ಭಾರತದ 18 ರಾಜ್ಯಗಳಲ್ಲಿ ರೂಪಾಂತರ ಕೊರೊನಾವೈರಸ್ ಪತ್ತೆ

ನವದೆಹಲಿ, ಮಾರ್ಚ್ 24: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಗೆ ಭಾರತೀಯರು ಬೆಚ್ಚಿ ಬೀಳುವಂತಾ ಸ್ಥಿತಿ ನಿರ್ಮಾಣವಾಗಿದೆ. ಇದರ ಮಧ್ಯೆ ದೇಶದ 18 ರಾಜ್ಯಗಳಲ್ಲಿ ಹೊಸ ತಳಿಯ ಕೊವಿಡ್-19 ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ.

ಕೊರೊನಾವೈರಸ್ ಸೋಂಕಿನ "ರೂಪಾಂತರ ರೋಗಾಣು"ವನ್ನು ದೇಶದ 18 ರಾಜ್ಯಗಳಲ್ಲಿ ಪತ್ತೆ ಮಾಡಲಾಗಿದೆ. ಇದರ ಜೊತೆಗೆ ವಿದೇಶಗಳಲ್ಲಿ ಕಂಡು ಬರುತ್ತಿರುವ ಕೊವಿಡ್-19 ಸೋಂಕಿನ ವಿವಿಧ ತಳಿಯ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕಳವಳ ವ್ಯಕ್ತಪಡಿಸಿದೆ.

"ಭಾರತದಲ್ಲಿ ಬೇರೆ ತಳಿಯ ಕೊರೊನಾವೈರಸ್ ಸೋಂಕಿನ ರೋಗಾಣುಗಳು ಪತ್ತೆಯಾಗಿವೆ. ಆದರೆ ನೇರವಾಗಿ ಸೋಂಕು ಹರಡಿರುವ ಬಗ್ಗೆ ಮತ್ತು ತ್ವರಿತ ಗತಿಯಲ್ಲಿ ಅದೇ ರೋಗಾಣುಗಳಿಂದ ಸೋಂಕು ಹರಡುವ ಬಗ್ಗೆ ಯಾವುದೇ ಸ್ಪಷ್ಟತೆ ಸಿಕ್ಕಿಲ್ಲ. ಈ ರೋಗಾಣುಗಳಿಂದ ಕ್ಷಿಪ್ರಗತಿಯಲ್ಲಿ ಸೋಂಕು ಹರಡುತ್ತದೆ ಎಂಬುದು ಖಾತ್ರಿಯಾಗಿಲ್ಲ ಎಂದು ಆರೋಗ್ಯ ಸಚಿವಾಲಯವು ಸ್ಪಷ್ಟಪಡಿಸಿದೆ.

India Detects Novel Variant Of Covid-19 In 18 States, Says Health Ministry

ಭಾರತದಲ್ಲಿ ಆತಂಕ ಸೃಷ್ಟಿಸಿದ ಕೊರೊನಾವೈರಸ್:

ದೇಶದಲ್ಲಿ ಒಂದೇ ದಿನ 47262 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 23,907 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಂದೇ ದಿನ 275 ಜನರು ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು 1,17,34,058 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಈವರೆಗೂ 1,12,05,160 ಸೋಂಕಿತರು ಗುಣಮುಖರಾಗಿದ್ದು, ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆ 1,60,441ಕ್ಕೆ ಏರಿಕೆಯಾಗಿದೆ. ಉಳಿದಂತೆ 3,68,457 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ತಪಾಸಣೆ ವೇಗ ಹೆಚ್ಚಳ:

ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆ ತಪಾಸಣೆ ವೇಗವನ್ನು ಹೆಚ್ಚಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 10,25,628 ಜನರಿಗೆ ಕೊವಿಡ್-19 ತಪಾಸಣೆ ಮಾಡಲಾಗಿದೆ. ದೇಶದಲ್ಲಿ ಈವರೆಗೂ 23,64,38,861 ಜನರಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+