ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

20 ಕುದುರೆಗಳನ್ನು ಬಾಂಗ್ಲಾದೇಶ ಸೈನ್ಯಕ್ಕೆ ಉಡುಗೊರೆಯಾಗಿ ನೀಡಿದ ಭಾರತ

|
Google Oneindia Kannada News

ನವದೆಹಲಿ, ನವೆಂಬರ್ 11: ಭಾರತೀಯ ಸೇನೆಯು ಬಾಂಗ್ಲಾದೇಶ ಸೇನೆಗೆ 20 ಮಿಲಿಟರಿ ಕುದುರೆಗಳು ಹಾಗೂ 10 ಶ್ವಾನಗಳನ್ನು ಉಡುಗೊರೆಯಾಗಿ ನೀಡಿದೆ.

ಪೆಟ್ರಾಫೋಲ್ ಬೆನಾಪೋಲ್ ಇಂಟಿಗ್ರೇಟೆಡ್ ಪೋಸ್ಟ್ ಬಳಿ ಬಾಂಗ್ಲಾದೇಶ ಸೇನೆಯ ನಿಯೋಗ ಭಾರತೀಯ ಸೇನೆಯಿಂದ ಈ ಉಡುಗೊರೆಯನ್ನು ಸ್ವೀಕರಿಸಿದೆ. ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸ್ನೇಹ ಸೌಹಾರ್ದವೃದ್ಧಿಗೆ ಈ ಉಡುಗೊರೆ ಸಹಾಯಕಾರಿಯಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತದೆ.

ಭಾರತೀಯ ಸೇನೆ ಪಶುವೈದ್ಯಕೀಯ ಮತ್ತು ರಿಮೌಂಟ್ ದಳ ನೆಲಬಾಂಬ್‍ಗಳನ್ನು ಪತ್ತೆ ಹಚ್ಚುವ ತರಬೇತಿ ಪಡೆದಿರುವ 20 ಮಿಲಿಟರಿ ಕುದುರೆ ಮತ್ತು 10 ಶ್ವಾನಗಳನ್ನು ಬಾಂಗ್ಲಾದೇಶ ಸೈನ್ಯಕ್ಕೆ ಭಾರತೀಯ ಸೇನೆ ಉಡುಗೊರೆಯಾಗಿ ನೀಡಿದೆ. ಕಳೆದ ವರ್ಷ ಭಾರತ 10 ಶ್ವಾನಗಳನ್ನು ಬಾಂಗ್ಲಾದೇಶಕ್ಕೆ ಉಡುಗೊರೆಯಾಗಿ ನೀಡಿತ್ತು.

India Gifts 20 Horses, 10 Mine Detection Dogs To Bangladesh Army

ಭಾರತೀಯ ಸೇನಾ ನಿಯೋಗವನ್ನು ಬ್ರಹ್ಮಾಸ್ತ್ರ ಕಾಪ್ಸ್ ಮುಖ್ಯಸ್ಥ ಮೇಜರ್ ಜನರಲ್ ನರಿಂದರ್ ಸಿಂಗ್ ಕ್ರೌಡ್ ನೇತೃತ್ವದಲ್ಲಿ ಕುದುರೆ ಮತ್ತು ಶ್ವಾನಗಳನ್ನು ಬಾಂಗ್ಲಾದೇಶ ಸೇನೆಗೆ ನೀಡಲಾಯಿತು.

ಬಾಂಗ್ಲಾದೇಶ ಸೇನಾ ನಿಯೋಗವನ್ನು ಜೆಸ್ಸೋರ್ ಮೂಲದ ವಿಭಾಗದ ಕಮಾಂಡಿಂಗ್ ಮಾಡುತ್ತಿರುವ ಮೇಜರ್ ಜನರಲ್ ಮೊಹಮ್ಮದ್ ಹುಮಾಯೂನ್ ಕಬೀರ್ ನೇತೃತ್ವ ವಹಿಸಿದ್ದರು.

English summary
India on Tuesday gifted 20 fully trained military horses and 10 mine detection dogs to the Bangladesh Army. These were trained by the Remount and Veterinary corps of the Indian Army.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X