India Rain: ದೇಶದ ಎಲ್ಲೆಲ್ಲಿ ಭಾರೀ ಮಳೆ.? ಯಾವ್ಯಾವ ರಾಜ್ಯಗಳಲ್ಲಿ ಅನಾವೃಷ್ಟಿ?

India Rain: ದೇಶದ ಬಹುತೇಕ ರಾಜ್ಯಗಳಲ್ಲಿ ಜೂನ್‌ ಆರಂಭದಿಂದ ಮುಂಗಾರು ಆರಂಭವಾಗಿದ್ದು, ಹಲವೆಡೆ ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ. ಇನ್ನೂ ಕೆಲವೆಡೆ ಮಾತ್ರ ಮಳೆ ಕೊರತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಲ್ಲೆಲ್ಲಾ ಅತೀವೃಷ್ಟಿ ಹಾಗೂ ಎಲ್ಲೆಲ್ಲಿ ಅನಾವೃಷ್ಟಿ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಹಿಮಾಚಲ ಪ್ರದೇಶ, ಪಂಜಾಬ್, ಹರ್ಯಾಣ, ಒಡಿಶಾ ಹಾಗೂ ಬಿಹಾರ ಸೇರಿದಂತೆ ದೇಶದ 9 ರಾಜ್ಯಗಳಲ್ಲಿ ಕಳೆದ ಜೂನ್ ಮತ್ತು ಜುಲೈ ತಿಂಗಳ 20ರವರೆಗೆ ಮಳೆ ಅಭಾವ ಪರಿಸ್ಥಿತಿ ಕಾಣಿಸಿಕೊಂಡಿದೆ. ಈ ರಾಜ್ಯಗಳಲ್ಲಿ ಶೇಕಡ 20 ರಿಂದ 40ರವರೆಗೆ ಕೊರತೆ ಕಾಣಿಸಿಕೊಂಡಿದೆ. ಆದರೆ ದಕ್ಷಿಣ ಪರ್ಯಾಯದ್ವೀಪ ಪ್ರದೇಶ ಸೇರಿದಂತೆ ಆರು ರಾಜ್ಯಗಳಲ್ಲಿ ವಾಡಿಕೆಗಿಂತ ಅಧಿಕ ಮಳೆ ಸುರಿದಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. .

India Rain Heavy rainfall in which states Know details

ರಾಜ್ಯವಾರು ಅಂಕಿ ಅಂಶಗಳ ಪ್ರಕಾರ, ಜಾರ್ಖಂಡ್‌ನಲ್ಲಿ ಅತ್ಯಧಿಕ ಅಂದರೆ ಶೇಕಡ 49ರಷ್ಟು ಕಡಿಮೆ ಮಳೆ ಬಿದ್ದಿದ್ದು, ತಮಿಳುನಾಡಿನಲ್ಲಿ ಶೇಕಡ 83ರಷ್ಟು ಹೆಚ್ಚು ಮಳೆಯಾಗಿದೆ. ಒಟ್ಟಾರೆಯಾಗಿ ದೇಶದಲ್ಲಿ ಸರಾಸರಿ ಶೇಕಡ 1ರಷ್ಟು ಕಡಿಮೆ ಮಳೆ ಬಿದ್ದಿದೆ. ವಾಯವ್ಯ ಭಾರತದಲ್ಲಿ ಶೇಕಡ 14, ಪೂರ್ವ ಮತ್ತು ಈಶಾನ್ಯ ರಾಜ್ಯಗಳಲ್ಲಿ ಶೇಕಡ 12ರಷ್ಟು ಕಡಿಮೆ ಮಳೆಯಾಗಿದೆ.

ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕಳೆದ 24 ಗಂಟೆಗಳಲ್ಲಿ ಒಡಿಶಾ, ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುತ್ತಿತ್ತಿದೆ. ದಕ್ಷಿಣ ಭಾರತದಲ್ಲಿ ವಾಡಿಕೆಗಿಂತ ಶೇಕಡ 26ರಷ್ಟು ಅಧಿಕ ಮಳೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಈ ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಅಲ್ಲದೆ ಭಾರೀ ಮಳೆಯಿಂದ ದೇಶದ ಪ್ರಮುಖ 150 ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಲೇ ಇದ್ದು, ಇದರಿಂದ ಅನ್ನದಾತರ ಮುಖದಲ್ಲಿ ಮಂದಹಾಸ ಹೆಚ್ಚಾದಂತಾಗಿದೆ.

ದೇಶದ ಈ ಭಾಗಗಳಲ್ಲಿ ಭಾರೀ ಮಳೆ: ದೇಶದ ಹಲವು ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5 ದಿನಗಳ ಕಾಲ ಗುಡುಗು ಸಹಿತ ಬಿರುಗಾಳಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಯಾವ್ಯಾವತ್ತು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಹಿನ್ನೆಲೆ ಗುಜರಾತ್ ಮತ್ತು ಉತ್ತರಾಖಂಡ ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಜುಲೈ 21-24ರವರೆಗೆ ಮೂರು ದಿನಗಳವರೆಗೆ ಗುಜರಾತ್‌ನಲ್ಲಿ, ಜುಲೈ 21-22ರ ವರೆಗೆ ಉತ್ತರಾಖಂಡದಲ್ಲಿ ಭಾರೀ ಮಳೆ ಬೀಳಲಿದೆ.

ಮತ್ತೊಂದೆಡೆ ಇದೇ ಅವಧಿಯಲ್ಲಿ ಭಾರೀ ಮಳೆ ಹಿನ್ನೆ ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಂತಹ ಈಶಾನ್ಯ ರಾಜ್ಯಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಜುಲೈ 24ರ ವರೆಗೆ ಕೊಂಕಣ ಮತ್ತು ಗೋವಾ, ಮಧ್ಯ ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶದ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಜುಲೈ 21-22ರ ವರೆಗೂ ಛತ್ತೀಸ್‌ಗಢ ಮತ್ತು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.

ಕರ್ನಾಟಕದ ಉತ್ತರ ಒಳನಾಡು, ಕೇರಳ, ಮಾಹೆ, ಮರಾಠವಾಡ, ಕರಾವಳಿ ಆಂಧ್ರಪ್ರದೇಶ, ಯಾನಂ ಮತ್ತು ತೆಲಂಗಾಣದಲ್ಲಿ ಜುಲೈ 21ರಂದು ಅಂದರೆ ಇನದನೂ ಕೆಲವೇ ಕ್ಷಣಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಇನ್ನು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗರಿಷ್ಠ ತಾಪಮಾನವು ಸುಮಾರು 37 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ ತಾಪಮಾನ 26.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾತ್ರಿ ವೇಳೆಗೆ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ.

ಹಿಮಾಚಲ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಪ್ರಕಾರ, ಕಂಗ್ರಾ, ಮಂಡಿ, ಹಮೀರ್‌ಪುರ, ಶಿಮ್ಲಾ, ಸಿರ್ಮೌರ್ ಬಿಲಾಸ್‌ಪುರ್ ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+