 14,45,93,468 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,37,26,534 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 56,95,77,696 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 18,14,63,695 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆಯ ಪೂರೈಕೆ ಕುರಿತು ಮಾಹಿತಿ

ಕೊರೊನಾವೈರಸ್ ಲಸಿಕೆಯ ಪೂರೈಕೆ ಕುರಿತು ಮಾಹಿತಿ

2021ರ ಸೆಪ್ಟೆಂಬರ್ 13ರ ಅಂಕಿ-ಅಂಶಗಳ ಪ್ರಕಾರ, 72,70,48,325 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 72,70,48,325

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 8,25,000

* ಕೊವಿಡ್-19 ಲಸಿಕೆಯ ಲಭ್ಯತೆ - 4,90,36,525

English summary
India Crosses 75 Cr Coronavirus Vaccine Doses, Health Minister Mansukh Mandaviya Links to 75 Years of Independence.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X