ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ಚರಿಕೆ: ಭಾರತದಲ್ಲಿ ಪ್ರತಿಗಂಟೆಗೆ 231 ಮಂದಿಗೆ ಅಂಟಿದೆ ಕೊರೊನಾವೈರಸ್!

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 10: ಭಾರತದಲ್ಲಿ ಕೊರೊನಾವೈರಸ್ ಕಡಿಮೆ ಆಯಿತು ಅಂತಾ ಅಂದುಕೊಳ್ಳುವ ಹಾಗಿಲ್ಲ. ಪ್ರತಿ ಗಂಟೆ ಗಂಟೆಗೂ ಕೋವಿಡ್-19 ಸೋಂಕಿತರರ ಸಂಖ್ಯೆಯು ಗಣನೀಯವಾಗಿ ಏರಿಕೆ ಆಗುತ್ತಿದೆ.

ಕೋವಿಡ್-19 ಒಟ್ಟು ಸೋಂಕಿತ ಪ್ರಕರಣಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳುವ ಜನರು ಅದರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಆದರೆ ಇದರ ನಡುವೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ.

ಭಾರತದಲ್ಲಿ ಪ್ರತಿಯೊಂದು ಗಂಟೆಗೆ 231 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿದೆ. ಸ್ವತಃ ಕೇಂದ್ರ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಸಚಿವಾಲಯವೇ ನೀಡಿರುವ ಅಂಕಿ-ಅಂಶಗಳಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ. ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಕಂಡೀಷನ್ ಹೇಗಿದೆ?, ಕೋವಿಡ್-19 ಪರೀಕ್ಷೆಗಳನ್ನು ಹೇಗೆ ನಡೆಸಲಾಗುತ್ತಿದೆ?, ಅದೇ ಕೋವಿಡ್-19 ಲಸಿಕೆ ವಿತರಣೆ ವೇಗ ಹೇಗಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಒಂದು ಗಂಟೆಯಲ್ಲೇ 231 ಜನರಿಗೆ ಕೋವಿಡ್-19 ಸೋಂಕು

ಒಂದು ಗಂಟೆಯಲ್ಲೇ 231 ಜನರಿಗೆ ಕೋವಿಡ್-19 ಸೋಂಕು

ಭಾರತದಲ್ಲಿ 24 ಗಂಟೆಗಳ ಕೋವಿಡ್-19 ಅಂಕಿ-ಅಂಶಗಳನ್ನು ಅವಲೋಕಿಸಿದಾಗ ಪ್ರತಿಯೊಂದು ಗಂಟೆಯಲ್ಲಿ 231 ಮಂದಿಗೆ ಸೋಂಕು ತಗುಲಿರುವುದು ಸ್ಪಷ್ಟವಾಗುತ್ತಿದೆ. ಕಳೆದೊಂದು ದಿನದಲ್ಲೇ 5554 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿದೆ. ಸಮಾಧಾನ ಎಂದರೆ ಇದೇ ಅವಧಿಯಲ್ಲಿ 6322 ಮಂದಿ ಸೋಂಕಿತರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. 36 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಪ್ರಾಣ ಬಿಟ್ಟಿದ್ದಾರೆ.

ದೇಶದಲ್ಲಿ ಕೋವಿಡ್-19 ಸೋಂಕಿತರ ಏರಿಳಿತ ಹೇಗಿದೆ?

ದೇಶದಲ್ಲಿ ಕೋವಿಡ್-19 ಸೋಂಕಿತರ ಏರಿಳಿತ ಹೇಗಿದೆ?

ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,490,283ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,139 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 43,913,294 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 48,850 ಸಕ್ರಿಯ ಪ್ರಕರಣಗಳಿವೆ ಎಂದು ಗೊತ್ತಾಗಿದೆ.

3,76,855 ಮಂದಿಗೆ ಕೋವಿಡ್-19 ಪರೀಕ್ಷೆ

3,76,855 ಮಂದಿಗೆ ಕೋವಿಡ್-19 ಪರೀಕ್ಷೆ

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,76,855 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,90,87,642 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ಲಸಿಕೆ ಪಡೆದುಕೊಂಡವರೆಷ್ಟು?

ಭಾರತದಲ್ಲಿ ಕೊರೊನಾ ಲಸಿಕೆ ಪಡೆದುಕೊಂಡವರೆಷ್ಟು?

ಕೊರೊನಾ ವೈರಸ್ ಸೋಂಕಿನಿಂದ ರಕ್ಷಣೆ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 21,63,811 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ. ದೇಶದಲ್ಲಿ ಒಟ್ಟು ಇದುವರೆಗೂ 214,77,55,021 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
India reports 231 New Coronavirus Cases in Every hour in last 24 hours. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X