ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಹೊಸದಾಗಿ 15,510 ಮಂದಿಗೆ ಕೊರೊನಾ ಸೋಂಕು

|
Google Oneindia Kannada News

ನವದೆಹಲಿ,ಮಾರ್ಚ್ 1: ಭಾರತದಲ್ಲಿ ಭಾನುವಾರಕ್ಕಿಂತ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಒಂದೇ ದಿನದಲ್ಲಿ 15,510 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕಳೆದ 24 ಗಂಟೆಗಳಲ್ಲಿ 106 ಮಂದಿ ಮೃತಪಟ್ಟಿದ್ದಾರೆ. 11,288 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 1,57,157 ಮಂದಿ ಸಾವನ್ನಪ್ಪಿದ್ದು, 1,07,86,457 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 1,68,627 ಸಕ್ರಿಯ ಪ್ರಕರಣಗಳಿವೆ.

India Reports 15,510 New COVID19 Cases On March 1

ಭಾರತದಲ್ಲಿ 16,752 ಹೊಸ ಕೋವಿಡ್ ಪ್ರಕರಣ ದಾಖಲು ಭಾರತದಲ್ಲಿ 16,752 ಹೊಸ ಕೋವಿಡ್ ಪ್ರಕರಣ ದಾಖಲು

ಒಟ್ಟು 1,10,96,731 ಕೊರೊನಾ ಸೋಂಕಿತರಿದ್ದಾರೆ, ಇಲ್ಲಿಯವರೆಗೆ ದೇಶದಲ್ಲಿ 1,43,01,266 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.ಇದುವರೆಗೆ ಒಟ್ಟು 21,68.58,774 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಫೆಬ್ರವರಿ 28 ರಂದು 6,27,668 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಾರಕ ಕೊರೊನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮದ ಮುಂದಿನ ಹಂತ ಇಂದಿನಿಂದ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ವಿತರಣೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಲಸಿಕೆ ಅಭಿಯಾನದ ಮುಂದಿನ ಹಂತದಲ್ಲಿ 60 ವರ್ಷ ದಾಟಿದವರು ಮತ್ತು 2022ರ ಜನವರಿ 1ಕ್ಕೆ 60 ವರ್ಷ ತುಂಬುವವರು ಲಸಿಕೆಗಾಗಿ ನೋಂದಣಿ ಮಾಡಿಕೊಳ್ಳಲು ಅರ್ಹರಾಗಿದ್ದಾರೆ. ಬೇರೆ ರೋಗಗಳನ್ನು ಹೊಂದಿರುವ, 2022ರ ಜನವರಿ 1ಕ್ಕೆ 45 ವರ್ಷ ತುಂಬುವವರು ಮತ್ತು ಈಗಾಗಲೇ 45 ದಾಟಿದವರು ಕೂಡ ನೋಂದಣಿಗೆ ಅರ್ಹರು. ಈ ಪೈಕಿ 20 ಅನಾರೋಗ್ಯಗಳನ್ನು ಆರೋಗ್ಯ ಸಚಿವಾಲಯವು ಪಟ್ಟಿ ಮಾಡಿದೆ.

ಅನಾರೋಗ್ಯ ಸಮಸ್ಯೆ ಹೊಂದಿರುವ 45ರಿಂದ 59 ವರ್ಷದೊಳಗಿನ ನಾಗರಿಕರು, ಪಟ್ಟಿ ಮಾಡಿರುವ 20 ರೀತಿಯ ಅನಾರೋಗ್ಯ ಸಮಸ್ಯೆ ಇರುವವರು. ಹೃದಯ ಸಮಸ್ಯೆ, ತೀವ್ರ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಗೆ ಒಟ್ಟಾಗಿ ಚಿಕಿತ್ಸೆ ಪಡೆಯುತ್ತಿರುವವರು, ಪಾರ್ಶ್ವವಾಯು ಸಂಬಂಧಿ ಕಾಯಿಲೆ ಉಳ್ಳವರು, 10 ವರ್ಷಕ್ಕಿಂತ ಹೆಚ್ಚು ಕಾಲದಿಂದ ಮಧುಮೇಹದಿಂದ ಬಳಲುತ್ತಿರುವವರು, ಕಿಡ್ನಿ, ಲಿವರ್‌, ಇತರ ಕ್ಯಾನ್ಸರ್‌ ಕಾಯಿಲೆ ಉಳ್ಳವರು, ಎಚ್‌ಐವಿ ಸೋಂಕಿತರು ತಮ್ಮ ಮಾಹಿತಿ ನೀಡಬೇಕು.

English summary
India reports 15,510 new COVID19 cases. 11,288 discharges on March 1 2021. Total cases 1,10,96,731 and Active cases 1,68,627.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X