India Rain: ಮುಂದಿನ ಒಂದು ವಾರ ದೇಶದ ಈ ಭಾಗಗಳಲ್ಲಿ ಸುನಾಮಿ ಮಳೆ ಮುನ್ಸೂಚನೆ-ಎಲ್ಲೆಲ್ಲಿ?

India Rain: ಭಾರತದ ಉತ್ತರ ಭಾಗದಲ್ಲಿ ಅಬ್ಬರದ ಮಳೆಯಾಗಿದ್ದು, ಪರಿಣಾಮ ಹಲವು ಅನಾಹುತಗಳು ಸಂಭವಿಸಿವೆ. ಹಾಗೆಯೇ ಮುಂದಿನ ಒಂದು ವಾರಗಳ ಕಾಲ ಹಲವು ರಾಜ್ಯಗಳಲ್ಲಿ ಸುನಾಮಿಯಂತಹ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ ಸೋಮವಾರ (ಏಪ್ರಿಲ್‌ 14) ತಡರಾತ್ರಿ ಪ್ರಳಯದಂತಹ ಮಳೆ ಸುರಿದು ಹಲವು ಅನಾಹುಗಳು ಸೃಷ್ಟಿಯಾಗಿದ್ದು, ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿವೆ. ಇನ್ನು ಮುಂದಿನ ಹಲವು ದಿನಗಳ ಕಾಲ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ನವದೆಹಲಿ ಸೇರಿದಂತೆ ವಾಯುವ್ಯ ಭಾರತದಲ್ಲಿ ಗುಡುಗು, ಮಿಂಚು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ರಾಷ್ಟ್ರೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

India Rain Heavy Rainfall Forecast in This states of india for Next one Week

ಮುಂದಿನ ಏಳು ದಿನಗಳಲ್ಲಿ, ಗುಜರಾತ್ ಮತ್ತು ಮಧ್ಯ ಭಾರತದ ಕೆಲವು ಭಾಗಗಳಲ್ಲಿ ತಾಪಮಾನವು 2-4 ಡಿಗ್ರಿ ಸೆಲ್ಸಿಯಸ್ ಮತ್ತು ಪೂರ್ವ ಭಾರತ ಮತ್ತು ಮಹಾರಾಷ್ಟ್ರದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಏಪ್ರಿಲ್ 16 ಮತ್ತು 18ರ ನಡುವೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ರಾಯಲಸೀಮಾದಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

ಏಪ್ರಿಲ್ 18 ಮತ್ತು 21ರ ನಡುವೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮತ್ತೊಂದೆಡೆ ಪಂಜಾಬ್, ಹರಿಯಾಣ, ಚಂಡೀಗಢ, ನವದೆಹಲಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಇದೇ ಅವಧಿಯಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಏಪ್ರಿಲ್ 18ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಹಿಮಾಚಲ ಪ್ರದೇಶ ಮತ್ತು ಏಪ್ರಿಲ್ 18 ಮತ್ತು 19 ರಂದು ಉತ್ತರಾಖಂಡದಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಏಪ್ರಿಲ್ 16 ಮತ್ತು 22 ರ ನಡುವೆ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು, ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆಯಿದೆ. ಏಪ್ರಿಲ್ 18 ಮತ್ತು 19ರಂದು ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದು, ಅದರಲ್ಲೂ ಕೇರಳ ಮತ್ತು ಮಾಹೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಹೆಚ್ಚಿದೆ ಎಂದು ತಿಳಿಸಿದೆ.

ಏಪ್ರಿಲ್ 16 ಮತ್ತು 18 ರನಡುವೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ರಾಯಲಸೀಮಾದಲ್ಲಿ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+