ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2 ಲಕ್ಷದತ್ತ ಕೊರೊನಾ; 184372 ಹೊಸ ಪ್ರಕರಣ ದಾಖಲು

|
Google Oneindia Kannada News

ನವದೆಹಲಿ, ಏಪ್ರಿಲ್ 14: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಲಕ್ಷದ ಅಂಚಿಗೆ ಬಂದು ನಿಂತಿದೆ. ದೇಶದಲ್ಲಿ ಮಂಗಳವಾರ 184372 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 82,339 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 1,027 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೂ ಸೋಂಕಿನಿಂದ ಒಟ್ಟು 1,72,085 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ 24 ಗಂಟೆಯಲ್ಲಿ 1,61,736 ಹೊಸ ಕೋವಿಡ್ ಪ್ರಕರಣಭಾರತದಲ್ಲಿ 24 ಗಂಟೆಯಲ್ಲಿ 1,61,736 ಹೊಸ ಕೋವಿಡ್ ಪ್ರಕರಣ

ಮಂಗಳವಾರದ ಪ್ರಕರಣ ಒಳಗೊಂಡಂತೆ ದೇಶದಲ್ಲಿ ಒಟ್ಟಾರೆ ಪ್ರಕರಣಗಳ ಸಂಖ್ಯೆ 1,38,73,825ಗೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 1,23,36,036 ಆಗಿದೆ.

India Reports 184372 New Covid Cases In 24 Hours

ದೇಶದಲ್ಲಿ ಸದ್ಯಕ್ಕೆ 13,65,704 ಸಕ್ರಿಯ ಪ್ರಕರಣಗಳಿವೆ. ಏಪ್ರಿಲ್ 13ರವರೆಗೂ ದೇಶದಲ್ಲಿ 11,11,79,578 ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ಪ್ರಕರಣ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಮಂಗಳವಾರ 8778 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,83,647ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 67 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 13,008ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

English summary
Union Health Ministry said that India reported 184372 new COVID-19 cases on april 14,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X