India Rain Forecast: ಆಗಸ್ಟ್ 19ರವರೆಗೆ ಈ ರಾಜ್ಯಗಳಲ್ಲಿ 'ಮೇಘಸ್ಟೋಟ'
ಬೆಂಗಳೂರು, ಆಗಸ್ಟ್ 15: ಉತ್ತರ ಭಾರತದ ಭಾರತದ ರಾಜ್ಯಗಳಲ್ಲಿ ಮಳೆಯಾರ್ಭಟ ಮುಂದುವರಿದಿದೆ. ಈ ಮಹಾಮಳೆಯಿಂದ ಅಪಾರ ಹಾನಿ ಉಂಟಾಗಿದ್ದು, ಆಗಸ್ಟ್ 19ರವರೆಗೂ ಹಲವೆಡೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಎರಡು ದಿನಗಳಲ್ಲಿ ಹಿಮಾಚಲ ಪ್ರದೇಶದಲ್ಲಿ ಹಾಗೂ ಉತ್ತರಾಖಂಡ ರಾಜ್ಯಗಳಲ್ಲಿ ಹಾಗೂ ಆಗಸ್ಟ್ 19ರವರೆಗೆ ಈಶಾನ್ಯ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಂಗಳವಾರ ಮುನ್ಸೂಚನೆ ನೀಡಿದೆ.

ಕಳೆದ ಕೆಲವು ದಿನಗಳಲ್ಲಿ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಿಂದ ಭಾರಿ ಮಳೆಯಾಗಿದೆ. ಇವೆರಡು ರಾಜ್ಯಗಳ ಹಲವೆಡೆ ಭೂಕುಸಿತಗಳು ಸಂಭವಿಸಿದ್ದು, ರಸ್ತೆಗಳಲ್ಲಿ ಸಂಚಾರ ಬಂದ್ ಆಗಿದ್ದು, ಮನೆಗಳಿಗೂ ತೊಂದರೆ ಆಗಿದೆ.
ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 16 ರಂದು ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಉತ್ತರಾಖಂಡದ ಮೇಲೆ ಆಗಸ್ಟ್ 19 ರವರೆಗೆ ಜೋರು ಮಳೆ ಆಗಲಿದ್ದು, ಈ ಸಂಬಂಧ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಿಮಾಚಲದ ಕೆಲವು ಜಿಲ್ಲೆಗಳು ಸಾಧಾರಣದಿಂದ ಭಾರೀ ಮಳೆಯಾಗುವ ಸಂಭವವಿದೆ.
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಭಾರಿ ಮಳೆ
ದೇಶದ ಪೂರ್ವ ಮತ್ತು ಪಕ್ಕದ ಮಧ್ಯ ಭಾರತದ ರಾಜ್ಯಗಳಲ್ಲಿ ಮುಂಗಾರು ಹೆಚ್ಚು ಸಕ್ರಿಯವಾಗಿರುವ ಲಕ್ಷಣಗಳು ಕಂಡು ಬರಲಿವೆ. ಪೂರ್ವ ಭಾರತದ ಪಶ್ಚಿಮ ಬಂಗಾಳ ರಾಜ್ಯದ ವಿವಿಧೆಡೆ ಆಗಸ್ಟ್ 17ರವರೆಗೆ, ಜಾರ್ಖಂಡ್ ನಲ್ಲಿ ಆಗಸ್ಟ್ 18, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಗಸ್ಟ್ 16 ರಂದು, ಒಡಿಶಾದಲ್ಲಿ ಆಗಸ್ಟ್ 19ರವರೆಗೆ ತಕ್ಕಮಟ್ಟಿಗೆ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಗಳು ಇವೆ ಎಂದು ಇಲಾಖೆ ವರದಿ ಮಾಹಿತಿ ನೀಡಿದೆ.

ಮುಂದಿನ ಎರಡು ದಿನ ಒಡಿಶಾದಲ್ಲಿ ಅತ್ಯಧಿಕ ಮಳೆ ಹಿಡಿದುಕೊಳ್ಳಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ಈಶಾನ್ಯ ಪ್ರದೇಶದಲ್ಲಿ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಸಹ ಆಗಸ್ಟ್ 19 ರವರೆಗೆ ಭಾರೀ ಮಳೆಯ ಎಚ್ಚರಿಕೆ ಕೊಡಲಾಗಿದೆ.
ಆಗಸ್ಟ್ 19 ರವರೆಗೆ ಛತ್ತೀಸ್‌ಗಢ ನಂತರ ಪೂರ್ವ ಮಧ್ಯಪ್ರದೇಶ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದೆ ಎಂದು ತಿಳಿಸಲಾಗಿದೆ.
ಹಿಮಾಚಲದಲ್ಲಿ ಸಾವಿನ ಸಂಖ್ಯೆ 52ಕ್ಕೆ ಏರಿಕೆ
ಮೇಘಸ್ಪೋಡದಿಂದ ಹಿಮಾಚಲ ಪ್ರದೇಸದಲ್ಲಿ ಭೂಕುಸಿತ ಸಂಭವಿಸಿದೆ. ಮನೆಗಳು ಉರಳಿ ಬಿದ್ದಿವೆ. ಭಾರಿ ಮಳೆಗೆ ಸಮ್ಮರ್‌ಹಿಲ್ ಮತ್ತು ಶಿಮ್ಲಾದ ಫಾಗ್ಲಿಯಲ್ಲಿ ಎರಡು ಮಾರಣಾಂತಿಕ ಭೂಕುಸಿತಗಳು ಸಂಭವಿಸಿವೆ. ಸೋಮವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಒಟ್ಟಾರೆ ಈ ವರೆಗೆ 52 ಜನ ಸಾವನ್ನಪ್ಪಿದ್ದಾರೆ ಎಂದು ವರದಿ ಆಗಿದೆ.
ಸಮ್ಮರ್ ಹಿಲ್ ಬಳಿ 50 ಮೀಟರ್ ರೈಲ್ವೆ ಸೇತುವೆ ಕುಸಿದು ಬಿದ್ದಿದೆ. ಟ್ರ್ಯಾಕ್‌ನ ಒಂದು ಭಾಗವನ್ನು ಗಾಳಿಯಲ್ಲಿ ನೇತಾಡುತ್ತಿದೆ. ಶಿಮ್ಲಾದಿಂದ 6 ಕಿಮೀ ದೂರದಲ್ಲಿರುವ ಸಮ್ಮರ್ ಹಿಲ್ ಬಳಿಯ ಕಾಂಕ್ರೀಟ್ ಸೇತುವೆ ಸಂಪೂರ್ಣ ಹಾಲಾಗಿದೆ. ಐದಾರು ಸ್ಥಳಗಳಲ್ಲಿ ಹೆರಿಟೇಜ್ ಟ್ರ್ಯಾಕ್ ಹಾನಿಗೊಳಗಾಗಿದೆ ಎಂದು ತಿಳಿದು ಬಂದಿದೆ.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ











Click it and Unblock the Notifications