Breaking; ಭಾರತದಲ್ಲಿ 2,541 ಹೊಸ ಕೋವಿಡ್ ಪ್ರಕರಣ ದಾಖಲು
ನವದೆಹಲಿ, ಏಪ್ರಿಲ್ 25; ಭಾರತದಲ್ಲಿ 24 ಗಂಟೆಯಲ್ಲಿ 2,541 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 27ರಂದು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಲಿದ್ದಾರೆ.
ಸೋಮವಾರದ ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 16,522. ದೇಶದ ಪ್ರತಿದಿನದ ಪಾಸಿಟಿವಿಟಿ ದರ ಶೇ 0.84 ಆಗಿದೆ.
ದೇಶದಲ್ಲಿ ಇದುವರೆಗೂ 42521314 ಜನರು ಗುಣಮುಖಗೊಂಡಿದ್ದಾರೆ. ಇದುವರೆಗೂ ಸಾವನ್ನಪ್ಪಿದವರು 522223 ಆಗಿದೆ. ಇದುವರೆಗೂ ದೇಶದಲ್ಲಿ 1,87,71,95,781 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.

ದೇಶದ ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 27ರಂದು ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.
ಕರ್ನಾಟಕದ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, "ಎಪ್ರಿಲ್ 27ರಂದು ಪ್ರಧಾನ ಮಂತ್ರಿಗಳ ವಿಡಿಯೋ ಸಂವಾದದ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡುತ್ತೇವೆ" ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಪ್ರಕರಣಗಳು ಏರಿಕೆ; ನವದೆಹಲಿಯಲ್ಲಿ ಕಳೆದ ಮೂರು ದಿನಗಳಿಂದ ಪ್ರತಿದಿನ 1 ಸಾವಿರಕ್ಕಿಂತ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ದಾಖಲಾಗುತ್ತಿವೆ. ಭಾನುವಾರ ರಾಜ್ಯದಲ್ಲಿ 1083 ಹೊಸ ಪ್ರಕರಣ ಪತ್ತೆಯಾಗಿದೆ. ಪಾಸಿಟಿವಿಟಿ ದರ 4.48 ಆಗಿದೆ.
ಭಾನುವಾರ ತಮಿಳುನಾಡಿನಲ್ಲಿ 52, ಛತ್ತೀಸ್‌ಗಢ್‌ದಲ್ಲಿ 2, ಜಮ್ಮು ಮತ್ತು ಕಾಶ್ಮೀರದಲ್ಲಿ 12, ಮಧ್ಯಪ್ರದೇಶದಲ್ಲಿ 6 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.











Click it and Unblock the Notifications