India rain: ದೇಶದ ಈ ಭಾಗದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್‌ ಘೋಷಣೆ

ಚೆನ್ನೈ, ನವೆಂಬರ್‌, 20: ಕಳೆದ ಒಂದು ವಾರದಿಂದ ದೇಶದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಒಂದು ವಾರದವರೆಗೆ ತಮಿಳುನಾಡು ಮತ್ತು ಕೇರಳದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನ ರಾಮನಾಥಪುರಂ ಜಿಲ್ಲೆಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದ್ದು, ರಾಜ್ಯದ ಇತರ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ತಮಿಳುನಾಡಿನ ತಿರುವಳ್ಳೂರು ಜಿಲ್ಲೆ ಸೇರಿದಂತೆ ಕನ್ಯಾಕುಮಾರಿ, ರಾಮನಾಥಪುರಂ, ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

heavy-rainfall-forecast

ಇನ್ನು ಕೇರಳದ ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಕೋಝಿಕ್ಕೋಡ್ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗಿದ್ದು, ತಮಿಳುನಾಡಿನ ತಿರುವರೂರ್ ಜಿಲ್ಲೆಯಲ್ಲಿ ವಾರಾಂತ್ಯದಲ್ಲಿ ಅತಿ ಹೆಚ್ಚು ಅಂದರೆ 11 ಸೆಂಟಿ ಮೀಟ್‌ ಮಳೆಯಾಗಿದೆ.

ಹಾಗೆಯೇ ಯಾವುದೇ ಅನಾಹುತಗಳು ಸಂಭವಿಸದಂತೆ ತಮಿಳುನಾಡಿನ ಮೂರು ಜಿಲ್ಲೆಗಳಲ್ಲಿ 400ಕ್ಕೂ ಹೆಚ್ಚು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿಯನ್ನು ಮತ್ತು ಚೆನ್ನೈನಲ್ಲಿ 200 ಸಿಬ್ಬಂದಿಯನ್ನು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+