ಇರಾನ್ ನಾಯಕರೊಂದಿಗೆ ಸಂಪರ್ಕಕ್ಕೆ ಯತ್ನ: ಭಾರತದ ಈ ಕ್ರಮಕ್ಕೆ ಇರಾನ್ ಧನ್ಯವಾದ ಹೇಳಿದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್
Jaishankar: ಲೋಕಸಭೆ ಸಂಸತ್ ಅಧಿವೇಶನ ಪ್ರಾರಂಭವಾಗಿದೆ. 2026ರ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 9, 2026ರಿಂದ ಆರಂಭವಾಗಿದ್ದು, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ಮತ್ತು ಮಧ್ಯಪ್ರಾಚ್ಯದಲ್ಲಿನ ಬೆಳವಣಿಗೆ, ಭಾರತದ ವಿದೇಶಾಂಗ ನೀತಿ ಹಾಗೂ ಯುದ್ಧ ನಡೆಯುತ್ತಿರುವ ದೇಶಗಳಲ್ಲಿ, ಗಲ್ಫ್ ರಾಷ್ಟ್ರಗಳಲ್ಲಿ ಇರುವ ಭಾರತೀಯರ ರಕ್ಷಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಗಂಭೀರ ಚರ್ಚೆ ನಡೆದಿದೆ. ಹಾರ್ಮುಜ್ ಜಲಸಂಧಿಯು (Strait of Hormuz) ಇರಾನ್ ಮತ್ತು ಓಮನ್ ನಡುವಿನ ಕಿರಿದಾದ, ಅತ್ಯಂತ ನಿರ್ಣಾಯಕ ಸಮುದ್ರ ಮಾರ್ಗವಾಗಿದೆ. ಈ ಮಾರ್ಗದಲ್ಲಿ ಕಚ್ಚಾ ತೈಲದ ಸಾಗಾಣಿಕೆಯನ್ನು ಇರಾನ್ ತಡೆದಿದೆ. ಇದು ಭಾರತಕ್ಕೆ ಸಂಕಷ್ಟವನ್ನು ತಂದೊಡ್ಡಿದೆ. ಇದೀಗ ಇರಾನ್ ನಾಯಕರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಹೇಳಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಯುದ್ಧ ಪರಿಸ್ಥಿತಿಯು ದಿನದಿಂದ ದಿನಕ್ಕೆ ಗಂಭೀರ ಸ್ವರೂಪವನ್ನು ಪಡೆದುಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಭಾರತದ ಮೇಲೆ ಇದು ಯಾವ ರೀತಿಯ ಪರಿಣಾಮವನ್ನು ಬೀರಲಿದೆ ಎನ್ನುವ ವಿಚಾರವೂ ಸಹ ಭಾರೀ ಆತಂಕಕ್ಕೆ ಕಾರಣವಾಗಿದೆ. ಈ ಎಲ್ಲ ಗೊಂದಲಗಳಿಗೂ ಇದೀಗ ಎಸ್. ಜೈಶಂಕರ್ ಅವರು ಉತ್ತರಿಸಿದ್ದಾರೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು, ಕೇಂದ್ರ ಸರ್ಕಾರವು ಕೊಲ್ಲಿಯಲ್ಲಿರುವ ಭಾರತೀಯರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘರ್ಷದ ನಡುವೆ ಸಿಲುಕಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು, ರಾಯಭಾರ ಕಚೇರಿ ಈಗಾಗಲೇ ಹಲವಾರು ವಿದ್ಯಾರ್ಥಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದೆ. ಆದರೆ ಕತಾರ್ ಮತ್ತು ಜೋರ್ಡಾನ್‌ನಂತಹ ದೇಶಗಳಲ್ಲಿ ಸಿಲುಕಿರುವ ಭಾರತೀಯರಿಗೆ ಸಹಾಯ ಮಾಡಲು ಮತ್ತು ಅವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಪ್ರಯತ್ನಗಳು ನಡೆಯುತ್ತಿವೆ. ಸರ್ಕಾರವು ಇರಾನ್‌ನಲ್ಲಿ ವಾಸಿಸುವ ಭಾರತೀಯ ಪ್ರಜೆಗಳಿಗೆ ಸಲಹೆಗಳನ್ನು ನೀಡಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ ಟೆಹ್ರಾನ್ ಮೇಲೆ ಅಮೆರಿಕ - ಇಸ್ರೇಲಿ ದಾಳಿಗಳನ್ನು ಗಮನಿಸುತ್ತಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
Jaishankar ಇರಾನ್ - ಭಾರತಕ್ಕೆ ಧನ್ಯವಾದ ಹೇಳಿದೆ
ಇನ್ನು ಭಾರತದ ಕೊಚ್ಚಿ ಬಂದರಿನಲ್ಲಿ ಇರಾನ್ ನೌಕಾಪಡೆಯ ನೌಕೆ ಐಆರ್‍ಐಎಸ್ ಲವನ್‌ಗೆ ಆಶ್ರಯ ನೀಡಿದ್ದಕ್ಕಾಗಿ ಭಾರತಕ್ಕೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಧನ್ಯವಾದ ಅರ್ಪಿಸಿದ್ದಾರೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ರಾಜ್ಯಸಭೆಗೆ ಇರಾನ್ ಯುದ್ಧದ ಕುರಿತು ಮಾಹಿತಿ ನೀಡುವ ಸಂದರ್ಭದಲ್ಲಿ ಈ ವಿಷಯವನ್ನು ಉಲ್ಲೇಖಿಸಿದ್ದಾರೆ. ಶ್ರೀಲಂಕಾದ ಕರಾವಳಿಯಲ್ಲಿ ಅಮೆರಿಕದ ಮಿಲಿಟರಿ ಪಡೆಗಳು ಇರಾನ್‌ನ ಐಆರ್‍ಐಎಸ್ ದೇನಾ ಹಡಗಿನ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಇರಾನ್‌ನ 87 ಜನ ಸೈನಿಕ ಸಾವನ್ನಪ್ಪಿದ್ದರು. ಇದಾದ ನಂತರ ಇರಾನ್ ಸೇನೆಗೆ ಭಾರತವು ಆಶ್ರಯ ನೀಡಿತ್ತು. ಆದರೆ ಅಮೆರಿಕದ ದಾಳಿಯ ಬಗ್ಗೆ ಭಾರತವು ಪ್ರತಿಕ್ರಿಯೆ ನೀಡದೆ ಇರುವುದಕ್ಕೆ ತೀವ್ರ್ ಆಕ್ಷೇಪ ವ್ಯಕ್ತವಾಗಿತ್ತು.
ರಾಜತಾಂತ್ರಿಕ ಪರಿಹಾರವನ್ನು ಕಂಡುಕೊಳ್ಳಬೇಕು
ಮಧ್ಯಪ್ರಾಚ್ಯದಲ್ಲಿ ರಾಜತಾಂತ್ರಿಕ ಮಾರ್ಗಗಳ ಮೂಲಕ ಈಗ ಎದುರಾಗಿರುವ ಸಂಘರ್ಷವನ್ನು ಪರಿಹರಿಸಿಕೊಳ್ಳಬೇಕು ಎನ್ನುವ ನಿಲುವನ್ನು ಕೇಂದ್ರ ಸರ್ಕಾರವು ಪುನರುಚ್ಚರಿಸಿದೆ. ಅಮೆರಿಕ - ಇಸ್ರೇಲಿ Vs ಇರಾನ್ ದಾಳಿಗಳ ಕುರಿತು ರಾಜ್ಯಸಭೆಗೆ ವಿವರಿಸಿರುವ ಅವರು, ಎಲ್ಲಾ ಕಡೆಯೂ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಸಂವಾದ ಮತ್ತು ರಾಜತಾಂತ್ರಿಕತೆ ಮಾರ್ಗವೊಂದೇ ಪರಿಹಾರವಾಗಿದೆ. ಎಲ್ಲಾ ಕಡೆಯವರು ಸಂಯಮವನ್ನು ಕಾಯ್ದುಕೊಳ್ಳುವಂತೆ ಒತ್ತಾಯಿಸುವ ಹೇಳಿಕೆಯನ್ನು ಭಾರತ ನೀಡಿತ್ತು. ಉದ್ವಿಗ್ನತೆಯನ್ನು ಕಡಿಮೆ ಮಾಡಲು ಸಂವಾದ ಮತ್ತು ರಾಜತಾಂತ್ರಿಕತೆಯನ್ನು ಅನುಸರಿಸಬೇಕು ಎಂದು ನಾವು ಇನ್ನೂ ನಂಬುತ್ತೇವೆ ಎಂದು ಜೈಶಂಕರ್ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ಮತ
ಸಂಸತ್ತಿನ ಬಜೆಟ್ ಅಧಿವೇಶನದ ದ್ವಿತೀಯಾರ್ಧ ಸೋಮವಾರದಿಂದ ಪ್ರಾರಂಭವಾಗಿದ್ದು, ಲೋಕಸಭೆಯಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ಮಧ್ಯಾಹ್ನ 12.15 ಕ್ಕೆ ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷಗಳು ಮಂಡಿಸಿದ ನಿರ್ಣಯವನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಬಿರ್ಲಾ ಅವರು ಪಕ್ಷಪಾತಿಯಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಹಲವಾರು ವಿರೋಧ ಪಕ್ಷಗಳು ಮಂಡಿಸಿದ ಈ ನಿರ್ಣಯವು, ಆಡಳಿತಾರೂಢ ಬಿಜೆಪಿಯೊಂದಿಗೆ ತೀವ್ರ ಘರ್ಷಣೆಗೆ ಕಾರಣವಾಗುವ ಸಾಧ್ಯತೆಯೂ ಇದೆ. ಸದನದಲ್ಲಿ ಸಂಸದರ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಲು ಬಿಜೆಪಿ ವಿಪ್ ಜಾರಿ ಮಾಡಿದೆ. ಸ್ಪೀಕರ್ ವಿವಾದದ ಹೊರತಾಗಿ ಇಂದು ಹಲವು ಗಂಭೀರ ಚರ್ಚೆಗಳು ನಡೆದಿವೆ.
ಲೋಕಸಭೆ ಸಂಸತ್ ಅಧಿವೇಶನ
ಜನವರಿ 28ರಂದು ಆರಂಭವಾಗಿದ್ದ ಅಧಿವೇಶನವು ಏಪ್ರಿಲ್ 2ರವರೆಗೆ ನಡೆಯಲಿದೆ. ಇದೀಗ 2026ರ ಬಜೆಟ್ ಅಧಿವೇಶನದ ದ್ವಿತೀಯಾರ್ಧವು ಮಾರ್ಚ್ 9ರ ಸೋಮವಾರದಿಂದ ಪ್ರಾರಂಭವಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications