India Rain: ಮಾರ್ಚ್‌ 26ರವರೆಗೂ ದೇಶದ ಈ ಭಾಗಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

India Rain: ದೇಶದ ಬಹುತೇಕ ರಾಜ್ಯದಗಳಲ್ಲಿ ತಾಪಮಾನದ ಪ್ರಮಾನ ದಿನದಿಂದ ದಿನಕ್ಕೆ ಏರಿಕೆಆಗುತ್ತಲಿದ್ದು, ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಇನ್ನು ಕೆಲವು ರಾಜ್ಯಗಳ ಕೆಲವೆಡೆ ಮಾತ್ರ ಮಂಜಿನಂತಹ ಮಳೆಯಾಗುತ್ತಿದೆ. ಹಾಗೆಯೇ ಮಾರ್ಚ್‌ 26ರವರೆಗೂ ಹಲವು ರಾಜ್ಯಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಆಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಹವಾಮಾನ ಇಲಾಖೆಯು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಹಿಮಾಲಯ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 21ರಿಂದ 26ರವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗುತ್ತದೆ ಎಂದು ಮುನ್ಸೂಚನೆ ನೀಡಿದೆ. ಜೊತೆಗೆ, ಅಸ್ಸಾಂ ಮತ್ತು ಮೇಘಾಲಯದಲ್ಲಿ 21-23 ಮತ್ತು ಮಾರ್ಚ್ 25ರಂದು ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ಆರೆಂಜ್‌ ಲರ್ಟ್‌ ಘೋಷಣೆ ಮಾಡಲಾಗಿದೆ.

India Rain Heavy rainfall forecast in this parts of india till March 26 IMD Prediction

ಇನ್ನು ಮಾರ್ಚ್ 21, 22 ಮತ್ತು 24ರಂದು ಪಂಜಾಬ್‌ನಲ್ಲಿ ಮತ್ತು ಮಾರ್ಚ್ 24ರಂದು ಹರಿಯಾಣದಲ್ಲಿ ಪ್ರತ್ಯೇಕವಾದ ಲಘು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಮಾರ್ಚ್ 21-24ರಂದು ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್‌, ಬಾಲ್ಟಿಸ್ತಾನ್‌, ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ಲಘು ಮಳೆ ಬೀಳಲಿದೆ ಎಂದು IMD ಮುನ್ಸೂಚನೆ ನೀಡಿದೆ. ಇನ್ನು ಮಾರ್ಚ್ 22ರಂದು ಹಿಮಾಚಲ ಪ್ರದೇಶದಲ್ಲಿ ಅಲ್ಲಲ್ಲು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಚಂಡಮಾರುತದ ಪರಿಣಾಮ ಮುಂದಿನ ಕೆಲವು ದಿನಗಳವರೆಗೆ ಉತ್ತರ ಜಾರ್ಖಂಡ್‌, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ದಕ್ಷಿಣ ಭಾರತದಲ್ಲಿ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳದ ಕೆಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಬೀಳುತ್ತದೆ. ಹವಾಮಾನ ಇಲಾಖೆಯು ಚೆನ್ನೈನಲ್ಲಿ ಇಂದು 31ರಿಂದ 30 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ನವದೆಹಲಿಯಲ್ಲಿ ಹವಾಮನ ಹೇಗಿರಲಿದೆ?: ಇಂದು ದೆಹಲಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾದರೆ, ಕನಿಷ್ಠ ತಾಪಮಾನವು 16 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ. ಇನ್ನು ನಗರದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನವನ್ನು ದಾಖಲಿಸಿದೆ, ಇದು ಋತುಮಾನದ ಸರಾಸರಿಗಿಂತ ಕಡಿಮೆಯಾಗಿದೆ. ಜನವರಿಯಿಂದೀಚೆಗೆ ರಾಷ್ಟ್ರ ರಾಜಧಾನಿಯಲ್ಲಿ ಬುಧವಾರದಂದು ಗರಿಷ್ಠ ಗರಿಷ್ಠ ತಾಪಮಾನ 33.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ತಿಳಿಸಿದೆ.

ಈ ಪ್ರದೇಶಗಳಲ್ಲಿ ಮಾರ್ಚ್‌ 25ರವರೆಗೂ ಮಳೆ: ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಇಲ್ಲಿದೆ ಗಾಳಿಯ ವೇಗವು ಗಂಟೆಗೆ 25-35 ಕಿಲೋ ಮೀಟರ್‌ ಇರಲಿದೆ. ಮತ್ತೊಂದೆಡೆ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 25ರವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+