ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ದೇಶದಲ್ಲಿ 12 ಸಾವಿರಕ್ಕೆ ಇಳಿದ ಕೊರೊನಾ ಪ್ರಕರಣಗಳು

|
Google Oneindia Kannada News

ನವದೆಹಲಿ, ಆಗಸ್ಟ್ 09: ದೇಶದಲ್ಲಿ ಕಳೆದೆರಡು ದಿನಗಳಿಂದ ಕೊರೊನಾ ಪ್ರಕರಣಗಳಲ್ಲಿ ಇಳಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12,751 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ವರದಿಯಂತೆ ಕಳೆದ 24 ಗಂಟೆಗಳಲ್ಲಿ 42 ಸಾವುಗಳು ವರದಿಯಾಗಿವೆ. ಇದರಲ್ಲಿ ಕೇರಳ ಒಂದು ರಾಜ್ಯದಿಂದಲೇ 10 ಸಾವುಗಳು ವರದಿಯಾಗಿವೆ.

ಗಣೇಶ ಚತುರ್ಥಿ; ವಾರ್ಡ್‌ಗೊಂದು ಗಣೇಶ ಎಂಬ ನಿಯಮ ವಾಪಸ್ಗಣೇಶ ಚತುರ್ಥಿ; ವಾರ್ಡ್‌ಗೊಂದು ಗಣೇಶ ಎಂಬ ನಿಯಮ ವಾಪಸ್

ಭಾರತದಲ್ಲಿ ಸಕ್ರಿಯ ಪ್ರಕರಣಗಳು ಪ್ರಸ್ತುತ 1,31,807 ರಷ್ಟಿದೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಶೇಕಡಾ 3.50 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 16,412 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.

Corona cases reduced to 12 thousand in the country

ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1,372 ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿವೆ. 1,927 ಮಂದಿ ಚೇತರಿಕೆ ಕಂಡಿದ್ದು ಆಸ್ಪತ್ಎಯಿಂದ ಬಿಡುಗಡೆ ಮಾಡಲಾಗಿದೆ. ಒಂದೇ ದಿನದಲ್ಲಿ 6 ಸಾವುಗಳು ವರದಿಯಾಗಿವೆ.

ಕರ್ನಾಟಕದಲ್ಲಿಯೂ ಆಗಸ್ಟ್ 8 ಸೋಮವಾರದಂದು 1,019 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,252 ರಷ್ಟಿದೆ.

ಬೆಂಗಳೂರು ನಗರದಲ್ಲಿಯೇ ಒಂದೇ ದಿನ 655 ಕೊರೊನಾ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಸೋಮವಾರ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 40,121 ಕ್ಕೆ ಏರಿಕೆಯಾಗಿದೆ.

ಸೋಮವಾರ 1662 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು ಡಿಸ್ಚಾರ್ಜ್ 39,69,691 ಕ್ಕೆ ತಲುಪಿದೆ. ಮಾರ್ಚ್ 2020 ರಲ್ಲಿ ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ಕರ್ನಾಟಕವು 40,21,106 ಕೊರೊನಾ ಪ್ರಕರಣಗಳನ್ನು ವರದಿ ಮಾಡಿದೆ.

ರಾಜ್ಯದಲ್ಲಿ ದೈನಂದಿನ ಕೋವಿಡ್ ಪಾಸಿಟಿವಿಟಿ ದರವು 6.17% ರಷ್ಟಿದೆ. ಇದುವರೆಗೆ 11,68,36,442 ಜನರು ಕೊರೊನಾ ಲಸಿಕೆ ಪಡೆದಿದ್ದಾರೆ.

Recommended Video

BJP ಈ 6 ಸಂಸದರಿಗೆ ಮುಂದಿನ ಚುನಾವಣೆಯಲ್ಲಿ ನೋ ಟಿಕೆಟ್? | *Politics | OneIndia Kannada

English summary
Coronavirus in India Updates: India reports 12,751 new Covid cases. 42 deaths in last 24 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X