ಮಾರ್ಚ್-ಮೇ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಾಗಲಿದೆ ಬಿಸಿಲು: ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ, ಮಾರ್ಚ್ 01: ಭಾರತದಲ್ಲಿ ಮಾರ್ಚ್‌ ತಿಂಗಳಲ್ಲಿ ಸಾಮಾನ್ಯ ಕನಿಷ್ಠ ತಾಪಮಾನಕ್ಕಿಂತ ಹೆಚ್ಚಿನ ಬಿಸಿಲು ಇರಲಿದೆ. ವಾಯುವ್ಯದ ಕೆಲವು ಪ್ರತ್ಯೇಕ ಪ್ರದೇಶಗಳನ್ನು ಹೊರತುಪಡಿಸಿ ಎಲ್ ನೀನೊ ಪರಿಸ್ಥಿತಿಗಳಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ಮಾರ್ಚ್‌ನಿಂದ ಮೇ ತಿಂಗಳವರೆಗೆ ಸಾಮಾನ್ಯ ಹಗಲು ಮತ್ತು ರಾತ್ರಿಯ ವೇಳೆಯೂ ತಾಪಮಾನ ಹೆಚ್ಚಿರಲಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಈ ಎಲ್ ನೀನೊ ಪರಿಸ್ಥಿತಿ ಈ ಸೀಸನ್‌ನಲ್ಲಿಯೂ ಮುಂದುವರಿಯುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ನೀಡಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಗೋಧಿ ಬೆಳೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಬಗ್ಗೆ ಕಳವಳ ವ್ಯಕ್ತಪಡಿಸಿದೆ. ದೇಶದ ಬಹುತೇಕ ಭಾಗಗಳಲ್ಲಿ ಕನಿಷ್ಠ ಅಥವಾ ರಾತ್ರಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಐಎಂಡಿ ಶುಕ್ರವಾರ ತಿಳಿಸಿದೆ.

India llikely to experience warmer summer this year: IMD

ಈಶಾನ್ಯ ಭಾರತ, ಪಶ್ಚಿಮ ಮಧ್ಯ ಪ್ರದೇಶ ಮತ್ತು ವಾಯುವ್ಯದ ಹೆಚ್ಚಿನ ಪ್ರದೇಶಗಳಲ್ಲಿ ಮಾರ್ಚ್‌ನಲ್ಲಿ ಮಾಸಿಕ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ಪೂರ್ವ ಮತ್ತು ಪೂರ್ವ-ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ಮತ್ತು ವಾಯುವ್ಯ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಗರಿಷ್ಠ ತಾಪಮಾನವು ಮುಂದುವರಿಯುವ ಸಾಧ್ಯತೆಯಿದೆ.

ಹಿಮಾಲಯದ ಕೆಲವು ಪ್ರತ್ಯೇಕ ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳಲ್ಲಿ ರಾತ್ರಿಯ ಉಷ್ಣತೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ಈ ಪ್ರದೇಶಗಳಲ್ಲಿ ಮಾರ್ಚ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ತಾಪಮಾನವು ಹೆಚ್ಚಾಗಿ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

India llikely to experience warmer summer this year: IMD

ಈಶಾನ್ಯ ಭಾರತ, ಪಶ್ಚಿಮ ಹಿಮಾಲಯ ಪ್ರದೇಶ, ನೈಋತ್ಯ ಪರ್ಯಾಯ ದ್ವೀಪ ಮತ್ತು ಪಶ್ಚಿಮ ಕರಾವಳಿಯನ್ನು ಹೊರತುಪಡಿಸಿ, ದೇಶದ ಬಹುತೇಕ ಭಾಗಗಳಲ್ಲಿ ಬೇಸಿಗೆಯಲ್ಲಿ ಶಾಖದ ಅಲೆಗಳು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮಾರ್ಚ್‌ನಲ್ಲಿ, ಈಶಾನ್ಯ ಪರ್ಯಾಯದ್ವೀಪದ ಭಾರತದ ಹೆಚ್ಚಿನ ಪ್ರದೇಶಗಳು, ಮಹಾರಾಷ್ಟ್ರದ ಹಲವು ಪ್ರದೇಶಗಳು ಮತ್ತು ಒಡಿಶಾದ ಕೆಲವು ಭಾಗಗಳು ಮತ್ತು ಪಕ್ಕದ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ಅಲೆಗಳನ್ನು ನೋಡಲಿವೆ. "ಎಲ್ ನಿನೋ ಸ್ಥಿತಿ ದುರ್ಬಲಗೊಂಡಿದೆ.

ಆದರೆ ಅವು ಇನ್ನೂ ಚಾಲ್ತಿಯಲ್ಲಿದ್ದು, ಮೇ ತಿಂಗಳವರೆಗೆ ಮುಂದುವರಿಯುವ ನಿರೀಕ್ಷೆಯಿದೆ. ಆದ್ದರಿಂದ, ನಾವು ಈ ಬಾರಿ ಬಿಸಿ ಬೇಸಿಗೆಯನ್ನು ನಿರೀಕ್ಷಿಸಬಹುದು. ಬೇಸಿಗೆಯ ಮೊದಲ 15 ದಿನಗಳವರೆಗೆ, ವಾಯುವ್ಯ ಭಾರತದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಿರುತ್ತದೆ" ಎಂದು ಐಎಂಡಿ ಡೈರೆಕ್ಟರ್ ಜನರಲ್ ಎಂ ಮೊಹಾಪಾತ್ರ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+