ಭಾರತದಲ್ಲಿ ಒಂದೇ ದಿನ 48,000 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆ
ನವದಹಲಿ, ಜುಲೈ 25: ಭಾರತದಲ್ಲಿ ಮತ್ತೆ 48 ಸಾವಿರ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
Recommended Video
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 48,916 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ 9,615 ಕೇಸು, 278 ಸಾವು, ಆಂಧ್ರಪ್ರದೇಶದಲ್ಲಿ 8,147 ಕೇಸು, 49 ಸಾವು, ತಮಿಳುನಾಡಿನಲ್ಲಿ 6472 ಸೋಂಕು, 88 ಸಾವು, ಕರ್ನಾಟಕದಲ್ಲಿ 5.007 ಸೋಂಕು 110 ಸಾವು ದಾಖಲಾಗಿದೆ.
ಈ ನಡುವೆ ಒಂದೇ ದಿನ 757 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ ಕೂಡ 31,358 ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರೆಷ್ಟು?
13,36,861 ಮಂದಿ ಸೋಂಕಿತರ ಪೈಕಿ 8,49,431 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಪ್ರಸ್ತುತ ಇನ್ನೂ ದೇಶದಲ್ಲಿ 4,56,071 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ದೇಶದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ನಡುವಲ್ಲೇ ಕೊರೊನಾ ಮರಣ ಪ್ರಮಾಣ ಶೇ.2.38ಕ್ಕೆ ಇಳಿಕೆಯಾಗಿದೆ.
ಮೇ ತಿಂಗಳಿನಲ್ಲಿ ಕೊರೊನಾದಿಂದ ಸಾವಿನ ಪ್ರಮಾಣ ಎಷ್ಟಿತ್ತು?
ಮೇನಲ್ಲಿ ಕೊರೊನಾ ಸಾವಿನ ಪ್ರಮಾಣ ಶೇ.3.2ರಷ್ಟಿತ್ತು. ಜು.10ರಂದು ಸಾವಿನ ಪ್ರಮಾಣ ಶೇ.2.72ಕ್ಕೆ ಇಳಿಕೆಯಾಗಿತ್ತು. ನಂತರ ಮತ್ತಷ್ಟು ಇಳಿಕೆ ಕಂಡು ಜು.20ರಂದು ಶೇ.2.49ಕ್ಕೆ ಕುಸಿದಿತ್ತು. ಇದೀಗ ಮರಣ ಪ್ರಮಾಣ ಮತ್ತಷ್ಟು ಇಳಿಕೆ ಕಂಡಿರುವುದು ಆಶಾವಾದ ಮೂಡಿಸಿದೆ. ಇದೇ ವೇಳೆ ಕೊರೊನಾದಿಂದ ಗುಣಮುಖರಾದವರ ಪ್ರಮಾಣ ದೇಶದಲ್ಲಿ 63.45ಕ್ಕೆ ಏರಿಕೆಯಾಗಿದೆ.

4,20,898 ಮಂದಿ ಮಾದರಿಗಳ ಪರೀಕ್ಷೆ
ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನ ಕಾರಣಕ್ಕೆ 4,20,898 ಮಂದಿಯ ಮಾದರಿಗಳನ್ನು ಪರೀಕ್ಷೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.
ನಿನ್ನೆ ಒಂದೇ ದೇಶಾದ್ಯಂತ 4,20,898 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.24 ರವರೆಗೂ 1,58,49,068 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಶನಿವಾರ 48,916 ಮಂದಿಗೆ ಕೊರೊನಾ ಸೋಂಕು
ಈ ನಡುವೆ ದೇಶದಲ್ಲಿ ಶನಿವಾರ ಹೊಸದಾಗಿ 48,916 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕು ಇರುವುದು ಖಚಿತವಾಗಿದ್ದು, ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 13,36,861ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 757 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಮಹಾಮಾರಿ ವೈರಸ್ ದೇಶದಲ್ಲಿ 31,358 ಮಂದಿಯನ್ನು ಬಲಿ ಪಡೆದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.












Click it and Unblock the Notifications