ಬಿಜೆಪಿ ಆಡಳಿತದಲ್ಲಿ ಭಾರತ ಸುರಕ್ಷಿತವಾಗಿಲ್ಲ: ಶಶಿ ತರೂರ್
ಲಕ್ನೋ, ಮೇ 14: "ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದ ಆಡಳಿತದಲ್ಲಿ ಭಾರತ ಸುರಕ್ಷಿತವಾಗಿಲ್ಲ" ಎಂದು ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಶಿ ತರೂರ್, 'ಕಳೆದ ನಾಲ್ಕು ವರ್ಷಗಳಿಂದ ನಡೆದ ಹಲವು ಘಟನೆಗಳು ಎನ್ ಡಿಎ ಅಧಿಕಾರಾವಧಿಯಲ್ಲಿ ದೇಶ ಸುರಕ್ಷಿತವಾಗಿಲ್ಲ ಎಂಬುದನ್ನು ಸಾಬೀತುಪಡಿಸಿದೆ' ಎಂದಿದ್ದಾರೆ.
"ಸಮೃದ್ಧಿಯ, ಅಭಿವೃದ್ಧಿಯ ಮತ್ತು ಸುರಕ್ಷಿತ ಭಾರತ ನಿರ್ಮಾಣಕ್ಕೆ ಕಾಲ ಕೂಡಿ ಬಂದಿದೆ" ಎಂದು ಇದೇ ಸಂದರ್ಭದಲ್ಲಿ ತಿರುವನಂತಪುರ ಸಂಸದರೂ ಆಗಿರುವ ಶಶಿ ತರೂರ್ ತಿಳಿಸಿದ್ದಾರೆ.

ಕರ್ನಾಟಕ ಚುನಾವಣಾ ಫಲಿತಾಂಶದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, "ಚುನಾವಣೋತ್ತರ ಸಮೀಕ್ಷೆಗಳನ್ನೆಲ್ಲ ನಂಬುವುದಕ್ಕಾಗುವುದಿಲ್ಲ. ಕಾಂಗ್ರೆಸ್ ಕರ್ನಾಟಕದಲ್ಲಿ ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮುವುದು ಖಂಡಿತ. ಫಲಿತಾಂಶ ಏನಾಗಲಿದೆ ಎಂಬುದು ಮೇ 15 ರಂದು ತಿಳಿಯಲಿದೆ" ಎಂದು ಹೇಳಿದ್ದಾರೆ.












Click it and Unblock the Notifications