• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಿಟ್ಟುಸಿರುವ ಬಿಡುವ ಸುದ್ದಿ: ಭಾರತದಲ್ಲಿ 10,000 ಸೋಂಕಿತರು ಗುಣಮುಖ!

|

ನವದೆಹಲಿ, ಮೇ.02: ಭಾರತ ಲಾಕ್ ಡೌನ್ ನಡುವೆಯೂ ದೇಶದಲ್ಲಿ ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 2,411ಕ್ಕೂ ಅಧಿಕ ಮಂದಿಗೆ ಕೊರೊನಾ ವೈರಸ್ ಸೋಂಕು ಅಂಟಿಕೊಂಡಿದೆ.

ಶನಿವಾರ ಒಂದೇ ದಿನ ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ವೈರಸ್ ನಿಂದ 71 ಮಂದಿ ಪ್ರಾಣ ಬಿಟ್ಟಿದ್ದಾರೆ. ಹೀಗಾಗಿ ದೇಶದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ 1,223ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಭಾರತದಲ್ಲೇ ಅತಿಹೆಚ್ಚು ಸೋಂಕಿತರುಳ್ಳ ರಾಜ್ಯದಲ್ಲಿ ಮಹತ್ವದ ಆದೇಶ!

ಭಾರತದಲ್ಲಿ ಶನಿವಾರದ ಅಂಕಿ-ಅಂಶಗಳ ಪ್ರಕಾರ 37,776 ಮಂದಿಗೆ ನೊವೆಲ್ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈವರೆಗೂ ದೇಶದಲ್ಲಿ 10,018 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಗುಣಮುಖರಾದವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಉಳಿದಂತೆ 26,535 ಜನರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಮಹಾರಾಷ್ಟ್ರವೊಂದರಲ್ಲೇ 1,008 ಸೋಂಕಿತ ಕೇಸ್ ಪತ್ತೆ:

ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 1008 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 26 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲೇ ಅತಿಹೆಚ್ಚು ಸೋಂಕಿತರು ಹೊಂದಿರುವ ಮಹಾರಾಷ್ಟ್ರದಲ್ಲಿ ಇದುವರೆಗೂ ಮಹಾಮಾರಿಗೆ 485ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಈವರೆಗೂ 11,506 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದ್ದು, 1,879 ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

English summary
India: More Than 10,000 Coronavirus Patients Discharge Till Now. Total Infected Cases Rises 37,776 In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X