Breaking: ಭಾರತದಲ್ಲಿ ಮತ್ತೆ ಬರೋಬ್ಬರಿ 27,114 ಕೊರೊನಾ ಸೋಂಕಿತರು ಪತ್ತೆ
ನವದೆಹಲಿ, ಜುಲೈ 11: ಭಾರತದಲ್ಲಿ ಕೊರೊನಾ ಸೋಂಕಿನ ಹಾವಳಿ ಹೆಚ್ಚಾಗಿದೆ. ಇಂದು 27,114 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ನಿತ್ಯ 2 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೆ ಒಳಪಡಿಸುತ್ತಿರುವ ಕಾರಣ ಸೋಂಕಿತರ ಪತ್ತೆ ಕೂಡ ಬೇಗ ಆಗುತ್ತಿದೆ.
Recommended Video
ಪ್ರತಿನಿತ್ಯ ಇಷ್ಟೊಂದು ಕೊರೊನಾ ಸೋಂಕಿತರು ಪತ್ತೆಯಾಗುತ್ತಿರುವ ಕಾರಣ ಸಧ್ಯಕ್ಕೆ ಚೇತರಿಕೆ ಕ್ರಮಾಣ ಕೊಂಚ ತಗ್ಗಿದೆ ಮುಂದಿನ ಒಂದು ವಾರದೊಳಗೆ ಚೇತರಿಕೆ ಪ್ರಮಾಣ ಸೋಂಕಿತರಿಗಿಂತ ಹೆಚ್ಚಾಗಲಿದೆ.
24 ಗಂಟೆಗಳಲ್ಲಿ 519 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 8,20,916 ಕೊರೊನಾ ಸೋಂಕಿತರಿದ್ದಾರೆ. ಅದರಲ್ಲಿ 2,83,407 ಪ್ರಕರಣಗಳು ಸಕ್ರಿಯವಾಗಿವೆ. 5,15,386 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 22,123 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 2,82,511 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

2,82,511ಕೊವಿಡ್ ಪರೀಕ್ಷೆ
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 2,82,511 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಜು.10ವರೆಗೂ 1,13,07,002 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.

ಜುಲೈ 10 ರಂದು 26,506 ಮಂದಿ ಕೊರೊನಾ ಸೋಂಕಿತರು
ಈ ನಡುವೆ ನಿನ್ನೆ ಒಂದೇ ದಿನ ದೇಶದಲ್ಲಿ ಬರೋಬ್ಬರಿ 26,506 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 7,93,802ಕ್ಕೆ ಏರಿಕೆಯಾಗಿದೆ. ಗುರುವಾರ ಒಂದೇ ದಿನ 24879 ಕೊರೊನಾ ಕೇಸ್ ಪತ್ತೆಯಾಗಿದ್ದು, 487 ಮಂದಿ ಸಾವನ್ನಪ್ಪಿದ್ದರು.

ಸಾವಿನ ಸಂಖ್ಯೆ ಕಡಿಮೆ
ಭಾರತದಲ್ಲಿ ಕೊರೊನಾವೈರಸ್ ಪ್ರಕರಣಗಳು 7 ಲಕ್ಷ ಹಾಗೂ ಸಾವಿನ ಸಂಖ್ಯೆ 20 ಸಾವಿರ ಗಡಿ ದಾಟಿರುವ ಹೊರತಾಗಿಯೂ ಪ್ರತಿ 10 ಲಕ್ಷ ಜನಸಂಖ್ಯೆಗೆ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ವಿಶ್ವದಲ್ಲೇ ಕಡಿಮೆಯಿದೆ.

ಯಾವ ದೇಶದಲ್ಲಿ ಎಷ್ಟು ಸಾವು?
ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 505.37 ಮಂದಿ ಕೊರೋನಾಕ್ಕೆ ತುತ್ತಾಗಿದ್ದಾರೆ. ಆದರೆ, ಜಾಗತಿಕ ಸರಾಸರಿ 10 ಲಕ್ಷ ಜನಸಂಖ್ಯೆಗೆ 1,453.25ರಷ್ಟಿದೆ. ಇದೇ ವೇಳೆ ಚಿಲಿಯಲ್ಲಿ 10 ಲಕ್ಷಕ್ಕೆ 15,459,8 ಜನರಿಗೆ ಕೊರೋನಾ ಸೋಂಕು ತಗುಲಿದ್ದರೆ, ಪೆರುವಿನಲ್ಲಿ 9,070 ಜನರು ಸೋಂಕಿಗೆ ತುತ್ತಾಗಿದ್ದಾರೆ. ಅದೇ ರೀತಿ ಭಾರತದಲ್ಲಿ 10 ಲಕ್ಷ ಜನಸಂಖ್ಯೆಗೆ 14.27 ಸಾವು ಸಂಭವಿಸುತ್ತಿದೆ. ಆದರೆ, ಜಾಗತಿಕವಾಗಿ 68.29 ಮಂದಿ ಸಾವಿಗೀಡಾಗುತ್ತಿದ್ದಾರೆಂದು ತಿಳಿದುಬಂದಿದೆ.












Click it and Unblock the Notifications