Breaking; ಭಾರತದಲ್ಲಿ 19,500 ಸಕ್ರಿಯ ಪ್ರಕರಣಗಳು ದಾಖಲು

ನವದೆಹಲಿ, ಮೇ 02; ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಹೊಸ ಪ್ರಕರಣಗಳ ಸಂಖ್ಯೆಯೂ 3 ಸಾವಿರದ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಭಾರತದಲ್ಲಿ 24 ಗಂಟೆಯಲ್ಲಿ 3157 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಸಕ್ರಿಯ ಪ್ರಕರಣಗಳ ಸಂಖ್ಯೆ 19,500 ಆಗಿದೆ.

India Records 3157 New COVID19 Cases In 24 Hours

24 ಗಂಟೆಯಲ್ಲಿ ದೇಶದಲ್ಲಿ 40 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 5,23,843 ಆಗಿದೆ.

ದೆಹಲಿಯಲ್ಲಿ ಭಾನುವಾರ 1485 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಆದರೆ ಯಾವುದೇ ಸೋಂಕಿತರು ಮೃತಪಟ್ಟಿಲ್ಲ. ರಾಜ್ಯದ ಪಾಸಿಟಿವಿಟಿ ದರ ಶೇ 4.89.

ಭಾನುವಾರ ಗುಜರಾತ್‌ನಲ್ಲಿ 18, ಮಹಾರಾಷ್ಟ್ರದಲ್ಲಿ 169, ಪುದುಚೇರಿಯಲ್ಲಿ 1, ಪಶ್ಚಿಮ ಬಂಗಾಳದಲ್ಲಿ 53, ಕರ್ನಾಟಕದಲ್ಲಿ 104 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

ರೆಸ್ಟೋರೆಂಟ್‌ಗಳು ಬಂದ್; ಚೀನಾದ ಬೀಜಿಂಗ್‌ನಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಸ್ಥಳೀಯ ಆಡಳಿತ ಬೀಜಿಂಗ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ಜನರ ಭೇಟಿ ನಿಷೇಧಿಸಿದೆ.

ಜನರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವಾಗ ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ತೋರಿಸಬೇಕು ಎಂದು ಆದೇಶ ಹೊರಡಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+