ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ವಿತರಣೆಯಲ್ಲಿ ಚೀನಾ, ಅಮೆರಿಕಾವನ್ನು ಹಿಂದಿಕ್ಕಿದ ಭಾರತ

|
Google Oneindia Kannada News

ನವದೆಹಲಿ, ಏಪ್ರಿಲ್ 25: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದೆ. ಜಗತ್ತಿನಲ್ಲಿ ಅತಿ ಕಡಿಮೆ ಅವಧಿಯಲ್ಲೇ ಅತಿಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನದಲ್ಲಿದೆ.

ದೇಶದಲ್ಲಿ ಕೇವಲ 99 ದಿನಗಳಲ್ಲಿ 14 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. 14 ಕೋಟಿ ಫಲಾನುಭವಿಗಳಿಗೆ ಲಸಿಕೆ ನೀಡಲು ಚೀನಾ 112 ದಿನಗಳನ್ನು ತೆಗೆದುಕೊಂಡರೆ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ 104 ದಿನಗಳನ್ನು ತೆಗೆದುಕೊಂಡಿದೆ.

ಭಾರತದಲ್ಲಿ ಒಂದು ದಿನದಲ್ಲಿ ಒಟ್ಟು 25,36,612 ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಈ ಪೈಕಿ 16,43,864 ಮಂದಿಗೆ ಮೊದಲ ಡೋಸ್ ಹಾಗೂ 8,92,748 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೆ 14,09,16,417 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದ 8 ರಾಜ್ಯಗಳಲ್ಲೇ ಶೇ.59ರಷ್ಟು ಲಸಿಕೆ

ಭಾರತದ 8 ರಾಜ್ಯಗಳಲ್ಲೇ ಶೇ.59ರಷ್ಟು ಲಸಿಕೆ

ಭಾರತದಲ್ಲಿ ಈವರೆಗೂ 14,09,16,417 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ ಎಂಟು ರಾಜ್ಯಗಳಲ್ಲೇ ಶೇ.59ರಷ್ಟು ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಲಸಿಕೆ ವಿತರಣೆಯಲ್ಲಿ ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಗುಜರಾತ್, ಪಶ್ಚಿಮ ಬಂಗಾಳ, ಕರ್ನಾಟಕ, ಮಧ್ಯಪ್ರದೇಶ ಮತ್ತು ಕೇರಳ ರಾಜ್ಯಗಳು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿವೆ.

ಕಾರ್ಮಿಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ

ಕಾರ್ಮಿಕರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ

ಭಾರತದಲ್ಲಿ ಈವರೆಗೂ 92,90,528 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 59,95,634 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,19,50,251 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 62,90,491 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

45 ವರ್ಷ ಮೇಲ್ಪಟ್ಟವರಿಗೆ ಕೊವಿಡ್-19 ಲಸಿಕೆ ವಿತರಣೆ

45 ವರ್ಷ ಮೇಲ್ಪಟ್ಟವರಿಗೆ ಕೊವಿಡ್-19 ಲಸಿಕೆ ವಿತರಣೆ

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,96,55,753 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 77,19,730 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,76,83,792 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 23,30,238 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಮೂರು ಮಾದರಿ ಲಸಿಕೆ

ಭಾರತದಲ್ಲಿ ಮೂರು ಮಾದರಿ ಲಸಿಕೆ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,49,691 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದೇ ದಿನ 2,767 ಮಂದಿ ಪ್ರಾಣ ಬಿಟ್ಟಿದ್ದು, 2,17,113 ಮಂದಿ ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಒಟ್ಟು 1,69,60,172 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,40,85,110 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,92,311 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 26,82,751 ಕೊವಿಡ್-19 ಸಕ್ರಿಯ ಪ್ರಕರಣಗಳ ದಾಖಲಾಗಿವೆ.

English summary
India: More Than 14 Crore Peoples Taken Coronavirus Vaccination In Just 99 Days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X