ದೇಶದಲ್ಲಿ ಒಂದೇ ದಿನ 2,333 ಮಂದಿಗೆ ಕೊರೊನಾ ಸೋಂಕು
ನವದೆಹಲಿ, ಮೇ 4: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.24 ಗಂಟೆಗಳಲ್ಲಿ 2,553 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರಂತೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 42,533ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಅತಿಹೆಚ್ಚು ಸೋಂಕಿತರನ್ನು ಒಳಗೊಂಡ ಮಹಾರಾಷ್ಟ್ರದಲ್ಲಿ ಮತ್ತೆ 678 ಪ್ರಕರಣಗಳಲ್ಲಿ ದಾಖಲಾಗಿದೆ. ಇದರೊಂದಿಗೆ ಇಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,974ಆಗಿದ್ದು, ಬಲಿಯಾದವರ ಸಂಖ್ಯೆ 548ಕ್ಕೆ ಏರಿಕೆ ಕಂಡಿದೆ. ದೆಹಲಿಯಲ್ಲಿ ಭಾನುವಾರ 427, ಗುಜರಾತ್ ನಲ್ಲಿ 974, ತಮಿಳುನಾಡಿನಲ್ಲಿ 266 ಹೊಸ ಪ್ರಕರಣಗಳು ಪತ್ತೆಯಾಗಿದೆ.
ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭರ್ಜರಿ ಏರಿಕೆ ಕಂಡಿದೆ. ಭಾನುವಾರ ಒಂದೇ ದಿನ 72 ಜನ ಸಾವನ್ನಪ್ಪಿದ್ದು, ಮೃತಪಟ್ಟವರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ. ಇನ್ನು ಒಟ್ಟು ಸೋಂಕಿತರ ಪೈಕಿ ಈ ವರೆಗೂ 11,706 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಸೋಂಕಿತರು ದೇಶದ ನಿಗದಿತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದ ಕೇಂದ್ರ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications