ಭಾರತ-ಪಾಕ್ ಕದನ ವಿರಾಮಕ್ಕೆ ಒಪ್ಪಿಗೆ: ಆದ್ರೆ, ಭಯೋತ್ಪಾದನೆ ವಿರುದ್ಧ ರಾಜಿ ಮಾತೇ ಇಲ್ಲ ಎಂದ ಜೈಶಂಕರ್

India-Pakistan Ceasefire: ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಈ ಬಗ್ಗೆ ಅಮೆರಿಕಾ ಅಧ್ಯಕ್ಷ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್ ಅವರು ಟ್ವೀಟ್‌ ಮಾಡಿದ್ದಾರೆ. ಹಾಗಾದ್ರೆ ಅವರು ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ವಿದೇಶಾಂಗ ಸಚಿವ ಜೈ ಶಂಕರ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ಹಾಗೂ ಪಾಕಿಸ್ತಾನ ಇಂದು ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಆದರೆ, ಭಾರತವು ಭಯೋತ್ಪಾದನೆ ವಿರುದ್ಧ ದೃಢ ಮತ್ತು ರಾಜಿಯಾಗದ ನಿಲುವನ್ನು ನಿರಂತರವಾಗಿ ಕಾಯ್ದುಕೊಂಡಿದೆ. ಅದು ಹಾಗೆಯೇ ಮುಂದುವರಿಯುತ್ತದೆ ಎಂದು ತಿಳಿಸಿದ್ದಾರೆ.

India-Pakistan Ceasefire No Compromise against Terrorism Says S Jaishankar

ಇದರ ಬೆನ್ನಲ್ಲೆ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಸುದ್ದಿಗೋಷ್ಠಿ ನಡೆಸಿ, ಮೇ 12ರಂದು ಪಾಕಿಸ್ತಾನ ನಮ್ಮ ಜತೆಗೆ ಮಾತುಕತೆ ನಡೆಸಲಿದೆ. ಅಲ್ಲಿಯವೆರಗೆ ಕದನ ವಿರಾಮ ಘೋಷಣೆ ಎಂದು ಹೇಳಿದರು. ಇದರ ಬೆನ್ನೆಲ್ಲೇ ವಿದೇಶಾಂಗ ಸಚಿವ ಜೈಶಂಕರ್​​ ಕೂಡ ಟ್ವೀಟ್​​​ ಮಾಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಇಂದಿನಿಂದ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿವೆ. ಭಾರತವು ಭಯೋತ್ಪಾದನೆ ವಿರುದ್ಧ ರಾಜಿಯಾಗುವ ಮಾತೇ ಇಲ್ಲ ಎಂದು ತಿಳಿಸಿದ್ದಾರೆ.

ಇಂದು ಅಮೆರಿಕ ಜೊತೆ ಮಾತುಕತೆ ನಡೆಸಿದ್ದೇವೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಅವರು ಇಂದು ಬೆಳಗ್ಗೆ ನನ್ನ ಜೊತೆ ಮಾತನಾಡಿದ್ದಾರೆ. ಅವರಿಗೂ ಸಹ ಸ್ಪಷ್ಟವಾಗಿ ಹೇಳಿದ್ದೇನೆ ಮತ್ತು ಜವಾಬ್ದಾರಿಯುತವಾಗಿದೆ ಎಂದು ಹೇಳಿದರು. ಇನ್ನು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮೇ 12ರಂದು ಮತ್ತೆ ಚರ್ಚೆ ಮಾಡಲಿದ್ದಾರೆ. ಎಂದು ದೇಶಾಂಗ ಕಾರ್ಯದರ್ಶಿ ಮಿಶ್ರಿ ಬ್ರೀಫಿಂಗ್‌ನಲ್ಲಿ ತಿಳಿಸಿದ್ದಾರೆ ಎಂದು ಹೇಳಿದರು.

ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಇಂದು ಮಧ್ಯಾಹ್ನ 3:35ಕ್ಕೆ ಭಾರತೀಯ DGMO ಅವರಿಗೆ ಕರೆ ಮಾಡಿದರು. ಭೂಮಿ, ಗಾಳಿ ಮತ್ತು ಸಮುದ್ರದಲ್ಲಿ ಎಲ್ಲಾ ಗುಂಡಿನ ದಾಳಿ ಮತ್ತು ಮಿಲಿಟರಿ ಕಾರ್ಯಾಚರಣೆಯನ್ನು ನಿಲ್ಲಿಸಲು ಅವರ ನಡುವೆ ಒಪ್ಪಂದ ಮಾಡಿಕೊಳ್ಳಲಾಯಿತು. ಇಂದು ಇದನ್ನು ಜಾರಿಗೆ ತರಲು ಎರಡೂ ಕಡೆಯಿಂದ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ಮೋದಿ ಎಚ್ಚರಿಕೆ: ಇನ್ಮುಂದೆ ಯಾವುದೇ ಭಯೋತ್ಪಾದಕ ದಾಳಿಯನ್ನು ಯುದ್ಧವೆಂದು ಪರಿಗಣಿಸಲಾಗುವುದು ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ಈ ಮೂಲಕ ಪಾಕಿಸ್ತಾನಕ್ಕೆ ಭಾರತ ಮತ್ತೊಂದು ಖಡಕ್‌ ಎಚ್ಚರಿಕೆ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+