ಭಾರತದಲ್ಲಿ 24 ಗಂಟೆಯಲ್ಲಿ 1,61,736 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಏಪ್ರಿಲ್ 13; ಭಾರತದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಪುನಃ ಒಂದೂವರೆ ಲಕ್ಷದ ಗಡಿಯನ್ನು ದಾಟಿದೆ. 24 ಗಂಟೆಯಲ್ಲಿ 1,61,736 ಹೊಸ ಪ್ರಕರಣಗಳು ದೇಶದಲ್ಲಿ ದಾಖಲಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. 24 ಗಂಟೆಯಲ್ಲಿ ದೇಶದಲ್ಲಿ 97,168 ಜನರು ಡಿಸ್ಚಾರ್ಜ್ ಆಗಿದ್ದಾರೆ. 879 ಜನರು ಮರಣ ಹೊಂದಿದ್ದಾರೆ.

ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖಗೊಂಡವರ ಸಂಖ್ಯೆ 1,22,53,697 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 12,64,698.

India Reports 1,61,736 New Covid Cases In 24 Hours

ಏಪ್ರಿಲ್ 12ರ ತನಕ ದೇಶದಲ್ಲಿ 25,92,07,108 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ. ಏಪ್ರಿಲ್ 12ರ ಸೋಮವಾರ 14,00,122 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಯಾವ ರಾಜ್ಯದಲ್ಲಿ ಎಷ್ಟು?: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ ರಾಜ್ಯ ಮೊದಲ ಸ್ಥಾನದಲ್ಲಿದೆ. ಸೋಮವಾರ ರಾಜ್ಯದಲ್ಲಿ 51,751 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 5,64,746ಕ್ಕೆ ಏರಿಕೆಯಾಗಿದೆ.

ಕೇರಳದಲ್ಲಿ 5,692, ಕರ್ನಾಟಕದಲ್ಲಿ 9,579 ಮತ್ತು ತಮಿಳುನಾಡಿನಲ್ಲಿ 6,711 ಹೊಸ ಪ್ರಕರಣಗಳು ಸೋಮವಾರ ದಾಖಲಾಗಿವೆ. ದೆಹಲಿಯಲ್ಲಿ 11,491, ಉತ್ತರ ಪ್ರದೇಶದಲ್ಲಿ 13,604, ಛತ್ತೀಸ್‌ಗಢ್‌ನಲ್ಲಿ 13,576 ಹೊಸ ಪ್ರಕರಣಗಳು ವರದಿಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+