ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕ್‌ನಿಂದ ಮೀನುಗಾರರ ಹತ್ಯೆ: ಪ್ರತಿಭಟನೆ ದಾಖಲಿಸಿದ ಭಾರತ

|
Google Oneindia Kannada News

ನವದೆಹಲಿ, ನವೆಂಬರ್ 08: ಭಾರತೀಯ ಮೀನುಗಾರರ ಹತ್ಯೆಗೆ ಸಂಬಂಧಿಸಿದಂತೆ ಪಾಕಿಸ್ತಾನ ವಿರುದ್ಧ ಭಾರತ ಪ್ರತಿಭಟನೆ ದಾಖಲಿಸಿದೆ.

ಶನಿವಾರ ಅರಬ್ಬಿ ಸಮುದ್ರದಲ್ಲಿ ಭಾರತೀಯ ಮೀನುಗಾರಿಕಾ ದೋಣಿಯ ಮೇಲೆ ಪಾಕಿಸ್ತಾನಿ ಕಡಲ ಭದ್ರತಾ ಸಿಬ್ಬಂದಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಮೀನುಗಾರ ಮೃತಪಟ್ಟಿದ್ದಾರೆ ಮತ್ತು ಮತ್ತೊಬ್ಬ ಮೀನುಗಾರ ಗಾಯಗೊಂಡಿದ್ದಾರೆ.

ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಅಂತಾರಾಷ್ಟ್ರೀಯ ಕಡಲ ಗಡಿರೇಖೆಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ) ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮಹಾರಾಷ್ಟ್ರದ ಮೀನುಗಾರರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

India Lodges Strong Protest Over Pakistans Killing Of Innocent Fisherman; Summons Envoy

ಎಲ್ಲಾ ಸ್ಥಾಪಿತ ಅಂತಾರಾಷ್ಟ್ರೀಯ ನಿಯಮಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳಿಗೆ ವಿರುದ್ಧವಾಗಿ ಭಾರತೀಯ ಮೀನುಗಾರಿಕಾ ದೋಣಿಯ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿ ಜೀವಹಾನಿ ಉಂಟುಮಾಡಿರುವ ಪಾಕಿಸ್ತಾನಿ ಭದ್ರತಾ ಪಡೆಯ ಕ್ರಮವನ್ನು ಭಾರತ ಭಾರತ ಸರ್ಕಾರ ಖಂಡಿಸಿದೆ ಎಂದು ಮೂಲಗಳು ತಿಳಿಸಿವೆ.

"ಈ ಸಂಬಂಧ ಭಾರತೀಯ ವಿದೇಶಾಂಗ ಸಚಿವಾಲಯ ಇಂದು ಪಾಕಿಸ್ತಾನದ ಹೈಕಮಿಷನ್‌ನ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಕರೆದು ಪಾಕಿಸ್ತಾನದ ಕಡೆಯಿಂದ ಭಾರತೀಯ ಮೀನುಗಾರರ ಮೇಲೆ ನಡೆದ ಅಪ್ರಚೋದಿತ ಗುಂಡಿನ ದಾಳಿಯನ್ನು ಖಂಡಿಸಿದೆ ಮತ್ತು ಘಟನೆಯ ಬಗ್ಗೆ ತೀವ್ರ ಪ್ರತಿಭಟನೆ ದಾಖಲಿಸಲಾಗಿದೆ" ಎಂದು ಮೂಲಗಳು ತಿಳಿಸಿವೆ.

ಈಗ ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಗುಂಡಿನ ದಾಳಿಯ ಘಟನೆಯನ್ನು ದೃಢಪಡಿಸಿದೆ.
ಗುಂಡಿನ ದಾಳಿಯಲ್ಲಿ ದೋಣಿಯಲ್ಲಿದ್ದ ಏಳು ಮಂದಿ ಸಿಬ್ಬಂದಿಯಲ್ಲಿ ಒಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಹಾರಾಷ್ಟ್ರದ ಥಾಣೆಯ ಮೀನುಗಾರ "ಜಲ್ಪಾರಿ" ನಲ್ಲಿ ಮೀನುಗಾರಿಕಾ ದೋಣಿಯಲ್ಲಿದ್ದ ಪಿಎಂಎಸ್‌ಎ ಸಿಬ್ಬಂದಿ ಮತ್ತು ಇತರ ಸಿಬ್ಬಂದಿಯ ಮೇಲೆ ಶನಿವಾರ ಸಂಜೆ ಗುಂಡು ಹಾರಿಸಿದ ನಂತರ ಸಾವನ್ನಪ್ಪಿದ್ದಾರೆ ಎಂದು ದೇವಭೂಮಿ ದ್ವಾರಕಾ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಜೋಶಿ ಪಿಟಿಐಗೆ ತಿಳಿಸಿದ್ದಾರೆ.

ಮೀನುಗಾರ ಶ್ರೀಧರ್ ರಮೇಶ್ ಚಾಮ್ರೆ (32) ಅವರ ಮೃತದೇಹವನ್ನು ಓಖಾ ಬಂದರಿಗೆ ತರಲಾಗಿದ್ದು, ಅರಬ್ಬಿ ಸಮುದ್ರದಲ್ಲಿ 12 ನಾಟಿಕಲ್ ಮೈಲುಗಳ ಆಚೆಗೆ ಯಾವುದೇ ಘಟನೆಯ ಅಧಿಕಾರ ವ್ಯಾಪ್ತಿಯನ್ನು ಹೊಂದಿರುವ ಪೋರಬಂದರ್ ನವಿ ಬಂದರ್ ಪೊಲೀಸರು ಈಗ ಎಫ್‌ಐಆರ್ ದಾಖಲಿಸಿದ್ದಾರೆ.

'ಅಕ್ಟೋಬರ್ 25 ರಂದು ಓಖಾದಿಂದ ಏಳು ಸಿಬ್ಬಂದಿಗಳೊಂದಿಗೆ ಪ್ರಯಾಣ ಬೆಳೆಸಿದ ಮೀನುಗಾರಿಕಾ ದೋಣಿ 'ಜಲ್ಪರಿ' ನಲ್ಲಿ ಚಾಮ್ರೆ ಇದ್ದರು, ಅವರಲ್ಲಿ ಐದು ಮಂದಿ ಗುಜರಾತ್ ಮತ್ತು ಇಬ್ಬರು ಮಹಾರಾಷ್ಟ್ರದವರು" ಎಂದು ಜೋಶಿ ಹೇಳಿದರು.

English summary
In a big development, the Ministry of External Affairs (MEA) on Monday lodged a strong protest over the unprovoked and murderous firing at Indian fishermen by Pakistan, in which one fisherman died and another was injured. According to sources, a senior diplomat from the High Commission of Pakistan was summoned by MEA today and a strong protest was lodged on the incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X