ಭಾರತದಲ್ಲಿ 24 ಗಂಟೆಗಳಲ್ಲಿ ದಾಖಲೆಯ ಸೋಂಕಿತರು ಗುಣಮುಖ

ನವದೆಹಲಿ, ಆಗಸ್ಟ್ 18: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ ಸೋಂಕಿತರು ಗುಣಮುಖರಾಗಿದ್ದಾರೆ. ಒಂದೇ ದಿನ ದೇಶಾದ್ಯಂತ 57,584 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಅಂತೆಯೇ ನಿನ್ನೆ ಒಂದೇ ದಿನ ದೇಶದಲ್ಲಿ 55,079 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

Recommended Video

      Israel ಒಪ್ಪಂದದ ಬಗ್ಗೆ UAE ಮೇಲೆ ದಾಳಿ ಮಾಡುವುದಾಗಿ Iran ಬೆದರಿಕೆ ಹಾಕಿದೆ | Oneindia Kannada

      ದೇಶದಲ್ಲಿ ಇದೇ ಮೊದಲ ಬಾರಿಗೆ ದೇಶದಲ್ಲಿ ಹೊಸ ಸೋಂಕು ಪ್ರಕರಣಗಳಿಗಿಂತ ಗುಣಮುಖರ ಪ್ರಮಾಣ ಹೆಚ್ಚಾಗಿದೆ. ಇನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ 24 ಗಂಟೆಗಳ ಅವಧಿಯಲ್ಲಿ 8.97 ಲಕ್ಷ ಕೊವಿಡ್ ಪರೀಕ್ಷೆ ನಡೆಸಲಾಗಿದ್ದು. ಇದು ಈ ವರೆಗಿನ ಗರಿಷ್ಠ ಪರೀಕ್ಷಾ ಪ್ರಮಾಣವಾಗಿದೆ. ಗರಿಷ್ಠ ಮಟ್ಟದ ಪರೀಕ್ಷಾ ಪ್ರಮಾಣದ ಹೊರತಾಗಿಯೂ ದೇಶದಲ್ಲಿ ಸೋಂಕಿನ ಪ್ರಮಾಣ ಶೇ.8.81ರಷ್ಟಿದೆ.

      ದೇಶದಲ್ಲಿ ಪ್ರಸ್ತುತ ಒಟ್ಟಾರೆ ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದ್ದು, ಈ ಪೈಕಿ 19,77,780 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ದೇಶದಲ್ಲಿ 6,73,166 ಸಕ್ರಿಯ ಪ್ರಕರಣಗಳಿವೆ.

      India Records Highest Single-Day Recovery From Coronavirus

      ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 27 ಲಕ್ಷದ ಗಡಿ ದಾಟಿದೆ. ಪ್ರತಿನಿತ್ಯ ಸೋಂಕಿತ ಪ್ರಕರಣಗಳು 50 ಸಾವಿರಕ್ಕಿಂತ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲೇ 55079 ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ.

      ಸೋಮವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿನಿಂದ 876 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 51797ಕ್ಕೆ ಏರಿಕೆಯಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+