ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 92 ದಿನವಾದರೂ ಶೇ.50ರಷ್ಟು ಕಾರ್ಮಿಕರಿಗಿಲ್ಲ ಕೊರೊನಾ ಲಸಿಕೆ

|
Google Oneindia Kannada News

ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭಿಸಿದ 92 ದಿನಗಳ ನಂತರವೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತನ್ನ ಗುರಿಯನ್ನು ತಲುಪುವಲ್ಲಿ ವಿಫಲವಾಗಿದೆ.

ದೇಶದಲ್ಲಿ ಮೊದಲ ಶ್ರೇಣಿ ಕಾರ್ಮಿಕರ ಪೈಕಿ 3 ಕೋಟಿ ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿತ್ತು. ಆದರೆ 1,12,33,415 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 55,10,238 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಅಂದರೆ ಶೇ.37ರಷ್ಟು ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ ಶೇ.47ರಷ್ಟು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಮೊದಲು ಓದಿ: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿಮೊದಲು ಓದಿ: ಭಾರತದಲ್ಲಿ ಕೊರೊನಾವೈರಸ್ 2ನೇ ಅಲೆ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯ ಆರಂಭಿಕ ಹಂತದಲ್ಲಿ ನಿಧಾನಗತಿಯ ಪ್ರಯೋಗದಿಂದಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಈವರೆಗೂ 12,26,22,590 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

India: Not Even 50 Per cent Of Frontline And Health Workers Have Been Fully Vaccinated So Far

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,04,74,993 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 10,81,759 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,55,94,522 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 38,91,294 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಕೊರೊನಾವೈರಸ್

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

English summary
India: Not Even 50 Per cent Of Frontline And Health Workers Have Been Fully Vaccinated So Far.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X