India rain: ಮುಂದಿನ ಮುರ್ನಾಲ್ಕು ದಿನ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ
India Weather: ಭಾರತದ ಬಹುತೇಕ ರಾಜ್ಯಗಳಲ್ಲಿ ಭೀಕರ ಬಿಸಿಲಿನ ವಾತಾವರಣ ನಿರ್ಮಾಣವಾಗಿದ್ದು, ಇದರ ನಡುವೆಯೇ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಹಾಗೆಯೇ ಏಪ್ರಿಲ್ 1ರವರೆಗೂ ದೇಶದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಹವಾಮಾನ ಇಲಾಖೆ ಪ್ರಕಾರ, ಮಾರ್ಚ್ 29 ಮತ್ತು 30ರಂದು ದೇಶದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈಶಾನ್ಯ ಭಾರತದ ರಾಜ್ಯಗಳಲ್ಲಿ ಮಾರ್ಚ್ 30ರಿಂದ ಏಪ್ರಿಲ್ 01ರವರೆಗೆ ಗುಡುಗು ಸಹಿತ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಮಾರ್ಚ್ 27ರಂದು ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಲಘುವಾಗಿ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಾರ್ಚ್ 29 30, 31ರಂದು ಮಳೆ ಮುಂದುವರೆಯಲಿದೆ. ಇನ್ನು ಈಶಾನ್ಯ ಭಾರತದ ರಾಜ್ಯಗಳಲ್ಲಿ ಮಾರ್ಚ್ 30ರಿಂದ ಏಪ್ರಿಲ್ 01 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.
ನವದೆಹಲಿಯಲ್ಲಿ ಹವಾಮಾನ ಹೇಗಿರಲಿದೆ?: ಹವಾಮಾನ ಇಲಾಖೆಯ ಪ್ರಕಾರ, ದೇಶದ ರಾಜಧಾನಿ ನವದೆಹಲಿಯಲ್ಲಿ ಇಂದು (ಮಾರ್ಚ್ 28) ಕನಿಷ್ಠ ತಾಪಮಾನ 20 ಡಿಗ್ರಿ ಮತ್ತು ಗರಿಷ್ಠ ತಾಪಮಾನ 36 ಡಿಗ್ರಿ ದಾಖಲಾಗುವ ಸಾಧ್ಯತೆಯಿದೆ. ಅಲ್ಲದೆ ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣ ಆಗಲಿದ್ದು, ಲಘು ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಮಾರ್ಚ್ 29, 30ರಂದು ಇಲ್ಲಿ ಲಘು ಮಳೆಯಾಗಲಿದ್ದು, ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ತಿಳಿಸಿದೆ.
ಉತ್ತರ ಪ್ರದೇಶದಲ್ಲಿ ಹವಾಮಾನ ಹೇಗಿರಲಿದೆ?: ಇಂದು ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕನಿಷ್ಠ ತಾಪಮಾನ 21 ಡಿಗ್ರಿ ಮತ್ತು ಗರಿಷ್ಠ ತಾಪಮಾನ 35 ಡಿಗ್ರಿ ದಾಖಲಾಗಬಹುದು. ಅಲ್ಲದೆ ಲಕ್ನೋದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗಾಜಿಯಾಬಾದ್‌ನಲ್ಲಿ ಕನಿಷ್ಠ ತಾಪಮಾನ 21 ಡಿಗ್ರಿ ಮತ್ತು ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಲಿದೆ ಎಂದು ತಿಳಿಸಿದೆ.
ಅಲ್ಲದೆ ಗಾಜಿಯಾಬಾದ್‌ನಲ್ಲಿ ಇಂದು (ಮಾರ್ಚ್ 28) ಲಘು ಮಳೆಯಾಗಲಿದೆ. ಗೌತಮ್ ಬುದ್ಧ ನಗರದಲ್ಲಿ ಕನಿಷ್ಠ ತಾಪಮಾನ 21 ಡಿಗ್ರಿ ಮತ್ತು ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಅಲ್ಲದೆ ಇಲ್ಲಿ ಇಂದು ಕೂಡ ಲಘು ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನೂ ನೀಡಿದೆ.
ಸ್ಕೈಮೆಟ್ ಪ್ರಕಾರ, ಪಶ್ಚಿಮ ಹಿಮಾಲಯ, ಪಂಜಾಬ್, ಹರಿಯಾಣ, ನವದೆಹಲಿ, ಸಿಕ್ಕಿಂನಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications