ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

4 ಮಿಲಿಯನ್‌ ದಾಟಿದ ಭಾರತದ ಕೋವಿಡ್ ಸೋಂಕಿತರ ಸಂಖ್ಯೆ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 04: ವಿಶ್ವದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ದೇಶಗಳ ಪಟ್ಟಿಯಲ್ಲಿ ಭಾರತ 3ನೇ ಸ್ಥಾನದಲ್ಲಿದೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 4 ಮಿಲಿಯನ್ ಗಡಿ ದಾಟಿದೆ.

ಶುಕ್ರವಾರ ದೇಶದಲ್ಲಿ 83,341 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 40,14,744ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 8,43,278.

ಕರ್ನಾಟಕದಲ್ಲಿ 9,280 ಹೊಸ ಕೋವಿಡ್ ಪ್ರಕರಣ ದಾಖಲು ಕರ್ನಾಟಕದಲ್ಲಿ 9,280 ಹೊಸ ಕೋವಿಡ್ ಪ್ರಕರಣ ದಾಖಲು

ಅಮೆರಿಕ (6,351,246), ಬ್ರೆಜಿಲ್ (4,054,474) ಹೊರತುಪಡಿಸಿದರೆ ವಿಶ್ವದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ದೇಶ ಭಾರತವಾಗಿದೆ. ದೇಶದಲ್ಲಿ ಪ್ರತಿದಿ 80 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲಾಗುತ್ತಿದೆ.

ಮಹಾರಾಷ್ಟ್ರದಲ್ಲಿದ್ದಾರೆ ಪೆರು ದೇಶಕ್ಕಿಂತ ಹೆಚ್ಚು ಕೊರೊನಾ ಸೋಂಕಿತರು ಮಹಾರಾಷ್ಟ್ರದಲ್ಲಿದ್ದಾರೆ ಪೆರು ದೇಶಕ್ಕಿಂತ ಹೆಚ್ಚು ಕೊರೊನಾ ಸೋಂಕಿತರು

India Has Crossed 4 Million COVID-19 Cases

ಭಾರತದಲ್ಲಿನ ಒಟ್ಟು ಮೃತಪಟ್ಟವರ ಸಂಖ್ಯೆ 69,614ಕ್ಕೆ ಏರಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಮೃತಪಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ನವೆಂಬರ್‌ನಲ್ಲಿ ಅಮೆರಿಕ ಮಾರುಕಟ್ಟೆಗೆ ಬರಲಿದೆ ಕೋವಿಡ್ ಔಷಧಿ? ನವೆಂಬರ್‌ನಲ್ಲಿ ಅಮೆರಿಕ ಮಾರುಕಟ್ಟೆಗೆ ಬರಲಿದೆ ಕೋವಿಡ್ ಔಷಧಿ?

ಭಾರತದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿ ಶುಕ್ರವಾರ 19,218 ಹೊಸ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 8,63,062ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 25,964.

ಅತಿ ಹೆಚ್ಚು ಸೋಂಕಿತರು ಇರುವ 3ನೇ ರಾಜ್ಯ ತಮಿಳುನಾಡು. ರಾಜ್ಯದಲ್ಲಿ ಇಂದು 5976 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 7,687.

ಕರ್ನಾಟಕದಲ್ಲಿ ಇಂದು 9,280 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 3,79,486ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 99,101.

English summary
After America and Brazil India one of the worst Coronavirus hit countries in the world. Now India has crossed 4 million COVID-19 cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X