ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸ ದಾಖಲೆ: ಭಾರತದಲ್ಲಿ 1 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ನವದೆಹಲಿ, ಫೆಬ್ರವರಿ.19: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಕೇವಲ 34 ದಿನಗಳಲ್ಲೇ 1 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಜನವರಿ.16ರಂದು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಕಡಿಮೆ ದಿನಗಳಲ್ಲಿ ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ಜಗತ್ತಿನ 2ನೇ ರಾಷ್ಟ್ರ ಭಾರತವಾಗಿದೆ. ಅಮೆರಿಕಾ ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

ಕೊರೊನಾ ಮತ್ತು ಅಪೌಷ್ಠಿಕತೆಯಿಂದ ಕ್ಷಯ ರೋಗದ ಅಪಾಯ! ಕೊರೊನಾ ಮತ್ತು ಅಪೌಷ್ಠಿಕತೆಯಿಂದ ಕ್ಷಯ ರೋಗದ ಅಪಾಯ!

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

1 ಕೋಟಿಗೂ ಹೆಚ್ಚು ಜನರಿಗೆ ಕೊರೊನಾವೈರಸ್ ಲಸಿಕೆ

1 ಕೋಟಿಗೂ ಹೆಚ್ಚು ಜನರಿಗೆ ಕೊರೊನಾವೈರಸ್ ಲಸಿಕೆ

ಜಗತ್ತಿನಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅತಿಹೆಚ್ಚು ಜನರಿಗೆ ಕೊರೊನಾವೈರಸ್ ಲಸಿಕೆ ನೀಡಿದ ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ. ಅಮೆರಿಕಾ 31 ದಿನಗಳಲ್ಲಿ ಒಂದು ಕೋಟಿ ಜನರಿಗೆ ಕೊವಿಡ್-19 ಲಸಿಕೆ ನೀಡಿದರೆ, ಭಾರತ 34 ದಿನಗಳಲ್ಲಿ 1 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಮೂರನೇ ಸ್ಥಾನದಲ್ಲಿರುವ ಇಂಗ್ಲೆಂಡ್ ಕೂಡಾ 56 ದಿನಗಳಲ್ಲಿ ಒಂದು ಕೋಟಿಗೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ?

ದೇಶದಲ್ಲಿ ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ?

ಭಾರತದಲ್ಲಿ ಜನವರಿ.16ರಂದು ಕೊರೊನಾವೈರಸ್ ಲಸಿಕೆ ವಿತರಣೆ ಮೊದಲ ಅಭಿಯಾನ ಆರಂಭವಾಗಿದ್ದು, ಈವರೆಗೂ 1,01,88,007 ಮಂದಿಗೆ ಲಸಿಕೆ ನೀಡಲಾಗಿದೆ. 62,60,242 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 6,10,899 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 33,16,866 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ.

7 ರಾಜ್ಯದಲ್ಲಿ ಶೇ.61ರಷ್ಟು ಜನರಿಗೆ ಎರಡನೇ ಹಂತದ ಲಸಿಕೆ

7 ರಾಜ್ಯದಲ್ಲಿ ಶೇ.61ರಷ್ಟು ಜನರಿಗೆ ಎರಡನೇ ಹಂತದ ಲಸಿಕೆ

ದೇಶದಲ್ಲಿ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಿ 28 ದಿನಗಳ ನಂತರದ ಎರಡನೇ ಡೋಸ್ ಲಸಿಕೆ ನೀಡಲಾಗುತ್ತಿದೆ. ಭಾರತದ 7 ರಾಜ್ಯಗಳಲ್ಲಿ ಶೇ.61ರಷ್ಟು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ತೆಲಂಗಾಣ - 73281, ಹಿಮಾಚಲ ಪ್ರದೇಶ - 68031, ಕರ್ನಾಟಕ -63533, ಒಡಿಶಾ - 53401, ಆಂಧ್ರ ಪ್ರದೇಶ -51996, ಬಿಹಾರ - 33,419, ಮತ್ತು ಗುಜರಾತ್ -28047 ಮಂದಿ ಫಲಾನುಭವಿಗಳಿಗೆ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ.

ಭಾರತದಲ್ಲಿ 13,193 ಜನರಿಗೆ ಕೊರೊನಾವೈರಸ್

ಭಾರತದಲ್ಲಿ 13,193 ಜನರಿಗೆ ಕೊರೊನಾವೈರಸ್

ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ 13 ಸಾವಿರದ ಗಡಿ ದಾಡಿದೆ. ಕಳೆದ 24 ಗಂಟೆಗಳಲ್ಲೇ 13,193 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1,09,63,394ಕ್ಕೆ ಏರಿಕೆಯಾಗಿದೆ. ಒಂದೇ ದಿನ 97 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಸಾವಿನ ಸಂಖ್ಯೆ 1,56,111ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಒಟ್ಟು 1,39,542 ಸಕ್ರಿಯ ಪ್ರಕರಣಗಳಿವೆ.

ದೇಶದ 6 ರಾಜ್ಯಗಳಲ್ಲಿ ಶೇ.83ರಷ್ಟು ಮಂದಿ ಡಿಸ್ಚಾರ್ಜ್

ದೇಶದ 6 ರಾಜ್ಯಗಳಲ್ಲಿ ಶೇ.83ರಷ್ಟು ಮಂದಿ ಡಿಸ್ಚಾರ್ಜ್

ದೇಶದಲ್ಲಿ ಕೊರೊನಾವೈರಸ್ ಸೋಂಕಿತರ ಗುಣಮುಖರ ಪ್ರಮಾಣ ಶೇ.97.30ರಷ್ಟಿದೆ. ಆರು ರಾಜ್ಯಗಳಲ್ಲಿ ಗುಣಮುಖರ ಸಂಖ್ಯೆ ಶೇ.83.15ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 10,896 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಈವರೆಗೂ 1,06,67,741 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಪೈಕಿ ಆರು ರಾಜ್ಯಗಳಲ್ಲೇ ಶೇ.83ರಷ್ಟು ಸೋಂಕಿತರು ಗುಣಮುಖರಾಗಿದ್ದಾರೆ. ಕೇರಳ - 5193, ಮಹಾರಾಷ್ಟ್ರ - 2543, ತಮಿಳುನಾಡು - 470, ಕರ್ನಾಟಕ - 306, ಛತ್ತೀಸ್ ಗಢ - 278, ಗುಜರಾತ - 270 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ.

English summary
India Crosses A Milestone: More Than 1 Crore People Has Got Vaccine Against Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X