ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ಬಾರಿ ಮುಂಗಾರು ಅವಧಿಯಲ್ಲಿ ಸಾಮಾನ್ಯ ಮಳೆ; IMD

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 30: ಈ ಬಾರಿ ಮುಂಗಾರು ಅವಧಿಯಲ್ಲಿ, ಅಂದರೆ ಜೂನ್ ತಿಂಗಳಿನಿಂದ ಸೆಪ್ಟೆಂಬರ್‌ವರೆಗಿನ ನಾಲ್ಕು ತಿಂಗಳ ಅವಧಿಯಲ್ಲಿ ದೇಶದಲ್ಲಿ ಸಾಮಾನ್ಯ ಮಟ್ಟದ ಮಳೆಯಾಗಿರುವುದಾಗಿ ಭಾರತೀಯ ಹವಾಮಾನ ಇಲಾಖೆ ಗುರುವಾರ ಮಾಹಿತಿ ನೀಡಿದೆ.

ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ದೇಶದ ದಕ್ಷಿಣ ರಾಜ್ಯಗಳಲ್ಲಿ ಈಶಾನ್ಯ ಮುಂಗಾರು ಅವಧಿಯಲ್ಲಿ ಕೂಡ ಸಾಮಾನ್ಯ ಮಳೆ ದಾಖಲಾಗಲಿದೆ ಎಂದು ಮಾಹಿತಿ ನೀಡಿದೆ.

ಚಂಡಮಾರುತ ದುರ್ಬಲವಾದರೂ ಈ ರಾಜ್ಯಗಳಲ್ಲಿ ಅ.3ರವರೆಗೂ ಭಾರೀ ಮಳೆಚಂಡಮಾರುತ ದುರ್ಬಲವಾದರೂ ಈ ರಾಜ್ಯಗಳಲ್ಲಿ ಅ.3ರವರೆಗೂ ಭಾರೀ ಮಳೆ

ಈ ಮುಂಗಾರು ಋತುವಿನಲ್ಲಿ, ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ಒಟ್ಟಾರೆಯಾಗಿ 87 ಸೆ.ಮೀ.ನಷ್ಟು ದೀರ್ಘಾವಧಿಯ ಸರಾಸರಿ ಮಳೆ ದಾಖಲಾಗಿದೆ. ನೈಋತ್ಯ ಮುಂಗಾರು ಅವಧಿಯಲ್ಲಿ ಸಾಮಾನ್ಯ ಮಟ್ಟದಲ್ಲಿ ಮಳೆ ದಾಖಲಾಗಿದೆ. ಮುಂಗಾರು ದೀರ್ಘಾವಧಿ ಮಳೆ (ದೀರ್ಘಾವಧಿ ಸರಾಸರಿ ಮಳೆ ಪ್ರಮಾಣದ 96- 106%) ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಮೃತ್ಯುಂಜಯ ಮಹೋಪಾತ್ರ ತಿಳಿಸಿದ್ದಾರೆ.

 India Receives Normal Rainfall During Southwest Monsoon Period Says IMD

ಸತತ ಮೂರನೇ ವರ್ಷ ದೇಶದಲ್ಲಿ ಸಾಮಾನ್ಯ ಮಳೆ ಅಥವಾ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಿಸಿದೆ. 2019 ಹಾಗೂ 2020ರಲ್ಲಿ ಕೂಡ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಿದೆ ಎಂದು ತಿಳಿಸಿದೆ.

ಅಕ್ಟೋಬರ್ 6ರಂದು ಮುಂಗಾರು ಅಂತ್ಯ ಸೂಚನೆ:
ಅಕ್ಟೋಬರ್ 6ರ ವೇಳೆಗೆ ದೇಶದ ವಾಯವ್ಯ ಭಾಗದಲ್ಲಿ ನೈಋತ್ಯ ಮುಂಗಾರು ಅಂತ್ಯವಾಗಲು ಹವಾಮಾನ ಪರಿಸ್ಥಿತಿ ಅನುಕೂಲಕರವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದಾಗ್ಯೂ ಶಾಹೀನ್ ಚಂಡಮಾರುತ ಪ್ರಭಾವದಿಂದ ದೇಶದ ಹಲವೆಡೆ ಮಳೆಯಾಗಲಿದೆ. ಶಾಹೀನ್ ಚಂಡಮಾರುತದ ಪರಿಣಾಮದಿಂದ ಗುಜರಾತ್, ಮಹಾರಾಷ್ಟ್ರ, ಕೊಂಕಣ, ಮರಾಠವಾಡ ಮತ್ತು ಗೋವಾ ಭಾಗದಲ್ಲಿ ವಿಪರೀತ ಮಳೆಯಾಗಲಿದೆ ಎಂದು ತಿಳಿಸಿದೆ.

ಅಕ್ಟೋಬರ್ 6ರಂದು ವಾಯವ್ಯ ಭಾರತದಲ್ಲಿ ಮುಂಗಾರು ಅಂತ್ಯ ಸೂಚನೆ ಅಕ್ಟೋಬರ್ 6ರಂದು ವಾಯವ್ಯ ಭಾರತದಲ್ಲಿ ಮುಂಗಾರು ಅಂತ್ಯ ಸೂಚನೆ

ಸೆಪ್ಟೆಂಬರ್‌ ತಿಂಗಳಿನಲ್ಲಿ ಹೆಚ್ಚಿನ ಮಳೆ:
ದೇಶದಲ್ಲಿ ಈ ಬಾರಿ ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ 27% ಹೆಚ್ಚಿನ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತ ಮಳೆ ಪ್ರಮಾಣದ ಏರಿಕೆಗೆ ಕಾರಣವಾಗಲಿದೆ. ಇದರಿಂದಾಗಿ ಸಾಮಾನ್ಯವಾಗಿ ಸೆಪ್ಟೆಂಬರ್ 17ರಿಂದ ಕಡಿಮೆಯಾಗಬೇಕಿದ್ದ ಮಳೆ ಇನ್ನೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಬಾರಿ ಸೆಪ್ಟೆಂಬರ್ 1-20ರವರೆಗೆ ದೇಶದ ಎಲ್ಲೆಡೆಯೂ ಅಧಿಕ ಮಳೆಯಾಗಿದೆ. ಮಧ್ಯ ಭಾರತದಲ್ಲಿ ವಾಡಿಕೆಗಿಂತ 71% ಅಧಿಕ ಮಳೆಯಾಗಿದ್ದು, ನೈಋತ್ಯ ಭಾರತದಲ್ಲಿ 26% ಅಧಿಕ ಮಳೆ ದಾಖಲಾಗಿದೆ. ಈ ಅಕ್ಟೋಬರ್‌ ಮಧ್ಯದವರೆಗೂ ಮಳೆ ಮುಂದುವರೆಯಲಿದ್ದು, ಆನಂತರ ಮುಂಗಾರು ಅಂತ್ಯವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 India Receives Normal Rainfall During Southwest Monsoon Period Says IMD

ಚಂಡಮಾರುತ ಪ್ರಭಾವದಿಂದಾಗಿ ಅಕ್ಟೋಬರ್ 3ರವರೆಗೂ ಕೆಲವು ರಾಜ್ಯಗಳಲ್ಲಿ ಮಳೆ ಮುಂದುವರೆಯುವುದಾಗಿ ತಿಳಿಸಿದೆ. ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಸೆಪ್ಟೆಂಬರ್ 30ರಿಂದ ಆರಂಭಗೊಂಡು ಅಕ್ಟೋಬರ್ 2ರವರೆಗೂ ಅಧಿಕ ಮಳೆಯಾಗಲಿದೆ ಎಂದು ತಿಳಿಸಿದೆ.

English summary
India receives "normal" rainfall during the four-month Southwest Monsoon season from June to September, the India Meteorological Department (IMD) said on Thursday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X