ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಗತ್ತಿನಲ್ಲಿ ಭಾರತದಲ್ಲೇ ಹೆಚ್ಚು ಮಂದಿ ಕೊರೊನಾ ಸೋಂಕಿತರು ಗುಣಮುಖ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 21: ಇಡೀ ಜಗತ್ತಿನಲ್ಲಿ ಭಾರತದಲ್ಲೇ ಹೆಚ್ಚು ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ.

ಕೊರೊನಾ ಸೋಂಕಿತರ ಚೇತರಿಕೆ ಪ್ರಮಾಣ ಭಾರತದಲ್ಲಿ ಶೇ. 80 ದಾಟಿದ್ದು, ಇದು ಜಗತ್ತಿನಲ್ಲೇ ಅತ್ಯಧಿಕ ಎಂದೆನಿಸಿಕೊಂಡಿದೆ. ಭಾರತದಲ್ಲಿ ಸತತ ಮೂರನೇ ದಿನ 90 ಸಾವಿರ ಮಂದಿ ಗುಣವಾಗಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಭಾರತದಲ್ಲಿ 24 ಗಂಟೆಗಳಲ್ಲೇ 86961 ಮಂದಿಗೆ ಕೊವಿಡ್-19 ಭಾರತದಲ್ಲಿ 24 ಗಂಟೆಗಳಲ್ಲೇ 86961 ಮಂದಿಗೆ ಕೊವಿಡ್-19

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕೊರೊನಾ ಸೋಂಕಿನಿಂದ ಗುಣಮುಖರಾದವರ ಪ್ರಮಾಣ ಮೇ 4ರಂದು ಶೇ. 27.52 ಇದ್ದಿದ್ದು, ಜುಲೈ 13ರಂದು ಶೇ. 63.02 ಆಗಿತ್ತು. ಈಗ ಸೆ. 21ರಂದು ಅದು ಶೇ. 80ಕ್ಕೆ ತಲುಪಿದೆ.

India Has Highest Recovered Cases In The World

ಕಳೆದ 24 ಗಂಟೆಗಳಲ್ಲಿ 93,356 ಸೋಂಕಿತರು ಗುಣವಾಗಿದ್ದು, ಗುಣವಾದವರ ಒಟ್ಟು ಸಂಖ್ಯೆ 43,96,399 ತಲುಪಿದೆ. ಇಷ್ಟೊಂದು ಗುಣ ಪ್ರಮಾಣ ಜಗತ್ತಿನಲ್ಲೇ ಅತ್ಯಧಿಕ.

ಇನ್ನು ಕೊವಿಡ್​-19 ದೇಶದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 5.49 ದಶಲಕ್ಷ ದಾಟಿದ್ದು, ಇದುವರೆಗೆ 87,882 ಮಂದಿ ಕೊರೊನಾಗೆ ಬಲಿ ಆಗಿದ್ದಾರೆ ಎಂದು ಕೇಂದ್ರ ಹೇಳಿದೆ.

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯು 54 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 86961 ಜನರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 1130 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 87882ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ 54,87,581ಕ್ಕೆ ಏರಿಕೆಯಾಗಿದೆ. ಈ ಪೈಕಿ 43,96,399 ಕೊರೊನಾ ಸೋಂಕಿತರು ಗುಣಮುಖರಾಗಿದ್ದು, ಒಟ್ಟು 10,03,299 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ

English summary
The Union health ministry said on Monday India has the highest number of recovered Covid-19 patients globally, constituting 19% of the total recoveries across the world, even as the country continues to be the second-worst-hit nation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X