ಸಿಹಿಸುದ್ದಿ: ಕೊರೊನಾ ಲಸಿಕೆ ಬಂತು, ಸಾವು ಕಡಿಮೆ, ಸೋಂಕು ಇಳಿಮುಖ!?

ನವದೆಹಲಿ, ಫೆಬ್ರವರಿ.07: ವಿಶ್ವದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ಎರಡನೇ ರಾಷ್ಟ್ರವಾಗಿರುವ ಭಾರತದಲ್ಲಿ ಕೊವಿಡ್-19 ಲಸಿಕೆ ಅಭಿಯಾನ ಕ್ಷಿಪ್ರಗತಿಯಲ್ಲಿ ಸಾಗುತ್ತಿದೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವಲ್ಲಿ ಜಗತ್ತಿಗೆ ಮಾದರಿಯಾಗಿದೆ.

ಅತಿಹೆಚ್ಚು ಕೊರೊನಾವೈರಸ್ ಲಸಿಕೆ ವಿತರಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು 3ನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ. 57 ಲಕ್ಷಕ್ಕಿಂತ ಹೆಚ್ಚು ಜನರಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 57,75,322 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

ಭಾರತವು 3ನೇ ಅತಿಹೆಚ್ಚು ಲಸಿಕೆ ವಿತರಿಸಿದ ದೇಶ

ಭಾರತವು 3ನೇ ಅತಿಹೆಚ್ಚು ಲಸಿಕೆ ವಿತರಿಸಿದ ದೇಶ

ದೇಶದಲ್ಲಿ ಜನವರಿ.16ರಂದು ಮೊದಲ ಬಾರಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಅಂದಿನಿಂದ ಈವರೆಗೂ 57,75,322 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ವಿಶ್ವದಲ್ಲೇ ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. 3.68 ಕೋಟಿ ಲಸಿಕೆ ವಿತರಿಸಿದ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಅಗ್ರಸ್ಥಾನದಲ್ಲಿದೆ. 1.14 ಕೋಟಿ ಜನವರಿಗೆ ಲಸಿಕೆ ನೀಡಿರುವ ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿದೆ.

12 ರಾಜ್ಯಗಳಲ್ಲಿ 2 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ

12 ರಾಜ್ಯಗಳಲ್ಲಿ 2 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆ

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಲಸಿಕೆ ಪಡೆದವರ ಸಂಖ್ಯೆ 57.75 ಲಕ್ಷಕ್ಕಿಂತ ಹೆಚ್ಚಾಗಿದೆ. ಈ ಪೈಕಿ ದೇಶದ 12 ರಾಜ್ಯಗಳಲ್ಲಿ 2 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಈ ರಾಜ್ಯಗಳ ಪಟ್ಟಿ ಇಲ್ಲಿದೆ.

ರಾಜ್ಯ - ಲಸಿಕೆ ಪಡೆದವರ ಸಂಖ್ಯೆ

ಉತ್ತರ ಪ್ರದೇಶ - 6,73,542

ಮಹಾರಾಷ್ಟ್ರ - 4,73,480

ರಾಜಸ್ಥಾನ - 4,59,652

ಗುಜರಾತ್ - 4,38,573

ಕರ್ನಾಟಕ - 3,86,186

ಬಿಹಾರ - 3,74,538

ಪಶ್ಚಿಮ ಬಂಗಾಳ - 3,54,000

ಮಧ್ಯಪ್ರದೇಶ - 3,42,016

ಆಂಧ್ರಪ್ರದೇಶ - 2,99,649

ಕೇರಳ - 2,91,852

ಒಡಿಶಾ - 2,75,055

ತೆಲಂಗಾಣ - 2,09,104

9 ತಿಂಗಳ ನಂತರ 80ಕ್ಕಿಂತ ಕಡಿಮೆ ಮಂದಿ ಸಾವು

9 ತಿಂಗಳ ನಂತರ 80ಕ್ಕಿಂತ ಕಡಿಮೆ ಮಂದಿ ಸಾವು

ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ಹೊಸ ದಾಖಲೆಯಾಗಿದೆ. 9 ತಿಂಗಳ ನಂತರದಲ್ಲಿ ಮೊದಲ ಬಾರಿಗೆ 24 ಗಂಟೆಗಳಲ್ಲಿ ಮೃತಪಟ್ಟವರ ಸಂಖ್ಯೆ 80ಕ್ಕಿಂತ ಕಡಿಮೆಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿಗೆ 78 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,54,996ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ 12059 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,26,363ಕ್ಕೆ ಏರಿಕೆಯಾಗಿದೆ. 1,48,766 ಸಕ್ರಿಯ ಪ್ರಕರಣಗಳಿವೆ.

17 ರಾಜ್ಯಗಳಲ್ಲಿ ಒಂದೇ ಒಂದು ಸಾವಿನ ಪ್ರಕರಣವಿಲ್ಲ

17 ರಾಜ್ಯಗಳಲ್ಲಿ ಒಂದೇ ಒಂದು ಸಾವಿನ ಪ್ರಕರಣವಿಲ್ಲ

ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9 ತಿಂಗಳಿನಲ್ಲಿ ಅತಿ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 78 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಆದರೆ ಈ ಪೈಕಿ 17 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೇ ಒಂದು ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+