ಕೊರೊನಾವೈರಸ್ ಹೊಡೆತ: ರಷ್ಯಾವನ್ನೂ ಹಿಂದಿಕ್ಕಿದ ಭಾರತ!
ನವದೆಹಲಿ, ಜುಲೈ.05: ಕೊರೊನಾವೈರಸ್ ಅಟ್ಟಹಾಸಕ್ಕೆ ಭಾರತಕ್ಕೆ ಭಾರತವೇ ತತ್ತರಿಸಿ ಹೋಗಿದೆ. ಜಾಗತಿಕ ಮಟ್ಟದಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತರ ಸಂಖ್ಯೆಯನ್ನು ಹೊಂದಿದ್ದ ರಷ್ಯಾವನ್ನು ಹಿಂದಿಕ್ಕಿದ ಭಾರತವು ಮೂರನೇ ಸ್ಥಾನಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಭಾನುವಾರ ರಾತ್ರಿ ವೇಳೆಯ ಅಂಕಿ-ಅಂಶಗಳ ಪ್ರಕಾರ 21,492 ಮಂದಿಗೆ ಕೊರೊನಾವೈರಸ್ ಸೋಂಕು ಅಂಟಿಕೊಂಡಿದ್ದು, 413ಕ್ಕೂ ಹೆಚ್ಚು ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕೊವಿಡ್-19ಗೆ ಇದುವರೆಗೂ ಬಲಿಯಾದವರ ಸಂಖ್ಯೆಯು 19692ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಕೊವಿಡ್-19 ಸ್ಫೋಟ: 1925 ಮಂದಿಗೆ ಅಂಟಿದ ಮಹಾಮಾರಿ!
ಭಾರತದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆಯು 6,95,396ಕ್ಕೆ ಹೆಚ್ಚಿದ್ದು, ಈ ಪೈಕಿ 4,23,001 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಬಾಕಿ ಉಳಿದ 2,52,703 ಸೋಂಕಿತರಿಗೆ ದೇಶದ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ರಷ್ಯಾದಲ್ಲಿ ಕೊರೊನಾವೈರಸ್ ಅಂಕಿ-ಅಂಶ:
ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಲ್ಲಿದ್ದ ರಷ್ಯಾವನ್ನು ಭಾರತ ಇದೀಗ ಹಿಂದಿಕ್ಕಿದೆ. ಭಾನುವಾರ ರಾತ್ರಿ ವೇಳೆಗೆ ರಷ್ಯಾದಲ್ಲಿ ಒಟ್ಟು 6,81,251 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿದ್ದು, ಈ ಪೈಕಿ 4,50,750 ಸೋಂಕಿತರು ಗುಣಮುಖರಾಗಿದ್ದಾರೆ. ರಷ್ಯಾದಲ್ಲಿ 2,20,340 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 134 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 10,161ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 24,000 ಪ್ರಕರಣಗಳು:
ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಕರಣದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. 24 ಗಂಟೆಗಳಲ್ಲೇ ದಾಖಲೆ ಮಟ್ಟದಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗಿದ್ದು, 24,850 ಮಂದಿಗೆ ಸೋಂಕು ತಗಲಿದೆ. ಒಂದೇ ದಿನ 613 ಜನರು ಮಹಾಮಾರಿಯಿಂದ ಮೃತಪಟ್ಟಿದ್ದಾರೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 6,73,105ಕ್ಕೆ ಏರಿಕೆಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 19,268ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 4,09,083 ಜನರು ಗುಣಮುಖರಾಗಿದ್ದರು.












Click it and Unblock the Notifications