India Rain Update: ಮುಂದಿನ ಕೆಲ ದಿನಗಳ ಕಾಲ ಭಾರತದ ಈ ರಾಜ್ಯಗಳಲ್ಲಿ ಭಾರೀ ಮಳೆ, ಮಾಹಿತಿ, ವಿವರ
ನವದೆಹಲಿ, ನವೆಂಬರ್, 19: ಮಳೆಯಿಲ್ಲದೆ ದೇಶದ ಬಹುತೇಕ ರಾಜ್ಯಗಳಲ್ಲಿ ಬರದ ಛಾಯೆ ಆವರಿಸಿದೆ. ಮತ್ತೊಂದೆಡೆ ಕಲವೆಡೆ ಮಾತ್ರ ಆಗಾಗ ಮಳೆಯಾಗುತ್ತಿದೆ. ಇಂದು ಕೂಡ ಹಲವು ರಾಜ್ಯಗಳಲ್ಲಿ ಅಬ್ಬರದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವೆಲ್ಲ ರಾಜ್ಯಗಳಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಕೇರಳ, ತಮಿಳುನಾಡು ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಇಂದು (ನವೆಂಬರ್ 19) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಲಡಾಖ್‌ನಲ್ಲಿ ಪ್ರತ್ಯೇಕವಾದ ಮಳೆ ಸುರಿಯಲಿದೆ. ಇನ್ನು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಯಾವ್ಯಾವ ರಾಜ್ಯಗಳಲ್ಲಿ ಮಳೆ?
ಭಾರತೀಯ ಹವಾಮಾನ ಇಲಾಖೆ ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಅಲ್ಲಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ಇದೆ. ಇನ್ನು ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಮಂಜು ಮುಚ್ಚಿದ ವಾತಾವರಣ ಇರಲಿದೆ ಎಂದು ತಿಳಿಸಿದೆ. ಹಲವಾರು ರಾಜ್ಯಗಳಲ್ಲಿನ ಹವಾಮಾನ ಪರಿಸ್ಥಿತಿಗಳ ನೋಟ:-
ನವದೆಹಲಿಯಲ್ಲಿ ವಾತಾವರಣ ಹೇಗಿರಲಿದೆ?
ರಾಷ್ಟ್ರ ರಾಜಧಾನಿ ನಹದೆಹಲಿಯಲ್ಲಿ ಬಹುತೇಕ ಭಾಗಗಳಲ್ಲಿ ಮಂಜು ಮುಸುಕಿದ ವಾತಾವರಣ ಇದ್ದು, ಗರಿಷ್ಠ 28 ಮತ್ತು ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಶನಿವಾರ ಗರಿಷ್ಠ 28.9 ಮತ್ತು ಕನಿಷ್ಠ 12.6 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಕೋಲ್ಕತ್ತಾದಲ್ಲಿ ಭಾನುವಾರ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ 30 ಮತ್ತು ಕನಿಷ್ಠ ತಾಪಮಾನವು 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನು ಸಿಕ್ಕಿಂ ಮತ್ತು ಪಶ್ಚಿಮ ಬಂಗಾಳದ ಹಲವು ಕಡೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯುವ ಮುನ್ಸೂಚನೆ ನೀಡಿದೆ. ಹಾಗೆಯೇ ಒಡಿಶಾದ ಎಲ್ಲಾ ಜಿಲ್ಲೆಗಳಲ್ಲೂ ಬಿಸಿಲಿನ ವಾತಾವಾರಣ ಕಂಡುಬರಲಿದೆ. ಭುವನೇಶ್ವರದಲ್ಲಿ ಗರಿಷ್ಠ 32 ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ತಿಳಿಸಿದೆ.
ಶಿಮ್ಲಾದಲ್ಲಿ ಹಲವೆಡೆ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ 19 ಮತ್ತು ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನು ಕಲವೆಡೆ ಒಣಹವೆ ಮುಂದುವರೆಯಲಿದೆ ಎನ್ನುವ ಮಾಹಿತಿಯನ್ನು ನೀಡಿದೆ.
ತಮಿಳುನಾಡಿನ ಹಲವೆಡೆ ಮಳೆ
ಇನ್ನು ಕಳೆದ 24 ಗಂಟೆಗಳಲ್ಲಿ ತಮಿಳುನಾಡಿನ ಹಲವೆಡೆ ಮಳೆ ಆಗಿದೆ. ಕಾರೈಕಲ್ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದರೆ, ಪುದುಚೇರಿಯಲ್ಲಿ ಅತೀ ಕಡಿಮೆ ಮಳೆಯಾಗಿದೆ. ಈ ಪ್ರದೇಶದ ಬಯಲು ಸೀಮೆಯಲ್ಲಿ ನಾಮಕ್ಕಲ್‌ನಲ್ಲಿ ಕನಿಷ್ಠ ಕನಿಷ್ಠ ತಾಪಮಾನ 19.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ಈರೋಡ್ ಈ ಪ್ರದೇಶದಲ್ಲಿ ಗರಿಷ್ಠ ತಾಪಮಾನ 34.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications