ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ: ಭಾರತದ 2ನೇ ಅಭಿಯಾನದಲ್ಲಿ ಸಾರ್ವಜನಿಕರಿಗೂ ಲಸಿಕೆ

|
Google Oneindia Kannada News

ನವದೆಹಲಿ, ಫೆಬ್ರವರಿ.28: ಭಾರತದಲ್ಲಿ ಕೊರೊನಾವೈರಸ್ ಸೋಂಕಿಗೆ ಆರೋಗ್ಯ ಕಾರ್ಯಕರ್ತರು ಮತ್ತು ಕಾರ್ಮಿಕರ ಬೆನ್ನಲ್ಲೇ ಇದೀಗ ಸಾರ್ವಜನಿಕರಿಗೂ ಲಸಿಕೆ ನೀಡುವುದಕ್ಕೆ ಹೊಸ ಅಭಿಯಾಿನ ಮಾರ್ಚ್.01ರಿಂದ ಆರಂಭವಾಗಲಿದೆ.

ಕೊ-ವಿನ್ ಅಪ್ಲಿಕೇಷನ್ ಮೂಲಕ ಕೊವಿಡ್-19 ಲಸಿಕೆ ಪಡೆದುಕೊಳ್ಳುವುದಕ್ಕೆ ಸಾರ್ವಜನಿಕರು ತಮ್ಮ ಹೆಸರು ನೋಂದಾಯಿಸಬೇಕು. ಸೋಮವಾರ ಬೆಳಗ್ಗೆ 9 ಗಂಟೆಯಿಂದಲೇ ಹೆಸರು ನೋಂದಾವಣೆಗೆ ಅನುಮತಿ ನೀಡಲಾಗಿದೆ. ಕೊ-ವಿನ್ ಎಂಬುದು ಹೊಸ ಅಪ್ಲಿಕೇಷನ್ ಅಲ್ಲ. ಈ ಮೊದಲು ಆರೋಗ್ಯ ಕಾರ್ಯಕರ್ತರಿಗೆ ನೀಡಲು ಬಳಸಿದ್ದ ಅಪ್ಲಿಕೇಷನ್ ಅನ್ನೇ ಅಪ್ ಡೇಟ್ ಮಾಡಲಾಗಿದೆ. ಈ ಬಾರಿ ಎರಡನೇ ಹಂತದಲ್ಲಿ 27 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡುವುದಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ.

ಕಳೆದ ಜನವರಿ.16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಅದಾಗಿ ಫೆಬ್ರವರಿ.2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು. ಇದೀಗ ಎರಡನೇ ಹಂತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯ ಅಭಿಯಾನವನ್ನು ಆರಂಭಿಸಲಾಗುತ್ತದೆ. ಸಾರ್ವಜನಿಕರು ಹೇಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಅದಕ್ಕೆ ಯಾವ ರೀತಿ ನಿಯಮಗಳನ್ನು ಅನುಸರಿಸಬೇಕು ಎನ್ನುವುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

Co-Win 2.0 ಅಪ್ಲಿಕೇಷನ್ ಬಳಕೆ ಬಗ್ಗೆ ಮಾಹಿತಿ

Co-Win 2.0 ಅಪ್ಲಿಕೇಷನ್ ಬಳಕೆ ಬಗ್ಗೆ ಮಾಹಿತಿ

  • Co-Win ಅಪ್ಲಿಕೇಷನ್ ನಲ್ಲಿ ಅನುಮತಿ ಪಡೆಯುವುದಕ್ಕೆ ಮೂರು ಮಾರ್ಗಗಳಿವೆ. ಮೊದಲು Cowin.gov.in ವೆಬ್ ಸೈಟ್ ಗೆ ಭೇಟಿ ನೀಡಿ. ಅಲ್ಲಿ Self-Registration ಮೇಲೆ ಕ್ಲಿಕ್ ಮಾಡಿ.
  • ಆರೋಗ್ಯ ಸೇತು ಅಪ್ಲಿಕೇಶನ್ ಮತ್ತು ಪ್ರತ್ಯೇಕ ಟ್ಯಾಬ್ ಮೂಲಕ ಅಪ್ಲಿಕೇಶನ್ ಅನ್ನು ಪ್ರವೇಶಿಸಬಹುದು.
  • ಅಪ್ಲಿಕೇಶನ್ ಅನ್ನು Google Play ಸ್ಟೋರ್ ನಿಂದ ಡೌನ್‌ಲೋಡ್ ಮಾಡಬಹುದು.
  • ಇಂಟರ್ನೆಟ್ ಮೂಲಕ ಹೆಸರು ನೋಂದಣಿ ಸಾಧ್ಯವಾಗದಿದ್ದರೆ, ಸ್ಥಳದಲ್ಲೇ ಹೆಸರು ನೋಂದಾಯಿಸಲು ಅನುಮತಿ ನೀಡಲಾಗಿದೆ. ಎಲ್ಲಾ ಫಲಾನುಭವಿಗಳು ಅರ್ಜಿಯಲ್ಲಿ ಕಡ್ಡಾಯವಾಗಿ ನೋಂದಾಯಿಸಲಾಗುತ್ತದೆ.
  • ಸ್ವಯಂಪ್ರೇರಿತರಾಗಿ ಸರ್ಕಾರಿ ಗುರುತಿನ ಚೀಟಿ ಮೂಲಕ ಹೆಸರು ನೋಂದಾಯಿಸಿಕೊಳ್ಳಲು ಓಟಿಪಿ ಮೂಲಕ ದೃಢೀಕರಿಸಲಾಗುತ್ತದೆ.
  • Co-Win ಅಪ್ಲಿಕೇಶನ್ ಮೂಲಕ ಒಂದು ಕುಟುಂಬ ನಾಲ್ವರು ಸದಸ್ಯರ ಹೆಸರನ್ನು ನೋಂದಾಯಿಸಬಹುದು.
  • ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡಿರುವ ಬಗ್ಗೆ ಅಪ್ಲಿಕೇಷನ್ ಮೂಲಕವೇ ಪ್ರಮಾಣಪತ್ರವನ್ನು ನೀಡಲಾಗುತ್ತದೆ.
250 ರೂಪಾಯಿಗೆ 1 ಡೋಸ್ ಲಸಿಕೆಗೆ 250 ರೂ.

250 ರೂಪಾಯಿಗೆ 1 ಡೋಸ್ ಲಸಿಕೆಗೆ 250 ರೂ.

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ಟ್ರಾಜೆನಿಕ್ ಸಂಸ್ಥೆ ಸಂಶೋಧಿಸಿರುವ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದನೆ ಆಗುತ್ತಿರುವ ಕೊವಿಶೀಲ್ಡ್ ಲಸಿಕೆಯನ್ನು ದೇಶಾದ್ಯಂತ ವಿತರಣೆ ಮಾಡಲಾಗುತ್ತಿದೆ. ಮಾರ್ಚ್.01ರಿಂದ ಕೊವಿಶೀಲ್ಡ್ ಲಸಿಕೆಯ ಒಂದು ಡೋಸ್ ಗೆ 250 ರೂಪಾಯಿ ನಿಗದಿಗೊಳಿಸಲಾಗಿದೆ. ಎರಡು ಡೋಸ್ ಲಸಿಕೆ ಪಡೆಯಲು 500 ರೂಪಾಯಿ ಬೆಲೆ ನಿಗದಿಗೊಳಿಸಲಾಗಿದೆ.

ದೇಶದಲ್ಲಿ ಈವರೆಗೂ ಎಷ್ಟು ಮಂದಿಗೆ ಕೊವಿಡ್-19 ಲಸಿಕೆ?

ದೇಶದಲ್ಲಿ ಈವರೆಗೂ ಎಷ್ಟು ಮಂದಿಗೆ ಕೊವಿಡ್-19 ಲಸಿಕೆ?

ದೇಶದಲ್ಲಿ ಈವರೆಗೂ 1,43,01,266 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

ಕೊವಿಡ್-19 ಸೋಂಕಿತ ಪ್ರಕರಣಗಳ ಅಂಕಿ-ಸಂಖ್ಯೆ

ಕೊವಿಡ್-19 ಸೋಂಕಿತ ಪ್ರಕರಣಗಳ ಅಂಕಿ-ಸಂಖ್ಯೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 16752 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 1,10,96,731ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 113 ಜನರು ಮಹಾಮಾರಿಗೆ ಪ್ರಾಣ ಬಿಟ್ಟಿದ್ದರೆ, ಒಟ್ಟು ಸಾವಿನ ಸಂಖ್ಯೆ 1,57,051ಕ್ಕೆ ಏರಿಕೆಯಾಗಿದೆ. ಇನ್ನು, 24 ಗಂಟೆಗಳಲ್ಲಿ 11,718 ಸೋಂಕಿತರು ಗುಣಮುಖರಾಗಿದ್ದು, ದೇಶದಲ್ಲಿ ಈವರೆಗೂ 1,07,75,169 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಭಾರತದಲ್ಲಿ ಒಟ್ಟು ಕೊರೊನಾವೈರಸ್ ಪ್ರಕರಣಗಳ ಪೈಕಿ ಶೇ.1.48ರಷ್ಟು ಸಕ್ರಿಯ ಪ್ರಕರಣಗಳಿದ್ದು, 1,64,511 ಸಕ್ರಿಯ ಕೊವಿಡ್-19 ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

English summary
India Enters 2nd Phase Of Coronavirus Vaccination: Co-Win Registration Starts From March 1st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X