ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತವೇ ನಂ.01
ನವದೆಹಲಿ, ಫೆಬ್ರವರಿ.04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕಾಗಿ ಲಸಿಕೆ ವಿತರಣೆಯಲ್ಲಿ ಭಾರತವು ಜಗತ್ತಿನಲ್ಲೇ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ. ಕೇವಲ 18 ದಿನಗಳಲ್ಲಿ 40 ಲಕ್ಷ ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.
ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 41,38,918 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲೂ ಕೂಡಾ ಭಾರಿ ಇಳಿಮುಖವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದ 14 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದೇ ಒಂದು ಸಾವಿನ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

40 ಲಕ್ಷ ಲಸಿಕೆ ವಿತರಣೆಯಲ್ಲಿ ಭಾರತಕ್ಕೆ ಅಗ್ರಸ್ಥಾನ:
ವಿಶ್ವದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನವನ್ನು ಬಹುಪಾಲು ಎಲ್ಲ ರಾಷ್ಟ್ರಗಳು ನಡೆಸುತ್ತಿವೆ. ಈ ಪೈಕಿ ಭಾರತದಲ್ಲಿ ಕ್ಷಿಪ್ರಗತಿಯ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ. 40 ಲಕ್ಷ ಜನರಿಗೆ ಲಸಿಕೆ ನೀಡುವುದಕ್ಕೆ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾದಲ್ಲಿ 20 ದಿನ ತೆಗೆದುಕೊಳ್ಳಲಾಗಿದೆ. ಇಸ್ರೇಲ್ ನಲ್ಲಿ 40 ಲಕ್ಷ ಫಲಾನುಭವಿಗಳಿಗೆ ಲಸಿಕೆ ನೀಡಲು 39 ದಿನಗಳೇ ಬೇಕಾಗಿತ್ತು. ಇಂಗ್ಲೆಂಡ್ ನಲ್ಲಿ ಕೂಡಾ 39 ದಿನಗಳಲ್ಲಿ 40 ಲಕ್ಷ ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿತ್ತು. ಆದರೆ ಭಾರವತು ಕೇವಲ 18 ದಿನಗಳಲ್ಲೇ 40 ಲಕ್ಷ ಜನರಿಗೆ ಕೊವಿಡ್-19 ಲಸಿಕೆಯನ್ನು ನೀಡುವಲ್ಲಿ ಯಶಸ್ವಿಯಾಗಿದೆ.












Click it and Unblock the Notifications