ಭಾರತದಲ್ಲಿ 16,752 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಫೆಬ್ರವರಿ 28: ಭಾರತದಲ್ಲಿ 24 ಗಂಟೆಯಲ್ಲಿ 16,752 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 1,10,96,731ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕಳೆದ 24 ಗಂಟೆಯಲ್ಲಿ 11,718 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇದುವರೆಗೂ ಡಿಸ್ಚಾರ್ಜ್ ಆದವರು 1,07,75,169.
24 ಗಂಟೆಯಲ್ಲಿ ಭಾರತದಲ್ಲಿ 113 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿನ ಒಟ್ಟು ಮೃತಪಟ್ಟವರ ಸಂಖ್ಯೆ 1,57,051. ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,64,511.

ದೇಶದಲ್ಲಿ ಫೆಬ್ರವರಿ 27ರ ತನಕ 21,62,31,106 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ. ಫೆಬ್ರವರಿ 27ರ ಶನಿವಾರ 7,95,723 ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಯಾವ ರಾಜ್ಯದಲ್ಲಿ ಎಷ್ಟು?: ಶನಿವಾರ ಮಹಾರಾಷ್ಟ್ರ ರಾಜ್ಯದಲ್ಲಿ8,623 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 21,46,777ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 72,530.
ಕೇರಳದಲ್ಲಿ 3,792 ಹೊಸ ಪ್ರಕರಣ ದಾಖಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 50,510, ಒಟ್ಟು ಪ್ರಕರಣಗಳು 10,56,150.
ಕರ್ನಾಟಕದಲ್ಲಿ523 ಹೊಸ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 9,50,730ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳು 5,638.











Click it and Unblock the Notifications