Breaking: ಭಾರತದಲ್ಲಿ ಒಂದೇ ದಿನ 2,897 ಮಂದಿಗೆ ಕೋವಿಡ್ ಸೋಂಕು
ನವದೆಹಲಿ, ಮೇ 11: ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಮಂಗಳವಾರ 2,288 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವರದಿಯಾದ ಬೆನ್ನಲ್ಲೇ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ.
ಬುಧವಾರದ ಹೆಲ್ತ್ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ 2,897 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ ಕೊರೊನಾ ವೈರಸ್ ಸೋಂಕಿತ 54 ಮಂದಿ ಪ್ರಾಣ ಬಿಟ್ಟಿದ್ದಾರೆ.
ಕಳೆದ ಒಂದು ದಿನದಲ್ಲಿ 2986 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ:
ಭಾರತದಲ್ಲಿ ಇದುವರೆಗೂ 4,25,66,935 ಕೊರೊನಾ ವೈರಸ್ ಸೋಂಕಿತರು ಗುಣಮುಖರಾಗಿದ್ದು, ಗುಣಮುಖ ಶೇಕಡಾವಾರು ಪ್ರಮಾಣ ಶೇ.98.74ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 5,24,157 ಮಂದಿ ಪ್ರಾಣ ಬಿಟ್ಟಿದ್ದು, ಮರಣ ಪ್ರಮಾಣ ಶೇ.1.22ರಷ್ಟಿದೆ.
ಭಾರತದಲ್ಲಿ ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 19,494 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.05ರಷ್ಟಿದೆ.
ಕೋವಿಡ್-19 ಲಸಿಕೆ ವಿತರಣೆಗೆ ವೇಗ ನೀಡಲಾಗುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲೇ 14,83,878 ಮಂದಿಗೆ ಕೊರೊನಾ ವೈರಸ್ ಲಸಿಕೆಯನ್ನು ನೀಡಲಾಗಿದ್ದು, ಈವರೆಗೂ 1,90,67,50,631 ಡೋಸ್ ಲಸಿಕೆಯನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.











Click it and Unblock the Notifications