India Rain: ಭಾರೀ ಮಳೆ ಮುನ್ಸೂಚನೆ- ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ
India Rain: ದೇಶದ ಕೆಲವೇ ಕಲವು ರಾಜ್ಯಗಳಲ್ಲಿ ಮಳೆರಾಯ ಮೆಲ್ಲಗೆ ತಂಪೆರೆಯುತ್ತಿದ್ದಾನೆ. ಇನ್ನುಳಿದಂತೆ ಬಹುತೇಕ ಭಾಗಗಲ್ಲಿ ತಾಪಮಾನದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮತ್ತೊಂದೆಡೆ ದೇಶದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಎಷ್ಟು ದಿನ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬಿಸಿಲಿನ ತಾಪದಿಂದ ಬೆಂದಿದ್ದ ದೇಶದ ಈ ಭಾಗದ ಜನರಿಗೆ ಭಾರತೀಯ ಹವಾಮಾನ ಇಲಾಖೆ ಸಿಹಿಸುದ್ದಿಯೊಂದನ್ನು ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಈ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಹವಾಮಾನ ಇಲಾಖೆಯು, ಏಪ್ರಿಲ್ 13ರವರೆಗೆ ಮಧ್ಯಪ್ರದೇಶ, ಛತ್ತೀಸ್‌ಗಢ, ಮರಾಠವಾಡ ಮತ್ತು ಮಧ್ಯ ಮಹಾರಾಷ್ಟ್ರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು ಎಂದು ಹೇಳಿದೆ. ಮತ್ತೊಂದೆಡೆ ಇದೇ ಅವಧಿಯಲ್ಲಿ ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಬಿಹಾರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಮುನ್ಸೂಚನೆ ನೀಡಿದೆ.
ಏಪ್ರಿಲ್ 15ರವರೆಗೆ ತೆಲಂಗಾಣ, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ. ಅದೇ ಸಮಯದಲ್ಲಿ, ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣ, ರಾಜಸ್ಥಾನದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಹಿಮಾಚಲ ಪ್ರದೇಶದಲ್ಲಿ ಇಂದು (ಏಪ್ರಿಲ್ 12) ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಭಾರತದ ಹವಾಮಾನ ಇಲಾಖೆ ಈ ರಾಜ್ಯಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಏಪ್ರಿಲ್ 13 ರಿಂದ 16ರವರೆಗೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ಈ ವೇಳೆ ಗಾಳಿ ವೇಗವು ಗಂಟೆಗೆ 40ರಿಂದ 50 ಕಿಲೋ ಮೀಟರ್‌ವರೆಗೂ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಅಲ್ಲದೆ, ಭಾರೀ ಮಳೆ ವೇಳೆ, ವಿದ್ಯುತ್ ಅಡೆತಡೆಗಳು, ಭೂಕುಸಿತಗಳು, ಬಂಡೆಗಳ ಕುಸಿತಗಳು ಮತ್ತು ಮಣ್ಣಿನ ಕುಸಿತಗಳಂತಹ ಪರಿಣಾಮ ಉಂಟಾಗವಬಹುದು. ಇದರಿಂದ ರಸ್ತೆಗಳು, ಹೆದ್ದಾರಿಗಳು, ಸೇತುವೆಗಳು ಮತ್ತು ಜಲಮಾರ್ಗಗಳಲ್ಲಿ ನಿರ್ಬಂಧ ಹೇರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.












Click it and Unblock the Notifications