• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜೂ.30ರವರೆಗೆ ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧ ವಿಸ್ತರಣೆ

|

ನವದೆಹಲಿ, ಮೇ 28: ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲಿನ ನಿರ್ಬಂಧವನ್ನು ಜೂನ್ 30ರವರೆಗೂ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಈ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ ಸುತ್ತೋಲೆ ಹೊರಡಿಸಿದ್ದು, ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನ ಸೇವೆಗಳ ಮೇಲಿನ ನಿರ್ಬಂಧವನ್ನು ಜೂನ್ 30ರವರೆಗೂ ಮುಂದುವರೆಸುವುದಾಗಿ ಮಾಹಿತಿ ನೀಡಿದೆ.

ಏಪ್ರಿಲ್ 1 ರಿಂದ ದುಬಾರಿಯಾಗಲಿದೆ ವಿಮಾನಯಾನ ಟಿಕೆಟ್ ದರಏಪ್ರಿಲ್ 1 ರಿಂದ ದುಬಾರಿಯಾಗಲಿದೆ ವಿಮಾನಯಾನ ಟಿಕೆಟ್ ದರ

ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರೀಕ್ಷಿತ ಮಟ್ಟದಲ್ಲಿ ತಗ್ಗಿಲ್ಲದ ಕಾರಣ ಈಗಿರುವ ಅಂತರರಾಷ್ಟ್ರೀಯ ವಿಮಾನ ಸಂಚಾರದ ನಿರ್ಬಂಧ ವಿಸ್ತರಿಸಲಾಗಿದೆ. ಈ ಮುನ್ನ ಮೇ 31ರವರೆಗೆ ನಿರ್ಬಂಧ ಹೇರಲಾಗಿತ್ತು. ಭಾರತದಿಂದ ಹೊರಡುವ ಹಾಗೂ ಭಾರತಕ್ಕೆ ಬರುವ ಅಂತರರಾಷ್ಟ್ರೀಯ ವಿಮಾನಗಳಿಗೆ ನಿರ್ಬಂಧ ಇರುವುದಾಗಿ ತಿಳಿಸಿದೆ. ಈ ನಿರ್ಬಂಧ ಅಂತರರಾಷ್ಟ್ರೀಯ ಕಾರ್ಗೋ ವಿಮಾನಗಳಿಗೆ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದಿಂದ ಅನುಮತಿ ಪಡೆದ ನಿರ್ದಿಷ್ಟ ವಿಮಾನಗಳಿಗೆ ಅನ್ವಯಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಅನಿವಾರ್ಯ ಸಂದರ್ಭಗಳಲ್ಲಿ ಆಯ್ದ ದೇಶಗಳಿಗೆ ಆದ್ಯತೆ ಮೇಲೆ ಸಂಚರಿಸಲು ಕೆಲವು ವಿಮಾನಗಳಿಗೆ ಅನುವು ಮಾಡಿಕೊಡುವುದಾಗಿ ಹೇಳಿದೆ.

English summary
India extends international commercial flight ban till June 30,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X