Breaking; ಭಾರತದಲ್ಲಿ 2,483 ಹೊಸ ಕೋವಿಡ್ ಪ್ರಕರಣ ದಾಖಲು

ನವದೆಹಲಿ, ಏಪ್ರಿಲ್ 26; ಭಾರತದಲ್ಲಿ 24 ಗಂಟೆಯಲ್ಲಿ 2,483 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 1,970 ಜನರು ಗುಣಮುಖಗೊಂಡಿದ್ದಾರೆ.

ಮಂಗಳವಾರದ ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 15,636 ಆಗಿದೆ. ಪಾಸಿಟಿವಿಟಿ ದರ ಶೆ 0.55 ಆಗಿದೆ. 30 ಜನರು ಮೃತಪಟ್ಟಿದ್ದಾರೆ.

India Reports 2483 Fresh Covid Cases In 24 Hours

ದೇಶದಲ್ಲಿನ ಒಟ್ಟು ಗುಣಮುಖಗೊಂಡವರು 42523311. ಒಟ್ಟು ಮೃತಪಟ್ಟವರು 523622 ಆಗಿದೆ ಎಂದು ಆರೋಗ್ಯ ಸಚಿವಾಲಯದ ಬುಲೆಟಿನ್ ಹೇಳಿದೆ.

ಸೋಮವಾರಕ್ಕೆ ಹೋಲಿಕೆ ಮಾಡಿದರೆ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,522 ರಿಂದ 15,636ಕ್ಕೆ ಇಳಿಕೆಯಾಗಿದೆ.

ಕರ್ನಾಟಕ, ಛತ್ತೀಸ್‌ಗಢ ಮತ್ತು ಚಂಡೀಗಢ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿವೆ. ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಸಾರ್ವಜನಿಕ ಸ್ಥಳಗಳಲ್ಲಿ ಜನರು ಮಾಸ್ಕ್ ಧರಿಸುವಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ.

ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ವಿವಿಧ ರಾಜ್ಯಗಳಲ್ಲಿ ಕೋವಿಡ್ ಹೊಸ ಪ್ರಕರಣಗಳ ಏರಿಕೆ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಇನ್ನೂ ಮುಂಬೈನಲ್ಲಿ ಸೋಮವಾರ 45 ಹೊಸ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಾವಿನ ಸಂಖ್ಯೆ ಶೂನ್ಯವಾಗಿದೆ. ಜಾರ್ಖಂಡ್‌ ರಾಜ್ಯದ ಶಿಕ್ಷಣ ಇಲಾಖೆ ಮುಂಜಾನೆಯ ಪ್ರಾರ್ಥನೆಯನ್ನು ರದ್ದುಗೊಳಿಸಿದೆ.

ಮಥುರಾ ಸ್ಥಳೀಯ ಆಡಳಿತ ದೇವಾಲಯಕ್ಕೆ ಆಗಮಿಸುವ ಭಕ್ತರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+