Breaking; ಭಾರತದಲ್ಲಿ 2,380 ಹೊಸ ಕೋವಿಡ್ ಪ್ರಕರಣ ಪತ್ತೆ

ನವೆಹಲಿ, ಏಪ್ರಿಲ್ 21; ಭಾರತದಲ್ಲಿ 2,380 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಕಳೆದ ಒಂದು ವಾರದಿಂದ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.

ಗುರುವಾರದ ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ದೇಶದಲ್ಲಿ 2,380 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 13,433 ಆಗಿದೆ.

India Reports 2,380 New COVID Cases

ಇದುವರೆಗೂ 4,25,14,479 ಜನರು ಗುಣಮುಖಗೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಇದುವರೆಗೂ 5,22,062 ಜನರು ಸಾವನ್ನಪ್ಪಿದ್ದಾರೆ.

ಭಾರತದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,30,49,974 ಆಗಿದೆ. 24 ಗಂಟೆಯಲ್ಲಿ ದೇಶದಲ್ಲಿ 56 ಸೋಂಕಿತರು ಮೃತಪಟ್ಟಿದ್ದಾರೆ. ಬುಧವಾರ ತಮಿಳುನಾಡಿನಲ್ಲಿ 27, ಕರ್ನಾಟಕ 61, ಛತ್ತೀಸ್‌ಗಢ 5, ತೆಲಂಗಾಣ 20 ಹೊಸ ಪ್ರಕರಣಗಳು ದಾಖಲಾಗಿವೆ.

ಪಶ್ಚಿಮ ಬಂಗಾಳ 28, ಗುಜರಾತ್ 13, ಮಿಜೋರಾಂ 125 ಹೊಸ ಪ್ರಕರಣಗಳು ದಾಖಲಾಗಿವೆ. ಹರ್ಯಾಣದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತದೇ ಇದೆ. ಬುಧವಾರ 310 ಹೊಸ ಪ್ರಕರಣ ದಾಖಲಾಗಿದೆ.

ದೆಹಲಿಯಲ್ಲಿ 1009 ಹೊಸ ಕೋವಿಡ್ ಪ್ರಕರಣಗಳು ಬುಧವಾರ ದಾಖಲಾಗಿದೆ. ವಿವಿಧ ರಾಜ್ಯಗಳಲ್ಲಿ ಹೊಸ ಪ್ರಕರಣಗಳು ದಾಖಲಾಗುತ್ತಿರುವ ಪರಿಣಾಮ ಹಲವು ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಒಡಿಶಾ ಮತ್ತು ಬಿಹಾರ ರಾಜ್ಯ ಸರ್ಕಾರಗಳು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+