ಭಾರತದಲ್ಲಿ10,000 ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣ, 24 ಗಂಟೆಗಳಲ್ಲಿ 36 ಸೋಂಕಿತರು ಸಾವು

ನವದೆಹಲಿ, ಆಗಸ್ಟ್ 26: ಭಾರತದಲ್ಲಿ ಗುರುವಾರ 10,725 ಹೊಸ ಕರೋನವೈರಸ್ ಪ್ರಕರಣಗಳು ದಾಖಲಾಗಿದ್ದು, ಕೋವಿಡ್ ಸಂಖ್ಯೆಯನ್ನು 4,43,78,920 ಕ್ಕೆ ತಲುಪಿದೆ. ದೇಶದಲ್ಲಿ ಸದ್ಯ 94,047 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಕೋವಿಡ್‌ನಿಂದಾಗಿ ಭಾರತದಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದೆ, ಇಲ್ಲಿಯವರೆಗೂ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 5,27,488 ಕ್ಕೆ ತಲುಪಿದೆ.

ಒಟ್ಟು ಸೋಂಕಿನ ಪ್ರಕರಣಗಳಲ್ಲಿ ಶೇಕಡ 0.22 ಸಕ್ರಿಯ ಪ್ರಕರಣಗಳು ಇದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಕೋವಿಡ್‌ ಸೋಂಕಿನಿಂದ ಚೇತರಿಕೆ ದರ ಶೇಕಡ 98.59 ಇರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

India Recorded 10,725 New Coronavirus Cases On Thursday

ಇಡೀ ದೇಶದಲ್ಲಿ ದಿನದ ಪಾಸಿಟಿವಿಟಿ ದರ ಶೇಕಡಾ 4.15 ರಷ್ಟಿದ್ದು ವಾರದ ಪಾಸಿಟಿವಿಟಿ ದರ ಶೇಕಡಾ 3.59 ರಷ್ಟಿದೆ ಎಂದು ಅದು ತಿಳಿಸಿದೆ.

ಕರ್ನಾಟಕದಲ್ಲಿ ಕೂಡ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಗುರುವಾರ ರಾಜ್ಯದಲ್ಲಿ1286 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 40,46,105ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಗುರುವಾರ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 40,182ಕ್ಕೆ ಏರಿಕೆಯಾಗಿದೆ.

India Recorded 10,725 New Coronavirus Cases On Thursday

ಬೆಂಗಳೂರಿನಲ್ಲಿ 796 ಮಂದಿಗೆ ಕೊರೊನಾ
ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 796 ಮಂದಿ ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಬೆಂಗಳೂರಿನಲ್ಲಿ ಇದುವರೆಗೂ ಒಟ್ಟು ಸೋಂಕಿತರ ಸಂಖ್ಯೆ 18,61,478ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಓರ್ವ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಹೇಳಿದೆ.

2358 ಸೋಂಕಿತರು ರಾಜ್ಯದಲ್ಲಿ ಗುರುವಾರ ಗುಣಮುಖರಾಗಿದ್ದಾರೆ. ಈವರೆಗೂ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,97,181ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 8, 700 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ದಿನದ ಪಾಸಿಟಿವಿಟಿ ದರ ಶೇಕಡಾ 4.64 ರಷ್ಟಿದ್ದು ವಾರದ ಪಾಸಿಟಿವಿಟಿ ದರ ಶೇಕಡಾ 4.96 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ಹೊರತು ಪಡಿಸಿ ಮೈಸೂರಿನಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ 64 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಕೊಡಗು ಜಿಲ್ಲೆಯಲ್ಲಿ 46 ಪ್ರಕರಣಗಳು ಪತ್ತೆಯಾಗಿವೆ. ಕೋಲಾರ ಜಿಲ್ಲೆಯಲ್ಲಿ 43, ಹಾಸನ ಜಿಲ್ಲೆಯಲ್ಲಿ 40, ಬಳ್ಳಾರಿ ಜಿಲ್ಲೆಯಲ್ಲಿ 33 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+