ದೇಶದಲ್ಲಿ ಒಂದೇ ದಿನ 1,300 ಹೊಸ ಕೋವಿಡ್ ಪ್ರಕರಣಗಳು: 140 ದಿನಗಳಲ್ಲಿಯೇ ಅತಿ ಹೆಚ್ಚು
ನವದೆಹಲಿ, ಮಾರ್ಚ್. 23: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸಾಂಕ್ರಾಮಿಕ ರೋಗದ ಹರಡುವಿಕೆ ನಿಧಾನವಾಗಿ ಎಲ್ಲಾ ಭಾಗಗಳಲ್ಲಿಯೂ ಹರಡುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಭಾರತವು ಬುಧವಾರ 1,300 ಹೊಸ ಕೋವಿಡ್ 19 ಪ್ರಕರಣಗಳನ್ನು ದಾಖಲಿಸಿದೆ.
1,300 ಹೊಸ ಕೋವಿಡ್ 19 ಪ್ರಕರಣಗಳನ್ನು ದಾಖಲಿಸುವ ಮೂಲಕ ಭಾರತ ಕಳೆದ 140 ದಿನಗಳಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿತರನ್ನು ಕಂಡಿದೆ. ಇದರಿಂದ ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 7,605 ಕ್ಕೆ ಏರಿಕೆಯಾಗಿದೆ. ಇದರೊಂದಿಗೆ, ಕೋವಿಡ್ ಸೋಂಕಿನ ಒಟ್ಟು ಸಂಖ್ಯೆ 4,46,99, 418 ಕ್ಕೆ ಏರಿದೆ. ಒಂದು ದಿನದಲ್ಲಿ ಮೂರು ವ್ಯಕ್ತಿಗಳು ಕೊರೊನಾವೈರಸ್‌ಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಕೊರೊನಾ ವೈರಸ್‌ಗೆ ಬಲಿಯಾದವರ ಒಟ್ಟು ಸಂಖ್ಯೆ 5,30,816 ಕ್ಕೆ ಏರಿಕೆಯಾಗಿದೆ. ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ದೈನಂದಿನ ಸಕಾರಾತ್ಮಕತೆಯ ದರವನ್ನು ಶೇಕಡಾ 1.46 ರಷ್ಟಿದೆ., ಆದರೆ ವಾರದ ಧನಾತ್ಮಕತೆ ಶೇಕಡಾ 1.08 ಕ್ಕೆ ಏರಿದೆ. ಇಲ್ಲಿಯವರೆಗೆ ಒಟ್ಟು 4,41,60,99 ವ್ಯಕ್ತಿಗಳು ಅನಾರೋಗ್ಯದಿಂದ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಚೇತರಿಕೆ ದರವು ಶೇಕಡಾ 98.79 ರಷ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ವೆಬ್‌ಸೈಟ್ ಪ್ರಕಾರ ಭಾರತವು ಇದುವರೆಗೆ ಒಟ್ಟು 220.65 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಿದೆ. ಕಳೆದ 24 ಗಂಟೆಗಳಲ್ಲಿ 89,078 ಸೇರಿದಂತೆ ಒಟ್ಟು 92.06 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದೆ.

ದೈನಂದಿನ ಪ್ರಕರಣಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಹೊಸ ರೂಪಾಂತರಗಳನ್ನು ಪತ್ತೆಹಚ್ಚಲು ಮತ್ತು ಇನ್ಫ್ಲುಯೆನ್ಸ ತರಹದ ಕಾಯಿಲೆಗಳು ಮತ್ತು ತೀವ್ರವಾದ ಉಸಿರಾಟದ ಸೋಂಕಿತರ ಮೇಲ್ವಿಚಾರಣೆಯನ್ನು ಕೈಗೊಳ್ಳಲು ಕೋವಿಡ್ -19 ವೈರಸ್‌ನ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಹೆಚ್ಚಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಉಸಿರಾಟದ ನೈರ್ಮಲ್ಯ ಮತ್ತು ಕೋವಿಡ್ -19 ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸಲು ಅವರು ದೇಶದ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ದೇಶದ ಕೋವಿಡ್ -19 ಮತ್ತು ಇನ್ಫ್ಲುಯೆನ್ಸ ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯಲ್ಲಿ ಹಲವು ಸೂಚನೆಗಳು ಬಂದಿವೆ. 20 ಪ್ರಮುಖ ಕೋವಿಡ್ ಔಷಧಿಗಳು, 12 ಇತರ ಔಷಧಿಗಳು, 8 ಬಫರ್ ಔಷಧಿಗಳು ಮತ್ತು 1 ಇನ್ಫ್ಲುಯೆನ್ಸ ಔಷಧಿಗಳ ಲಭ್ಯತೆ ಮತ್ತು ಬೆಲೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ಪ್ರಧಾನಿಗೆ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಬುಧವಾರ 334 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿವೆ. ಹಿಂದಿನ ದಿನಕ್ಕಿಂತ 54 ಪ್ರಕರಣಗಳು ಮತ್ತು ಒಂದು ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಬುಲೆಟಿನ್‌ನಲ್ಲಿ ತಿಳಿಸಿದೆ. ಮುಂಬೈನಲ್ಲಿ ಕೋವಿಡ್ ಪರೀಕ್ಷೆಗೆ ಒಳಗಾದ 1,290 ಜನರಲ್ಲಿ 71 ಮಂದಿ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಆದ್ದರಿಂದ, ಪರೀಕ್ಷಾ ಸಕಾರಾತ್ಮಕತೆಯ ದರವು 5.5 % ಇದೆ. ಮುಂಬೈನಲ್ಲಿ 361 ಸಕ್ರಿಯ ಪ್ರಕರಣಗಳಿವೆ. 26 ರೋಗಿಗಳು ಆಸ್ಪತ್ರೆಯಲ್ಲಿದ್ದರೆ, ಅವರಲ್ಲಿ 10 ಮಂದಿ ಆಮ್ಲಜನಕದ ಬೆಂಬಲದಲ್ಲಿದ್ದಾರೆ. ಹೊಸ ಪ್ರಕರಣಗಳೊಂದಿಗೆ, ಮಹಾರಾಷ್ಟ್ರದ ಕೋವಿಡ್ ಪ್ರಕರಣಗಳ ಸಂಖ್ಯೆ 81,40,479 ಕ್ಕೆ ಮತ್ತು ಸಾವಿನ ಸಂಖ್ಯೆ 1,48,430 ಕ್ಕೆ ಏರಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications