ಭಾರತದಲ್ಲೂ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಪ್ರವೇಶ ನಿರ್ಬಂಧ ಸಾಧ್ಯತೆ
ಸೋಷಿಯಲ್ ಮೀಡಿಯಾ ಈಗ ಬಳಕೆ ಮಾತ್ರವಲ್ಲ ಅದೊಂದು ವ್ಯಸನವಾಗಿಯೂ ಬದಲಾಗಿದೆ. ಅದರಲ್ಲೂ ಅಪ್ರಾಪ್ತ ವಯಸ್ಸಿನ ಮಕ್ಕಳು ಸೋಷಿಯಲ್ ಮೀಡಿಯಾ ಬಳಕೆ ಮಾಡುವ ವಿಚಾರವು ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆ ಆಗುತ್ತಿದೆ. ಈಚೆಗೆ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸೋಷಿಯಲ್ ಮೀಡಿಯಾ ಬಳಕೆ ಮಾಡುವುದನ್ನು ನಿಷೇಧಿಸುವ ಪ್ರಮುಖ ನಿರ್ಧಾರವನ್ನು ಆಸ್ಟ್ರೇಲಿಯಾ ತೆಗೆದುಕೊಂಡಿತ್ತು. ಮಕ್ಕಳ ಸುರಕ್ಷತೆ ಹಾಗೂ ಸೋಷಿಯಲ್ ಮೀಡಿಯಾ ದುರ್ಬಳಕೆ ಮಾಡುವುದನ್ನು ತಪ್ಪಿಸುವುದು ಇದರ ಪ್ರಮುಖ ಉದ್ದೇಶವಾಗಿತ್ತು. ಆಸ್ಟ್ರೇಲಿಯಾದ ನಂತರ ಇದೀಗ ಭಾರತವೂ ಸೇರಿದಂತೆ ವಿವಿಧ ದೇಶಗಳು 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸೋಷಿಯಲ್ ಮೀಡಿಯಾ ಬಳಕೆ ಮಾಡುವುದನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆಸಿವೆ. ಏನಿದು ಚರ್ಚೆ ಹಾಗೂ ಭಾರತದ ಯಾವ ರಾಜ್ಯದಲ್ಲಿ ಈ ಚರ್ಚೆ ನಡೆಯುತ್ತಿದೆ ಎನ್ನುವ ವಿವರವನ್ನು ನೋಡೋಣ.
16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಪ್ರವೇಶವನ್ನು ನಿರ್ಬಂಧಿಸುವ ಆಸ್ಟ್ರೇಲಿಯಾದ ನೀತಿಯು ಮಕ್ಕಳ ಆನ್‌ಲೈನ್ ಸುರಕ್ಷತೆಯ ಬಗ್ಗೆ ಜಾಗತಿಕ ಚರ್ಚೆಗೆ ಕಾರಣವಾಗಿದೆ. ಭಾರತ, ಬ್ರಿಟನ್, ಫ್ರಾನ್ಸ್, ಇಂಡೋನೇಷ್ಯಾ ಮತ್ತು ಮಲೇಷ್ಯಾದಂತಹ ರಾಷ್ಟ್ರಗಳು ಸಹ ಇದೇ ರೀತಿಯ ಕಾನೂನನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆಸಿವೆ. ಆದರೆ 2024ರ ಹಾರ್ವರ್ಡ್ ಅಧ್ಯಯನವು ಅಪ್ರಾಪ್ತ ವಯಸ್ಕರು ಸೋಷಿಯಲ್ ಮೀಡಿಯಾ ಬಳಕೆ ಮಾಡುತ್ತಿರುವುದರಿಂದ ಭಾರೀ ಮೊತ್ತದ ಜಾಹೀರಾತು ಆದಾಯ ಬರುತ್ತಿರುವ ವಿಚಾರವನ್ನು ಬಹಿರಂಗಪಡಿಸಿದೆ. ಹೀಗಾಗಿ, ಈ ವಿಚಾರದಲ್ಲಿ ಬ್ಯುಸಿನೆಸ್ ಅಂಶವೂ ಸೇರಿರುವುದರಿಂದ ಭಾರತವೂ ಸೇರಿದಂತೆ ವಿವಿಧ ದೇಶಗಳು ಈ ವಿಷಯದಲ್ಲಿ ಹೇಗೆ ನಿರ್ಧಾರ ತೆಗೆದುಕೊಳ್ಳಲಿವೆ ಎನ್ನುವ ಕುತೂಹಲ ಮೂಡಿದೆ.

ಆಸ್ಟ್ರೇಲಿಯಾ ಸರ್ಕಾರವು 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಪ್ರವೇಶವನ್ನು ನಿರ್ಬಂಧಿಸುವ ನಿರ್ಧಾರವನ್ನು ತೆಗೆದುಕೊಂಡ ಮೇಲೆ ಭಾರತವೂ ಸೇರಿದಂತೆ ವಿವಿಧ ರಾಷ್ಟ್ರಗಳು ಈ ವಿಚಾರದಲ್ಲಿ ಒಲವು ತೋರಿಸಿವೆ. ಹೊಸದಾಗಿ ಅಳವಡಿಸಿಕೊಂಡ ನೀತಿಯಿಂದ ಮಕ್ಕಳ ಸುರಕ್ಷತೆ ಸಾಧ್ಯವಾಗಲಿದೆ. ಆನ್‌ಲೈನ್‌ನಿಂದ ಈ ಮಕ್ಕಳು ದೂರವುಳಿಯುವುದು ಉತ್ತಮ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಆನ್‌ಲೈನ್ ಸುರಕ್ಷತೆ, ಯುವಕರಿಗೆ ಆನ್‌ಲೈನ್‌ನ ನಿರ್ದಿಷ್ಟ ಸೆಟ್ಟಿಂಗ್‌ಗಳು ಮತ್ತು ಮಕ್ಕಳ ಜೀವನದಲ್ಲಿ ಸೋಷಿಯಲ್ ಮೀಡಿಯಾದೊಂದಿಗೆ ಹೇಗೆ ಹೊಂದಿಕೊಳ್ಳುತ್ತಾರೆ ಎಂಬುದರ ಕುರಿತು ತಮ್ಮ ನೀತಿಗಳನ್ನು ಮರು ಮೌಲ್ಯಮಾಪನ ಮಾಡಲು ವಿವಿಧ ದೇಶಗಳು ಮುಂದಾಗಿವೆ.
ಭಾರತದಲ್ಲೂ ಶೀಘ್ರ ಜಾರಿ ಸಾಧ್ಯತೆ
ಇನ್ನು 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಪ್ರವೇಶವನ್ನು ನಿರ್ಬಂಧಿಸುವ ನೀತಿಯ ಬಗ್ಗೆ ಭಾರತದಲ್ಲೂ ವಿವಿಧ ರಾಜ್ಯಗಳ ಸರ್ಕಾರ ಒಲವು ಹೊಂದಿವೆ. ಭಾರತದಲ್ಲಿ ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಅವರು ಅಪ್ರಾಪ್ತ ವಯಸ್ಕರಿಂದ ಸೋಷಿಯಲ್ ಮೀಡಿಯಾ ಬಳಕೆಯನ್ನು ನಿಯಂತ್ರಿಸುವ ವಿಷಯ ಪ್ರಸ್ತಾಪಿಸಿದ್ದಾರೆ. ಆಸ್ಟ್ರೇಲಿಯಾ ಮಾದರಿಯನ್ನು ಅಳವಡಿಸಿಕೊಳ್ಳುವ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ, ಹಂತ ಹಂತವಾಗಿ ಭಾರತದಲ್ಲೂ ಮುಂದಿನ ದಿನಗಳಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಪ್ರವೇಶವನ್ನು ನಿರ್ಬಂಧಿಸುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ವಿವಿಧ ದೇಶಗಳಲ್ಲಿ ಚರ್ಚೆ
ಇನ್ನು ಆಸ್ಟ್ರೇಲಿಯಾ ಈ ನಿರ್ಧಾರವನ್ನು ತೆಗೆದುಕೊಂಡ ನಂತರ ವಿವಿಧ ದೇಶಗಳಲ್ಲೂ ಈ ನಿರ್ಧಾರದ ಬಗ್ಗೆ ಚರ್ಚೆ ನಡೆದಿದೆ. ಯುಕೆ ಅಧಿಕಾರಿಗಳು ಸೋಷಿಯಲ್ ಮೀಡಿಯಾವನ್ನು ಅಪ್ರಾಪ್ತ ವಯಸ್ಕರು ಬಳಕೆ ಮಾಡದಂತೆ ತಡೆಯುವುದು ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆಸಿದ್ದಾರೆ. ವಿಶೇಷವಾಗಿ ಆನ್‌ಲೈನ್ ಹಾನಿಯ ಸಾಧ್ಯತೆಗೆ ಸಂಬಂಧಿಸಿದ ಕಳವಳಗಳ ಹಿನ್ನೆಲೆಯಲ್ಲಿ ಈ ಚರ್ಚೆ ಜೋರಾಗಿದೆ.
ಫ್ರಾನ್ಸ್, ಇಂಡೋನೇಷ್ಯಾ ಮತ್ತು ಮಲೇಷ್ಯಾ ಸೇರಿದಂತೆ ವಿವಿಧ ದೇಶಗಳಲ್ಲೂ ಸಹ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆಗೆ ಸಂಬಂಧಿಸಿದ ಕಾನೂನುಗಳನ್ನು ರೂಪಿಸುವುದಕ್ಕೆ ಸಿದ್ಧತೆ ನಡೆದಿದೆ. ಅಮೆರಿಕದ ವಿವಿಧ ರಾಜ್ಯಗಳಲ್ಲೂ ಈ ವಿಚಾರವಾಗಿ ಚರ್ಚೆ ನಡೆದಿವೆ.
ಸೋಷಿಯಲ್ ಮೀಡಿಯಾ ನಿರ್ಬಂಧ ಯಾಕೆ ?
ಇನ್ನು ವಿವಿಧ ರಾಷ್ಟ್ರಗಳು ಸೋಷಿಯಲ್ ಮೀಡಿಯಾ ನಿರ್ಬಂಧಿಸಿರುವುದಕ್ಕೆ ಹಲವು ಕಾರಣಗಳಿವೆ. ಮಕ್ಕಳ ಮಾನಸಿಕ ಆರೋಗ್ಯ, ಗೌಪ್ಯತೆ ಮತ್ತು ಅವರ ಬೆಳವಣಿಗೆಯ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎನ್ನುವ ವಿಚಾರಕ್ಕೆ ಸಂಬಂಧಿಸಿದ್ದಾಗಿದೆ. ಮತ್ತೊಂದು ಪ್ರಮುಖ ವಿಷಯವೆಂದರೆ ಡೇಟಾ ಮತ್ತು ಜಾಹೀರಾತು. 2024 ರಲ್ಲಿ ಪ್ರಕಟವಾದ ಹಾರ್ವರ್ಡ್ ಅಧ್ಯಯನ 2022ರ ಪ್ರಕಾರ 18 ವರ್ಷದೊಳಗಿನ ವಯಸ್ಸಿನವರು ಸೋಷಿಯಲ್ ಮೀಡಿಯಾ ಬಳಕೆ ಮಾಡುವುದರಿಂದ ಅಂದಾಜು 11 ಬಿಲಿಯನ್ ಅಮೆರಿಕನ್ ಡಾಲರ್ ಜಾಹೀರಾತು ಆದಾಯ ಬರುತ್ತಿದೆ.
-
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Nepal: ಇರಾನ್ ಯುದ್ಧದ ನಡುವೆ ದೊಡ್ಡ ಸುದ್ದಿಯಾಗದ ನೇಪಾಳದ ಹೊಸ ಜೆನ್ ಜೀ ಸರ್ಕಾರ: ಗೋಪಾಲಕೃಷ್ಣ ಕುಂಟಿನಿ ಬರಹ -
Kiara Advani: ವಿಜಯ್ ದೇವರಕೊಂಡ ಮೇಲೆ ಕಿಯಾರಾ ಅಡ್ವಾಣಿಗೆ ಕ್ರಶ್: ರಾಣಾ ಶೋನಲ್ಲಿ ಬಹಿರಂಗವಾದ ಹಳೆಯ ರಹಸ್ಯ, ವೈರಲ್ -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
Amruthadhare Serial: ಟ್ವಿಸ್ಟ್ ಮೇಲೆ ಟ್ವಿಸ್ಟ್: ಮಲ್ಲಿ ಮದುವೆ ಬಳಿಕ ಹೊಸ ತಿರುವು, ಜೆಡಿ ಪ್ಲ್ಯಾನ್ಗೆ ಸುನೀಲ್ ವಿಲನ್ -
Property: ಆಸ್ತಿದಾರರಿಗೆ 2026 ವರ್ಷ ಅದೃಷ್ಟ: ರಿಯಲ್ ಎಸ್ಟೇಟ್ನಲ್ಲಿ ಹೊಸ ಸಂಚಲನ, ಮನೆ ಮಾರಾಟ ಭರ್ಜರಿ ಹೆಚ್ಚಳ -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications