ಭಾರತ; 24 ಗಂಟೆಯಲ್ಲಿ 63 ಸಾವಿರ ಕೋವಿಡ್ ಪ್ರಕರಣ

ನವದೆಹಲಿ, ಆಗಸ್ಟ್ 16 : ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 63,000 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. ಭಾರತದಲ್ಲಿ ಇದುವರೆಗೂ 2,93,09,703 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್‌ ಹೇಳಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬೆಳಗ್ಗೆ 8ರಿಂದ ಭಾನುವಾರ ಬೆಳಗ್ಗೆ 8 ಗಂಟೆ ತನಕ ದೇಶದಲ್ಲಿ 63,000 ಹೊಸ ಕೊರೊನಾ ವೈರಸ್ ಸೋಂಕಿನ ಪ್ರಕರಣ ದಾಖಲಾಗಿದೆ. 944 ಜನರು ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 25.89ಕ್ಕೆ ಏರಿಕೆಯಾಗಿದೆ. ಅಮೆರಿಕ, ಬ್ರೆಜಿಲ್ ಹೊರತುಪಡಿಸಿದರೆ ವಿಶ್ವದಲ್ಲಿಯೇ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವ ದೇಶ ಭಾರತವಾಗಿದೆ.

ದೇಶದಲ್ಲಿ ಇದುವರೆಗೂ 18.62 ಲಕ್ಷ ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದದಲ್ಲಿನ ಗುಣಮುಖರಾಗುವವರ ಪ್ರಮಾಣ 71.91ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ.

ಮಾದರಿಗಳ ಪರೀಕ್ಷೆ

ಮಾದರಿಗಳ ಪರೀಕ್ಷೆ

ಭಾರತದಲ್ಲಿ ಇದುವರೆಗೂ 2,93,09,703 ಕೋವಿಡ್ ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ. 7,46,608 ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ. ಭಾರತದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 25.89 ಲಕ್ಷ.

ಟಾಪ್ 5 ರಾಜ್ಯಗಳು

ಟಾಪ್ 5 ರಾಜ್ಯಗಳು

ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಉತ್ತರ ಪ್ರದೇಶ ಭಾರತದಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಇರುವ ಟಾಪ್ 5 ರಾಜ್ಯಗಳಾಗಿವೆ. ಕಳೆದ 24 ಗಂಟೆಯಲ್ಲಿಯೂ ಈ ರಾಜ್ಯಗಳಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲಾಗಿದೆ.

ಮಹಾರಾಷ್ಟ್ರದಲ್ಲಿ 5.84 ಲಕ್ಷ ಪ್ರಕರಣ

ಮಹಾರಾಷ್ಟ್ರದಲ್ಲಿ 5.84 ಲಕ್ಷ ಪ್ರಕರಣ

ಮಹಾರಾಷ್ಟ್ರದಲ್ಲಿ 5.84, ತಮಿಳುನಾಡಿನಲ್ಲಿ 3.32 ಲಕ್ಷ, ಆಂಧ್ರ ಪ್ರದೇಶದಲ್ಲಿ 2.81 ಲಕ್ಷ ಮತ್ತು ಕರ್ನಾಟಕದಲ್ಲಿ 2.19 ಲಕ್ಷ ಸೋಂಕಿತರು ಇದ್ದಾರೆ.

ಬಿಹಾರದಲ್ಲಿ 1 ಲಕ್ಷ ಸೋಂಕಿತರು

ಬಿಹಾರದಲ್ಲಿ 1 ಲಕ್ಷ ಸೋಂಕಿತರು

ಶನಿವಾರ ಬಿಹಾರ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ 1 ಲಕ್ಷಕ್ಕೂ ಅಧಿಕ ಸೋಂಕಿತರು ಇರುವ ರಾಜ್ಯಗಳಲ್ಲಿ ಬಿಹಾರ 8ನೇ ರಾಜ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+