• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೇಶದಲ್ಲಿ ಒಂದೇ ದಿನ 1,45,384 ಕೊರೊನಾ ಪ್ರಕರಣ; 794 ಮಂದಿ ಸಾವು

|
Google Oneindia Kannada News

ನವದೆಹಲಿ, ಏಪ್ರಿಲ್ 10: ಭಾರತದಲ್ಲಿ ಕಳೆದ ನಾಲ್ಕು ದಿನಗಳಿಂದ ದಿನನಿತ್ಯದ ಕೊರೊನಾ ಪ್ರಕರಣಗಳ ಸಂಖ್ಯೆ ಲಕ್ಷ ದಾಟುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,45,384 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಶುಕ್ರವಾರ 77,567 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೂ ಒಟ್ಟು 1,19,90,859 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 794 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, ಇದುವರೆಗೂ 1,68,436 ಮರಣ ಪ್ರಕರಣಗಳು ದಾಖಲಾಗಿವೆ.

ದೇಶದಲ್ಲಿ ಮತ್ತೆ ದಶಲಕ್ಷ ದಾಟಿದ ಕೊರೊನಾ ಸಕ್ರಿಯ ಪ್ರಕರಣದೇಶದಲ್ಲಿ ಮತ್ತೆ ದಶಲಕ್ಷ ದಾಟಿದ ಕೊರೊನಾ ಸಕ್ರಿಯ ಪ್ರಕರಣ

ಕೇಂದ್ರ ಆರೋಗ್ಯ ಸಚಿವಾಲಯ, ಹೆಲ್ತ್‌ ಬುಲೆಟಿನ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಶುಕ್ರವಾರ 1,45,384 ಹೊಸ ಪ್ರಕರಣಗಳು ದಾಖಲಾಗಿರುವುದರೊಂದಿಗೆ ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,32,05,926ಗೆ ತಲುಪಿದೆ. ಸದ್ಯಕ್ಕೆ 10,46,631 ಸಕ್ರಿಯ ಪ್ರಕರಣಗಳಿವೆ.

ಜನವರಿ 16ರಿಂದ ದೇಶದಲ್ಲಿ ಲಸಿಕಾ ಅಭಿಯಾನ ಆರಂಭವಾಗಿದ್ದು, ಅಂದಿನಿಂದ ಈವರೆಗೆ 9,80,75,160 ಮಂದಿಗೆ ಕೊರೊನಾ ಲಸಿಕೆಯನ್ನು ನೀಡಲಾಗಿದೆ.

ಶುಕ್ರವಾರ ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತೆ ಏಳು ತಿಂಗಳ ನಂತರ ಒಂದು ಮಿಲಿಯನ್ ಗಡಿಯನ್ನು ದಾಟಿದೆ. ಗುರುವಾರ ರಾತ್ರಿಯವರೆಗೂ, ದೇಶದಲ್ಲಿ ಒಟ್ಟಾರೆ 1,046,303 ಸಕ್ರಿಯ ಪ್ರಕರಣಗಳು ದಾಖಲಾಗಿದ್ದವು. ಕಳೆದ ಮಾರ್ಚ್‌ನಿಂದಲೂ ಇದೇ ಮೊದಲ ಬಾರಿ ದಾಖಲೆಯ ಏರಿಕೆ ಕಂಡಿದೆ.

ಈ ನಡುವೆ ಮಹಾರಾಷ್ಟ್ರದಲ್ಲಿ ಕೊರೊನಾವೈರಸ್ ಸೋಂಕಿನ ಏರಿಕೆ ನಡುವೆ ಮುಂಬೈನಲ್ಲಿ ಮುಂದಿನ ಮೂರು ದಿನಗಳ ಕಾಲ ಖಾಸಗಿ ಕೊವಿಡ್-19 ಲಸಿಕೆ ಕೇಂದ್ರಗಳು ಬಂದ್ ಆಗಲಿವೆ ಎಂದು ತಿಳಿದು ಬಂದಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ 58993 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 45,391 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, ಸೋಂಕಿನಿಂದ ಒಂದೇ ದಿನ 301 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

English summary
India reports 145384 new coronavirus cases in last 24 hours. 794 people dies by infection,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X